Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಐಆರ್ ರದ್ದತಿ, ಮುಖ್ಯ...

Kalaburagi | ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

13.41 ಕೋಟಿ ಮತದಾರರ ಹಕ್ಕು ಮರುಸ್ಥಾಪನೆ, ಬರ ಪರಿಹಾರ ಬಿಡುಗಡೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Oct 2026 7:58 PM IST
share
Kalaburagi | ಎಸ್‌ಐಆರ್ ರದ್ದತಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಪಾರದರ್ಶಕ ಪ್ರಕ್ರಿಯೆ ಅನುಸರಿಸದೆ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಲಾದ 13.41 ಕೋಟಿ ನಾಗರಿಕರ ಮತದಾನದ ಹಕ್ಕುಗಳನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯ ಚುನಾವಣಾ ಆಯುಕ್ತರು ತಮ್ಮ ಸಾಂವಿಧಾನಿಕ ಜವಾಬ್ದಾರಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಚುನಾವಣಾ ಆಯುಕ್ತರ ನೇಮಕಾತಿ ಆಯ್ಕೆ ಸಮಿತಿಯಲ್ಲಿ ಪ್ರಧಾನಮಂತ್ರಿಯವರು ನಾಮನಿರ್ದೇಶನ ಮಾಡುವ ಸಚಿವರ ಬದಲಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಸೇರಿಸುವಂತೆ 2023ರ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.

ಚುನಾವಣೆಯಲ್ಲಿ ಹಣಬಲ ಮತ್ತು ತೋಳ್ಬಲದ ಪ್ರಭಾವವನ್ನು ತಡೆಗಟ್ಟಲು, ಪ್ರಮಾಣಾನುಗುಣ ಪ್ರಾತಿನಿಧ್ಯ ಪದ್ಧತಿಯನ್ನು ಜಾರಿಗೆ ತರಲು ಹಾಗೂ ಚುನಾವಣೆಗಳಿಗೆ ಸರ್ಕಾರಿ ಧನಸಹಾಯ ಒದಗಿಸಲು ಸಮಗ್ರ ಚುನಾವಣಾ ಸುಧಾರಣೆಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲ ವ್ಯಕ್ತಪಡಿಸಿದ ಮುಖಂಡರು, ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ದೌರ್ಜನ್ಯ ಹಾಗೂ ಕಿರುಕುಳ ನಡೆಸಿದ್ದಾರೆ ಎಂಬ ಆರೋಪಗಳನ್ನು ಖಂಡಿಸಿದರು. ವಿದ್ಯಾರ್ಥಿನಿಯರು ಮತ್ತು ಪತ್ರಕರ್ತೆಯರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಾಂತಿಯುತ ಪ್ರತಿಭಟನೆ ಸಂವಿಧಾನಬದ್ಧ ಹಕ್ಕಾಗಿದ್ದು, ಪ್ರತಿಭಟನಾಕಾರರ ವಿರುದ್ಧ ಬಲಪ್ರಯೋಗ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ನೀಡಲಾಗಿದ್ದ ಅನುಮತಿಯನ್ನು ರದ್ದುಗೊಳಿಸಿದ ಆದೇಶವನ್ನು ಹಿಂಪಡೆಯಬೇಕು. ಪ್ರತಿಭಟನಾಕಾರರನ್ನು ಕಾನೂನುಬಾಹಿರವಾಗಿ ಗೃಹಬಂಧನದಲ್ಲಿಡುವ ಕ್ರಮಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನೂ ಪ್ರಸ್ತಾಪಿಸಿದ ಪ್ರತಿಭಟನಾಕಾರರು, ಕೂಡಲೇ ಸಮರ್ಪಕ ಬರ ಪರಿಹಾರ ಬಿಡುಗಡೆ ಮಾಡಬೇಕು. ಗ್ರಾಮೀಣ ಜನರಿಗೆ ವರ್ಷವಿಡೀ ಉದ್ಯೋಗ ಒದಗಿಸಬೇಕು ಹಾಗೂ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಮಹೇಶ್ ಎಸ್.ಬಿ., ಭೀಮಾಶಂಕರ ಮಾಡಿಯಾಳ, ಮೌಲಾ ಮುಲ್ಲಾ, ಅರ್ಜುನ್ ಭದ್ರೆ, ಉಮಾಪತಿ ಮಾಲಿಪಾಟೀಲ, ನಾಗೇಂದ್ರಪ್ಪ ಥಂಬೆ, ಶಾಂತಾ ಘಂಟಿ, ಪ್ರಭುದೇವ ಯಳಸಂಗಿ, ಭೀಮಶೆಟ್ಟಿ ಯೆಂಪಳ್ಳಿ, ಸಾಜೀದ್ ಅಹ್ಮದ್ ಡಿಗ್ಗಾವ್‌ಕರ್, ಮರೆಪ್ಪ ಹಳ್ಳಿ, ಎಸ್.ಆರ್. ಕೊಲ್ಲೂರು, ಅರ್ಜುನ್ ಗೊಬ್ಬೂರು, ಪಾಂಡುರಂಗ ಮಾವಿನಕರ್, ಸುಧಾಮ ಧನ್ನಿ, ಪದ್ಮಿಣಿ ಕಿರಣಿಗಿ, ಇಮಾಮ್‌ಸಾಬ್ ಹಾಗೂ ಪ್ರಮೋದ ಪಂಚಾಳ್ ಸೇರಿದಂತೆ ವಿವಿಧ ಸಂಘಟನೆಗಳ ಹಲವು ಮುಖಂಡರು ಪಾಲ್ಗೊಂಡಿದ್ದರು.

Tags

Election CommissionerSIRprotestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X