Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 371-ಜೆ ಕಲಂ ಸಮರ್ಪಕ...

Kalaburagi | 371-ಜೆ ಕಲಂ ಸಮರ್ಪಕ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ25 Nov 2026 7:55 PM IST
share
Kalaburagi | 371-ಜೆ ಕಲಂ ಸಮರ್ಪಕ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ : ಸಂವಿಧಾನದ 371-ಜೆ ಕಲಂ ಅನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿ, ಕಲ್ಯಾಣ ಕರ್ನಾಟಕ 371-ಜೆ ಕಲಂ ಕಾನೂನು ತಿದ್ದುಪಡಿ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಮಿತಿಯ ಜಿಲ್ಲಾಧ್ಯಕ್ಷ ದಿಲೀಪ್ ವಿ. ಕಿರಸಾವಳಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಬಳಿಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಸಂವಿಧಾನದ 371-ಜೆ ಕಲಂ ಜಾರಿಯಾಗಿ ಒಂದು ದಶಕ ಕಳೆದರೂ, ಅದರ ಪೂರ್ಣ ಪ್ರಮಾಣದ ಪ್ರಯೋಜನ ಜನರಿಗೆ ದೊರೆಯುತ್ತಿಲ್ಲ ಎಂದು ದೂರಲಾಗಿದೆ.

ಶಿಕ್ಷಣ, ಆರೋಗ್ಯ, ಕಂದಾಯ ಸೇರಿದಂತೆ ಬಹುತೇಕ ಸರ್ಕಾರಿ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ವಿಶೇಷವಾಗಿ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಮಕ್ಕಳ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. 371-ಜೆ ಅಡಿಯಲ್ಲಿ ಮೀಸಲಿರುವ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂಬ ಕಲಂನ ಮೂಲ ಉದ್ದೇಶವೇ ಈಡೇರುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿಯನ್ನು 15 ದಿನಗಳೊಳಗೆ ಪ್ರಕಟಿಸಬೇಕು. 371-ಜೆ ಅಡಿಯಲ್ಲಿ ಮೀಸಲಿರುವ ಶಿಕ್ಷಕರು, ವೈದ್ಯರು, ದಾದಿಯರು, ಗ್ರಾಮ ಲೆಕ್ಕಿಗರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಎಲ್ಲ ಖಾಲಿ ಹುದ್ದೆಗಳನ್ನು ಮುಂದಿನ ಮೂರು ತಿಂಗಳೊಳಗೆ ಭರ್ತಿ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಅಲ್ಲದೆ, ಕಲ್ಯಾಣ ಕರ್ನಾಟಕದ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ, 371-ಜೆ ಕಲಂ ಅನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371-ಜೆ ಕಲಂ ಕೇವಲ ಕಾಗದದ ಮೇಲಿನ ಆಶ್ವಾಸನೆಯಾಗಿ ಉಳಿಯಬಾರದು. ಈ ವಿಷಯದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಲಾಗಿದೆ.

ಪ್ರತಿಭಟನೆಯಲ್ಲಿ ಸಮಿತಿಯ ಉಪಾಧ್ಯಕ್ಷ ಅಸ್ಲಾಂ ಶೇಖ್, ಪ್ರಧಾನ ಕಾರ್ಯದರ್ಶಿ ಮಹೇಶ ವಿ. ಪರಹತಾಬಾದ್, ಸಂಘಟನಾ ಕಾರ್ಯದರ್ಶಿ ಸುನೀಲಕುಮಾರ ಚವಾಣ್, ಖಜಾಂಚಿ ಅಂಕುಶ ಗರಡಕರ್, ಕಾರ್ಯದರ್ಶಿ ಜಮೀಲ್ ಅಹ್ಮದ್, ಸಂಚಾಲಕರಾದ ವಿಜಯಕುಮಾರ ಮಠಪತಿ, ಜಗನ್ನಾಥ ಸುತಾರ, ಭವಾನಿ ಚವಾಣ್, ಪ್ರವೀಣಕುಮಾರ ಬಿರಾದಾರ ಮತ್ತಿತರರು ಪಾಲ್ಗೊಂಡಿದ್ದರು.

Tags

KalaburagiProtestArticle 371-J
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X