Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯಾರ್ಥಿಗಳ ಮಾನಸಿಕ...

Kalaburagi | ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು: ಪ್ರೊ.ಬಸವರಾಜ ಕುಬಕಡ್ಡಿ

ವಾರ್ತಾಭಾರತಿವಾರ್ತಾಭಾರತಿ8 July 2026 7:25 PM IST
share
Kalaburagi | ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು: ಪ್ರೊ.ಬಸವರಾಜ ಕುಬಕಡ್ಡಿ
ಸಿಯುಕೆಯಲ್ಲಿ ಹಾಸ್ಟೆಲ್ ಕೇರ್‌ಟೇಕರ್‌ಗಳಿಗೆ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಾಗಾರ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ವಿದ್ಯಾರ್ಥಿ ಕಲ್ಯಾಣ ವಿಭಾಗದ ವತಿಯಿಂದ ಹಾಸ್ಟೆಲ್ ಕೇರ್‌ಟೇಕರ್‌ಗಳಿಗೆ “ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ: ಜಾಗೃತಿ, ಗುರುತಿಸುವಿಕೆ ಮತ್ತು ಪ್ರತಿಕ್ರಿಯೆ” ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾರ್ಥಿ ಕಲ್ಯಾಣ ವಿಭಾಗ ಹಾಗೂ ಕಾನೂನು ವಿಭಾಗದ ಡೀನ್ ಪ್ರೊ. ಬಸವರಾಜ ಎಂ. ಕುಬಕಡ್ಡಿ, ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಸುರಕ್ಷತೆ ಮತ್ತು ಯೋಗಕ್ಷೇಮ ಕಾಪಾಡುವಲ್ಲಿ ಹಾಸ್ಟೆಲ್ ಕೇರ್‌ಟೇಕರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು ಸಿಯುಕೆ ಕ್ಯಾಂಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದು, ವಿವಿಧ ಭಾಷೆ, ಸಂಸ್ಕೃತಿ ಹಾಗೂ ಸಾಮಾಜಿಕ ಹಿನ್ನೆಲೆಯ ವಿದ್ಯಾರ್ಥಿಗಳೊಂದಿಗೆ ಹಾಸ್ಟೆಲ್ ಕೇರ್‌ಟೇಕರ್‌ಗಳು ಕೇವಲ ಆಡಳಿತಾತ್ಮಕ ಜವಾಬ್ದಾರಿಗಳನ್ನಷ್ಟೇ ಅಲ್ಲದೆ ಮಾರ್ಗದರ್ಶಕರು, ಸಲಹೆಗಾರರು ಹಾಗೂ ಪೋಷಕರಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳೊಂದಿಗೆ ಸಹಾನುಭೂತಿ ಮತ್ತು ಗೌರವದಿಂದ ವರ್ತಿಸಬೇಕು. ತರಗತಿಗಳ ಹಾಜರಾತಿ, ರಾತ್ರಿ ವೇಳೆ ಸುರಕ್ಷತೆ, ವಸತಿ ನಿಲಯದಲ್ಲಿನ ಉಪಸ್ಥಿತಿ ಹಾಗೂ ದೈಹಿಕ ಅಥವಾ ಮಾನಸಿಕ ಆರೋಗ್ಯ ಸಮಸ್ಯೆಗಳ ಲಕ್ಷಣಗಳನ್ನು ಗಮನಿಸಿ ಸಮಯೋಚಿತವಾಗಿ ಸ್ಪಂದಿಸುವುದು ಅಗತ್ಯ ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ಸಿಯುಕೆ ಸಲಹೆಗಾರರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಉತ್ತರ ಯು.ವಿ. ಮತ್ತು ಸಂದೇಶ್ ಜೆ.ಆರ್. ಅವರು ಮಾನಸಿಕ ಆರೋಗ್ಯ ಸಮಸ್ಯೆಗಳ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು, ವಿದ್ಯಾರ್ಥಿಗಳೊಂದಿಗೆ ಪರಿಣಾಮಕಾರಿ ಸಂವಹನ ನಡೆಸುವುದು, ಸವಾಲಿನ ಸಂದರ್ಭಗಳನ್ನು ಸಹಾನುಭೂತಿಯಿಂದ ನಿರ್ವಹಿಸುವುದು ಹಾಗೂ ಅಗತ್ಯವಿದ್ದಾಗ ಸೂಕ್ತ ಮಾರ್ಗದರ್ಶನ ಮತ್ತು ನೆರವು ಒದಗಿಸುವ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಸಹಾಯಕ ಡೀನ್ ಡಾ. ಮಲ್ಲಿಕಾರ್ಜುನ್ ಹೂಗಾರ್, ಮುಖ್ಯ ಹಾಸ್ಟೆಲ್ ವಾರ್ಡನ್ ಡಾ. ಬಸವರಾಜ ಸೋಮನಮರಡಿ, ವಿದ್ಯಾರ್ಥಿ ಕಲ್ಯಾಣ ವಿಭಾಗದ ಸಿಬ್ಬಂದಿ ಹಾಗೂ ವಿಶ್ವವಿದ್ಯಾಲಯದ 7 ವಿದ್ಯಾರ್ಥಿಗಳ ಮತ್ತು 5 ವಿದ್ಯಾರ್ಥಿನಿಯರ ವಸತಿ ನಿಲಯಗಳ ಹಾಸ್ಟೆಲ್ ಮೇಲ್ವಿಚಾರಕರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X