Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 700 ವಿದ್ಯಾರ್ಥಿಗಳ...

Kalaburagi | 700 ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯಾದ ‘ಪ್ರತಿಭಾ ಫೆಸ್ಟ್-2026’

10 ಶಾಲೆಗಳ ವಿದ್ಯಾರ್ಥಿಗಳಿಂದ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರತಿಭಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ29 Oct 2026 5:23 PM IST
share
Kalaburagi | 700 ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯಾದ ‘ಪ್ರತಿಭಾ ಫೆಸ್ಟ್-2026’

ಕಲಬುರಗಿ: ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜತೆಗೆ ಶಿಸ್ತು, ಏಕತೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಗುಲ್ಬರ್ಗಾ ಧರ್ಮಪ್ರಾಂತ್ಯದ ಶಿಕ್ಷಣ ಸಂಸ್ಥೆ (GDES) ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ‘ಪ್ರತಿಭಾ ಫೆಸ್ಟ್-2026’ ಸಂಭ್ರಮದಿಂದ ಮುಕ್ತಾಯಗೊಂಡಿತು.

ಅ. 24 ಮತ್ತು 25ರಂದು ಕಲಬುರಗಿಯಲ್ಲಿ ನಡೆದ ಉತ್ಸವದಲ್ಲಿ ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 10 ಶಾಲೆಗಳ ಸುಮಾರು 700 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡೆ, ಅಥ್ಲೆಟಿಕ್ಸ್, ಸಂಗೀತ, ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಮೊದಲ ದಿನ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಕ್ರೀಡಾ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ತಮ್ಮ ದೈಹಿಕ ಸಾಮರ್ಥ್ಯ, ಶಿಸ್ತು ಹಾಗೂ ತಂಡದ ಮನೋಭಾವವನ್ನು ಪ್ರದರ್ಶಿಸಿದರು. ಎರಡನೇ ದಿನ ನಡೆದ ಸಂಗೀತ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಗುಲ್ಬರ್ಗಾ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ GDES ಅಧ್ಯಕ್ಷರಾದ ಅತಿವಂದನೀಯ ಡಾ. ರಾಬರ್ಟ್ ಮಿರಾಂಡಾ ಅವರು ಉತ್ಸವ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಏಕತೆಯನ್ನು ಕಾಪಾಡಬೇಕು. ದೇವರು ನೀಡಿದ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ಕರೆ ನೀಡಿದರು. ವ್ಯಕ್ತಿತ್ವ ವಿಕಸನ ಹಾಗೂ ಜವಾಬ್ದಾರಿಯುತ ನಾಗರಿಕರ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿ ಡಾ. ಗಿರೀಶ್ ಯಾದ್ರಮಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು, ಪರಿಶ್ರಮ ಹಾಗೂ ದೃಢಸಂಕಲ್ಪದೊಂದಿಗೆ ಉನ್ನತ ಸಾಧನೆ ಮಾಡಬೇಕು ಎಂದು ಪ್ರೇರೇಪಿಸಿದರು.

GDES ಉಪಾಧ್ಯಕ್ಷ ಫಾ. ಸಂತೋಷ್ ಬಾಪು ಅವರು ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿದರು. ಪ್ರತಿಯೊಬ್ಬರಲ್ಲಿಯೂ ವಿಶಿಷ್ಟ ಪ್ರತಿಭೆ ಅಡಗಿದ್ದು, ಅದನ್ನು ಶ್ರದ್ಧೆ, ಶಿಸ್ತು ಹಾಗೂ ಪರಿಶ್ರಮದಿಂದ ಬೆಳೆಸಿಕೊಳ್ಳಬೇಕು. ಉತ್ತಮ ನಡತೆ, ಸಾಧನೆ ಹಾಗೂ ಸಮಾಜಸೇವೆಯ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಫಾ. ಸ್ಟ್ಯಾನಿ ಲೋಬೋ, ಸಿಸ್ಟರ್ ನಥಾಲಿಯಾ ಹಾಗೂ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣು ಪಪ್ಪಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. GDES ಕಾರ್ಯದರ್ಶಿ ಫಾ. ಸ್ಟೀವನ್ ವೀಗಸ್ ವಂದನಾರ್ಪಣೆ ಸಲ್ಲಿಸಿದರು.

“ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಉತ್ಸವವು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ, ಸೃಜನಶೀಲತೆ, ಪರಸ್ಪರ ಗೌರವ ಹಾಗೂ ಸಹಕಾರ ಮನೋಭಾವವನ್ನು ಬೆಳೆಸುವ ವೇದಿಕೆಯಾಯಿತು.

Tags

studentsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X