Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಕ್ರಮ ಮದ್ಯ ಮಾರಾಟ...

ಕಲಬುರಗಿ | ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Jun 2025 8:16 PM IST
share
ಕಲಬುರಗಿ | ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಪಟ್ಟಣ ಸೇರಿದಂತೆ ಪ್ರತಿಯೊಂದು ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಅನೇಕ ಕುಟುಂಬಗಳು ಬೀದಿಗೆ ಬರುತ್ತಿವೆ. ಸರಕಾರ ಹಾಗೂ ಅಧಿಕಾರಿಗಳು ಗಮನಹರಿಸಿ ಅಕ್ರಮ ಮಧ್ಯ ಮಾರಾಟಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು, ಅಲ್ಲದೆ ಇತ್ತೀಚೆಗೆ ದಾಖಲಿಸಿದ್ದ ಸುಳ್ಳು ಪ್ರಕರಣವನ್ನು ಕೂಡಲೇ ಕೈಬೀಡಬೇಕೆಂದು ಆಗ್ರಹಿಸಿ, ಜೇವರ್ಗಿಯ ವಿವಿಧ ಸಂಘಟನೆಗಳಿಂದ ಒತ್ತಾಯಿಸಲಾಯಿತು.

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾಮಾಜಿಕ ನ್ಯಾಯ ಮತ್ತು ಜನಪರ ಹೋರಾಟಗಾರರ ವೇದಿಕೆ ಹಾಗೂ ತಾಲೂಕಿನ ವಿವಿ ಸಂಘಟನೆಗಳ ಮುಖಾಂತರ ಮಂಗಳವಾರ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ ರವಿಚಂದ್ರ ಗುತ್ತೆದಾರ ಅವರು, ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದೆ. ಗ್ರಾಮಗಳಲ್ಲಿ ಕಿರಾಣಾ ಅಂಗಡಿ, ಹೊಟೆಲ್, ಪಾನ್ ಶಾಪ್, ಢಾಭಾಗಳಲ್ಲಿ ಹಾಗೂ ಕೆಲವು ಮನೆಗಳಲ್ಲು ಕೂಡ ಅಕ್ರಮ ಮದ್ಯ ಮಾರಾಟವನ್ನು ನಡೆಸಲಾಗುತ್ತಿದೆ. ತಾಲೂಕಿನ ಕೋಣಸಿರಸಗಿ, ಮಂದೆವಾಲ, ರೇವನೂರ, ಕೋಳಕೂರ, ಆಲೂರ, ಚಿಗರಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟವು ಯಾರ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಕೂಡಲೇ ಸರಕಾರ ಇದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮಾತನಾಡಿ, ಜೇವರ್ಗಿ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯುವಂತೆ ಹೋರಾಟ ಮಾಡಿದವರ ಮೇಲೆ ಪ್ರಕರಣ ದಾಖಲಿಸುವುದು ಸರಿಯಲ್ಲ. ಕೂಡಲೇ ಪ್ರಕರಣವನ್ನು ಹಿಂಪಡೆಯಬೇಕು. ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶಿವರಾಜ ಪಾಟೀಲ್ ರದ್ದೆವಾಡಗಿ, ಬಸವರಾಜ ಪಡಕೋಟಿ, ಚಂದ್ರಶೆಖರ ಹರನಾಳ, ಭಿಮರಾಯ ನಗನೂರ, ಶ್ರವಣಕುಮಾರ ನಾಯಕ, ಬಸವರಾಜ ಬಾಗೇವಾಡಿ, ಸತೀಶ ಜಾಹಗಿರದಾರ, ಪರಮೇಶ್ವರ ಬಿರಾಳ, ಭಿಮಾಶಂಕರ್ ಬಿಲ್ಲಾಡ, ಚಂದ್ರಶೇಖರ ಮಲ್ಲಾಬಾದ, ಗೀರಿಶ ತುಂಬಗಿ, ಸಿದ್ರಾಮ ಕಟ್ಟಿ, ರವಿ ಕುಳಗೇರಿ, ಬಸವರಾಜ ಇಂಗಳಗಿ, ಮಲ್ಲಣಗೌಡ ನಂದಿಹಳ್ಳಿ, ಮಾಹಾಂತೇಶ ಆದಿಮನಿ, ಮಾಹಂತಗೌಡ ನಂದಿಹಳ್ಳಿ, ಸಿದ್ದು ಕೇರೂರ, ಶ್ರೀಹರಿ ಕರಕಳ್ಳಿ, ಸೈಬಗೌಡ ಯಡ್ರಾಮಿ, ಶರಣಗೌಡ ಹಾಲಗಡ್ಲಾ, ವಿಶ್ವರಾಧ್ಯ ಗಂವ್ಹಾರ, ಮಾಪಣ್ಣ ಕಟ್ಟಿ, ಇಬ್ರಾಹಿಂ ಪಟೇಲ್, ಮಲ್ಲಿಕಾರ್ಜುನ ಬಿರಾದಾರ, ಪರಮಾನಂದ ಯಲಗೋಡ, ದೇವಕ್ಕಿ ಯಾಳವಾರ, ಬಾಗೇಶ ಸರನಾಳ, ಭೀಮು ಖಾದ್ಯಾಪೂರ, ಪ್ರಕಾಶ ಮಾರಡಗಿ, ಸೇರಿದಂತೆ ಅನೇಕ ಹೋರಾಟಗಾರರು ಹಾಗೂ ವಿವಿಧ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X