Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಐಆರ್ ರದ್ದು,...

Kalaburagi | ಎಸ್‌ಐಆರ್ ರದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನ.1ರಂದು ದೆಹಲಿಯಲ್ಲಿ ಪ್ರತಿಭಟನೆ

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತಗಳ್ಳತನ : ಜಿ.ಡಿ.ಸೀಲಂ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Oct 2026 2:29 PM IST
share
Kalaburagi | ಎಸ್‌ಐಆರ್ ರದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನ.1ರಂದು ದೆಹಲಿಯಲ್ಲಿ ಪ್ರತಿಭಟನೆ

ಕಲಬುರಗಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನವೆಂಬರ್ 1ರಂದು ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ‘ವೋಟ್ ಬಚಾವೋ, ದೇಶ ಬಚಾವೋ’ ಅಭಿಯಾನದ ವೀಕ್ಷಕ ಜಿ.ಡಿ.ಸೀಲಂ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವುದು, ಮತದಾರರನ್ನು ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಸ್ಥಳಾಂತರಿಸುವುದು ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು. ದೇಶದ ವಿವಿಧ ಭಾಗಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿರುವ ಕುರಿತು ಪ್ರಶ್ನೆಗಳು ಎದ್ದಿವೆ. ಆದರೆ, ಈ ಬಗ್ಗೆ ಸಂಬಂಧಪಟ್ಟವರು ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಹೇಳಿದರು.

ದೇಶದಲ್ಲಿ ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತ ಕಾರ್ಯನಿರ್ವಹಣೆಯ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯ ಬದಲಿಗೆ ಕೇಂದ್ರ ಸಚಿವರನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಸೇರಿಸುವ ವ್ಯವಸ್ಥೆ ರೂಪಿಸಲಾಗಿದೆ. ಅಲ್ಲದೆ, ಚುನಾವಣಾ ಆಯುಕ್ತರು ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗದಂತಹ ಕಾನೂನನ್ನು ರೂಪಿಸಲಾಗಿದೆ ಎಂದು ಟೀಕಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿನ ಬೆಳವಣಿಗೆಗಳು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವವನ್ನು ರಕ್ಷಿಸುವ ಉದ್ದೇಶದಿಂದ ಅಕ್ಟೋಬರ್ 2ರಿಂದ 8ರವರೆಗೆ ‘ಸೇವ್ ಡೆಮಾಕ್ರಸಿ’ ಅಭಿಯಾನ ನಡೆಸಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನಾ ಚಳವಳಿಯನ್ನು ಹಳ್ಳಿಹಳ್ಳಿಗೂ ವಿಸ್ತರಿಸಲಾಗುತ್ತಿದೆ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸಿ ಮತದಾನ ನಡೆಸಲಾಗುತ್ತಿದೆ. ಇದೇ ಮಾದರಿಯಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನೂ ಬ್ಯಾಲೆಟ್ ಪೇಪರ್ ಮೂಲಕ ನಡೆಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಸ್ಥಳಾಂತರಿಸುವುದು ಹಾಗೂ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಮೂಲಕ ಮತಗಳ್ಳತನ ನಡೆಸಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಪ್ರಶ್ನಿಸಿದರೂ ಈವರೆಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಹೇಳಿದರು.

ಮತದಾರರ ಮಾಹಿತಿಯ ನಿರ್ವಹಣೆ ಮತ್ತು ದತ್ತಾಂಶ ನಿಯಂತ್ರಣದ ವಿಚಾರದಲ್ಲಿಯೂ ಪಾರದರ್ಶಕತೆಯ ಕೊರತೆಯಿದೆ ಎಂದು ಆರೋಪಿಸಿದ ಅವರು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಲು ಅವಕಾಶವಿಲ್ಲದಂತೆ ಮಾಡಲಾಗಿದೆ ಎಂದರು. ಬಿಜೆಪಿ ನಾಯಕರ ಪ್ರಭಾವದಿಂದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಗಂಭೀರ ಆರೋಪಗಳಿದ್ದು, ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜಸ್ಥಾನದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವುದಾಗಿ ಹೇಳಿಕೊಳ್ಳುವ ಬಿಜೆಪಿಗರು, ದೇಶಾದ್ಯಂತ ಇದೇ ಮಾದರಿಯಲ್ಲಿ ಚುನಾವಣೆ ನಡೆಸಲು ಮುಂದಾಗಲಿ. ಆಗ ಅವರ ಗೆಲುವಿನ ಪ್ರಮಾಣ ಎಷ್ಟಿರುತ್ತದೆ ಎಂಬುದು ಗೊತ್ತಾಗಲಿದೆ ಎಂದು ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕಿರಣ್ ದೇಶಮುಖ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಶಾಸಕ ಅಲ್ಲಮಪ್ರಭು ಪಾಟೀಲ, ಎಂ.ವೈ. ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜಗದೇವ್ ಗುತ್ತೇದಾರ್, ಅರವಿಂದ ಅರಳಿ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ರೇವುನಾಯಕ್ ಬೆಳಮಗಿ, ಲಕ್ಷ್ಮೀಪತಿ, ಅಕ್ಕಮಹಾದೇವಿ, ಸುಭಾಷ್ ರಾಠೋಡ್, ರಾಜಗೋಪಾಲ ರೆಡ್ಡಿ ಹಾಗೂ ಪುಂಡಲೀಕ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Tags

SIRDelhiprotestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X