Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅ.28, 29ರಂದು ಜಿಲ್ಲಾ...

ಕಲಬುರಗಿ | ಅ.28, 29ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ23 Oct 2026 7:58 PM IST
share
ಕಲಬುರಗಿ | ಅ.28, 29ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅ.28 ಮತ್ತು 29ರಂದು ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ಕಲಬುರಗಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಭರದಿಂದ ಸಾಗಿವೆ.

ಸಮ್ಮೇಳನದ ಯಶಸ್ಸಿಗಾಗಿ ರಚಿಸಲಾಗಿರುವ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ಹಾಗೂ ಗೌರವಾಧ್ಯಕ್ಷರಾದ ಮಾಜಿ ಉಪಮಹಾಪೌರ ನಾಗವೇಣಿ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಸತ್ಕರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಾಗವೇಣಿ ತಿಪ್ಪಣ್ಣಪ್ಪ ಕಮಕನೂರ, ಕನ್ನಡ ಸಾಹಿತ್ಯ ಪರಿಷತ್ತು ಈ ಹಿಂದೆ ಪಂಡಿತರಿಗೆ ಮಾತ್ರ ಸೀಮಿತವಾಗಿತ್ತು. ಆದರೆ, ಈಗ ಜಿಲ್ಲೆಯಲ್ಲಿ ನಮ್ಮಂಥ ಸಾಮಾನ್ಯ ಜನರ ಸಂಸ್ಥೆಯಾಗಿ ಅದನ್ನು ಬೆಳೆಸಿದ ಕೀರ್ತಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರಿಗೆ ಸಲ್ಲುತ್ತದೆ. ಇದು ನಿಜಕ್ಕೂ ಹೆಮ್ಮೆಯ ವಿಷಯವಾಗಿದ್ದು, ಸಮ್ಮೇಳನದ ಯಶಸ್ಸಿಗೆ ಸಹಕರಿಸುವುದಾಗಿ ತಿಳಿಸಿದರು.

ಸ್ವಾಗತ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ಮಾತನಾಡಿ, ಸಮಾಜಕ್ಕೆ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಉತ್ತಮ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ. ಕನ್ನಡಾಭಿಮಾನ ಬೆಳೆಸಿಕೊಂಡು ಕನ್ನಡ ಭಾಷೆಯನ್ನು ಉಳಿಸುವ ಕಾರ್ಯವನ್ನು ಪರಿಷತ್ತು ಕೈಗೊಳ್ಳುತ್ತಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ಭಾಷೆಯ ಅಭಿವೃದ್ಧಿ ಹಾಗೂ ಸಂಸ್ಕೃತಿ ಮತ್ತು ಸಾಹಿತ್ಯದ ರಕ್ಷಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತು ಶ್ರಮಿಸುತ್ತಿದೆ. ತಮ್ಮ ಐದು ವರ್ಷಗಳ ಅವಧಿಯಲ್ಲಿ ಆರು ಜಿಲ್ಲಾ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ದಾಖಲೆ ನಿರ್ಮಿಸಲಾಗಿದೆ ಎಂದರು.

ಸಮ್ಮೇಳನದ ಗೌರವಾಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಇಂಜಿನಿಯರ್ ಡಾ. ಸುರೇಶ ಶರ್ಮಾ ಹಾಗೂ ಕಾರ್ಯಾಧ್ಯಕ್ಷರಾಗಿ ವಾಣಿಜ್ಯ ತೆರಿಗೆ ಇಲಾಖೆಯ ಕಾಶಿನಾಥ ಪಲ್ಲೇರಿ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ರವೀಂದ್ರಕುಮಾರ ಭಂಟನಳ್ಳಿ, ಧರ್ಮರಾಜ ಜವಳಿ, ಹಣಮಂತರಾವ ಪೆಂಚನಪಳ್ಳಿ, ನಾಗರಾಜ ಪಾಟೀಲ, ಅನೀಲಕುಮಾರ ಪಾಟೀಲ ತೇಗಲತಿಪ್ಪಿ, ರವಿಕುಮಾರ ಶಹಾಪೂರಕರ್, ರಾಜು ಕೋಷ್ಟಿ, ಪ್ರೊ. ಬಿ.ಎ. ಪಾಟೀಲ ಮಹಾಗಾಂವ, ಸಂಗಣ್ಣ ಚೋರಗಸ್ತಿ, ಮಲ್ಲಿನಾಥ ಸಂಗಶೆಟ್ಟಿ, ಜಯಶ್ರೀ ಜಮಾದಾರ, ಪ್ರಭುಶೆಟ್ಟಿ ಮುದ್ದಾ, ನಾಗರಾಜ ಪೂಜಾರಿ, ಮಲ್ಲಿಕಾರ್ಜುನ ಯಂಕಂಚಿ, ಚಂದ್ರಕಾಂತ ಸೂರನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X