ಕಲಬುರಗಿ | ಆರೆಸ್ಸೆಸ್ ನಿಷೇಧದ ಬಗ್ಗೆ ಪ್ರಿಯಾಂಕ್ ಖರ್ಗೆಯಿಂದ ಪತ್ರ ಹಿನ್ನೆಲೆ : ಬಿಜೆಪಿಯಿಂದ 'ಪೋಸ್ಟರ್ ಅಭಿಯಾನ'

ಕಲಬುರಗಿ: ಸರಕಾರಿ, ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿಷೇಧಿಸುವಂತೆ ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕಲಬುರಗಿ ಜಿಲ್ಲೆಯ ಬಿಜೆಪಿ ನಾಯಕರು ನಗರದ ವಿವಿಧೆಡೆ ಪೋಸ್ಟರ್ ಅಂಟಿಸಿ ಆರೆಸ್ಸೆಸ್ ಪರ ಅಭಿಯಾನ ನಡೆಸಿದ್ದಾರೆ.
ಬಿಜೆಪಿ ನಾಯಕರು 'ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರೆಸ್ಸೆಸ್ ನ್ನೂ ಪ್ರೀತಿಸುತ್ತಾರೆ' ಎಂಬ ಪೋಸ್ಟರ್ ಅನ್ನು ಹಲವೆಡೆ ಅಂಟಿಸಿದ್ದಾರೆ. ಆರೆಸ್ಸೆಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಪತ್ರ ಬರೆದಿರುವುದು ಖಂಡನೀಯ. ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕೂಡಲೇ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.
ಪೋಸ್ಟರ್ ಅಭಿಯಾನದಲ್ಲಿ ಮಾಜಿ ಎಂಎಲ್‌ಸಿ ಅಮರನಾಥ್ ಪಾಟೀಲ್, ಶಿವರಾಜ ಪಾಟೀಲ್ ರದ್ದೇವಾಡಗಿ, ಮಹಾದೇವ ಬೆಳಮಗಿ, ಸೇರಿದಂತೆ ಮತ್ತಿತರ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





