Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪರೀಕ್ಷಾ ಅಕ್ರಮ ಖಂಡಿಸಿ...

Kalaburagi | ಪರೀಕ್ಷಾ ಅಕ್ರಮ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 July 2026 11:22 PM IST
share
Kalaburagi | ಪರೀಕ್ಷಾ ಅಕ್ರಮ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಪ್ರತಿಭಟನೆ

ಕಲಬುರಗಿ: ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಶನಿವಾರ ನಗರದ ಜಗತ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಶಿಕ್ಷಣ ಸುಧಾರಣೆಗಾಗಿ ಸೋನಂ ವಾಂಗ್ಚುಕ್ ಹಾಗೂ ವಿದ್ಯಾರ್ಥಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಕಳೆದ ಕೆಲವು ವರ್ಷಗಳಿಂದ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳಿಸುತ್ತಿದ್ದು, ದೇಶದ ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದರು.

ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಕಾಲ ಕಠಿಣ ಪರಿಶ್ರಮದೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೂ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳು ಅವರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇದರಿಂದ ವಿದ್ಯಾರ್ಥಿಗಳಲ್ಲಿ ನಿರಾಶೆ, ಆತಂಕ ಹೆಚ್ಚಾಗುತ್ತಿದ್ದು, ಪರೀಕ್ಷಾ ಒತ್ತಡದಿಂದ ದುರ್ಘಟನೆಗಳು ಸಂಭವಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಶಿಕ್ಷಣ ಸುಧಾರಣೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಅವರೊಂದಿಗೆ ಕೇಂದ್ರ ಸರ್ಕಾರ ತಕ್ಷಣ ಸಂವಾದ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ಅಥವಾ ಸ್ವತಂತ್ರ ಸಂಸ್ಥೆಯ ಮೂಲಕ ಪಾರದರ್ಶಕ ಮತ್ತು ಸಮಯಬದ್ಧ ತನಿಖೆ ನಡೆಸಬೇಕು. ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಭದ್ರತೆ ಹೆಚ್ಚಿಸುವ ಸಮಗ್ರ ಸುಧಾರಣೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪರೀಕ್ಷಾ ಒತ್ತಡ ಎದುರಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಪರಿಣಾಮಕಾರಿ ಸಮಾಲೋಚನಾ ವ್ಯವಸ್ಥೆಯನ್ನು ರೂಪಿಸುವಂತೆ ಹಾಗೂ ಉಪವಾಸ ಸತ್ಯಾಗ್ರಹ ನಿರತ ಸೋನಂ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸರ್ಕಾರ ತಕ್ಷಣ ಮಾತುಕತೆ ನಡೆಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡಿಯಾಳ, ಎಂ.ಬಿ. ಸಜ್ಜನ್, ಅಲ್ತಾಫ್ ಇನಾಮಂದಾರ, ಅರ್ಜುನ್ ಗೊಬ್ಬುರು, ಚೆಂದು ಜಾಧವ್, ಮಲ್ಲಿಕಾರ್ಜುನ ಪಾಟೀಲ, ಮೌಲಾ ಮುಲ್ಲಾ, ದಿಲೀಪ್ ನಾಗೂರೆ, ಕರೆಪ್ಪಾ ಕರಗೊಂಡ, ಸಿದ್ದು ಎಸ್.ಎಲ್, ಸಾಜಿದ್ ಅಹ್ಮದ್, ಶಾಂತಾ ಸರಡಗಿ, ದೇವಾನಂದ ಬಿರದ್ದಾರ, ನಾಗಯ್ಯ ಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

protestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X