Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ...

ಕಲಬುರಗಿ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Oct 2025 9:42 PM IST
share
ಕಲಬುರಗಿ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಪ್ರತಿಭಟನೆ

ಕಲಬುರಗಿ: ಸುಪ್ರೀಂ ಕೋರ್ಟಿನ ಸರ್ವೋಚ್ಚ ನ್ಯಾಯಾಧೀಶರಾದ ಬಿ.ಆರ್.ಗವಾಯಿ ಅವರ ಮೇಲೆ ಆರ್. ಎಸ್. ಎಸ್. ಮನಸ್ಥಿತಿ ಕೋಮುವಾದಿ ವಕೀಲನೊಬ್ಬ ಕೋರ್ಟಿನ ಹಾಲಿನಲ್ಲಿ ಶೂ ಎಸೆದು ಅವಮಾನ ಮಾಡಿರುವುದನ್ನು ಖಂಡಿಸಿ ನಗರದ ದಲಿತ ಸಂಘಟನೆಗಳು ಹಾಗೂ ಮುಸ್ಲಿಂ ಫೋರಮ್ ಒಕ್ಕೂಟದ ವತಿಯಿಂದ ಶಹಾಬಾದ್‌ ನಗರದ ನೆಹರು ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ದಲಿತ ಮುಖಂಡ ಸುರೇಶ ಮೆಂಗನ್, ವಕೀಲ ರಾಜೇಶ್ ಕಿಶೋರ್ ಎಂಬಾತನನ್ನು ಬಂಧಿಸಿ ದೇಶದ್ರೋಹಿ ಎಂದು ಘೋಷಿಸಬೇಕು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ಚಪ್ಪಲಿ ಎಸೆಯುವ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದಾನೆ. ಈ ಘಟನೆಯನ್ನು ಖಂಡಿಸುತ್ತೇವೆ. ಈ ಘಟನೆ ದೇಶಕ್ಕೆ ಮಾಡಿದ ಅವಮಾನವಾಗಿದೆ. ಅವನನ್ನು ಬಂಧಿಸಿ ಮತ್ತೆ ಬಿಡಲಾಗಿದೆ. ಲಡಾಕ್‍ನಲ್ಲಿ ಸೋನಮ್ ವಾಂಗ್‍ಚುಕ್ ಶಾಂತಿಯುತ ಪ್ರತಿಭಟನೆ ಮಾಡಿದರೆ ಅವರನ್ನು ದೇಶದ್ರೋಹಿ ಪಟ್ಟ ಕಟ್ಟಿ ಜೈಲಿಗೆ ಕಳಿಸಿದ್ದಾರೆ. ಆದರೆ, ಸುಪ್ರೀಂ ಕೋರ್ಟಿನ ಸರ್ವೋಚ್ಚ ನ್ಯಾಯಾಧೀಶರ ಮೇಲೆ ಶೂ ಎಸೆದವನಿಗೆ ಬಿಡುಗಡೆ ಮಾಡುತ್ತಾರೆ ಎಂದರೆ ಮೋದಿ ಸರಕಾರ ಕೋಮುವಾದಿ ಮತ್ತು ಜನವಿರೋಧಿ ಸರಕಾರ ಎಂದು ಸಾಬೀತುಪಡಿಸಿದೆ. ಕೂಡಲೇ ಅವನನ್ನು ಮತ್ತೆ ಬಂಧಿಸಬೇಕು. ಅವನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದರು.

ದಸಂಸ ಮುಖಂಡ ಪಿ.ಎಸ್.ಮೇತ್ರೆ ಹಾಗೂ ಜೆಡಿಎಸ್ ಪಕ್ಷದ ಅಧ್ಯಕ್ಷ ಅ.ಸಾಬೀರ ಮಾತನಾಡಿ, ಶಾಸಕಾಂಗ ಮತ್ತು ಕಾರ್ಯಾಂಗದ ಮೇಲೆ ಅಧಿಪತ್ಯ ಸಾಧಿಸುತ್ತಿರುವ ಸಂಘ ಪರಿವಾರದವರು ನ್ಯಾಯಾಂಗವನ್ನೂ ತಮ್ಮ ವಶಕ್ಕೆ ಪಡೆಯಲು ಹುನ್ನಾರ ನಡೆಸಿದ್ದಾರೆ. ಇದೇ ಮಾನಸಿಕತೆಯ ಜನರು ಸಂವಿಧಾನ ಬದಲಿಸುವ, ಮೀಸಲಾತಿ ರದ್ದುಪಡಿಸುವ ಮಾತುಗಳನ್ನೂ ಆಡಿದ್ದಾರೆ. ಅವರ ತಾಳಕ್ಕೆ ತಕ್ಕಂತೆ ಕುಣಿಯದ ನ್ಯಾಯಾಧೀಶರನ್ನು ಬೆದರಿಸಲು ಇಂತಹ ಕೃತ್ಯಗಳನ್ನು ವ್ಯವಸ್ಥಿತವಾಗಿ ಎಸಗಲಾಗುತ್ತಿದೆ. ದೇಶದ ಪ್ರಜಾತಂತ್ರ, ಸಂವಿಧಾನ, ನ್ಯಾಯಾಂಗದ ಅಸ್ತಿತ್ವ ಉಳಿಸಲು ಪ್ರತಿಯೊಬ್ಬರೂ ಧ್ವನಿ ಎತ್ತಬೇಕಿದೆ ಎಂದರು.

ಹಿರಿಯ ಮುಖಂಡ ಡಿಡಿ ಓಣಿ ಮತ್ತು ಮುಹಮ್ಮದ್‌ ಮಸ್ತಾನ ಮಾತನಾಡಿದರು.

ಈ ಸಂದರ್ಭದಲ್ಲಿ ಬಸವರಾಜ ಮಯೂರ, ಸತೀಶ ಕೋಬಾಳಕರ, ಯಲ್ಲಾಲಿಂಗ ಹೈಯ್ಯಾಳಕರ್, ವಸಂತ ಕಾಂಬಳೆ, ನಾಗರಾಜ ವಾಘಮಾರೆ, ಶ್ರೀಧರ ಕೊಲ್ಲೂರ, ಮಹೇಬೂಬ ಪಟೇಲ, ಸಾಜೀದ್‌ ಜಮಾದಾರ, ನರಸಿಂಹಲು ರಾಯಚೂರಕರ್, ನೀರಜ ಶರ್ಮಾ, ಮನೋಹರ, ವಸೀಂ ಅಹ್ಮದ್‌ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X