Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪಿಯುಸಿ ವಿದ್ಯಾರ್ಥಿ ಜೀವನ...

Kalaburagi | ಪಿಯುಸಿ ವಿದ್ಯಾರ್ಥಿ ಜೀವನ ಯಶಸ್ಸಿನ ಭದ್ರ ಬುನಾದಿ: ಶಶೀಲ್ ನಮೋಶಿ

ವಾರ್ತಾಭಾರತಿವಾರ್ತಾಭಾರತಿ25 May 2026 5:00 PM IST
share
Kalaburagi | ಪಿಯುಸಿ ವಿದ್ಯಾರ್ಥಿ ಜೀವನ ಯಶಸ್ಸಿನ ಭದ್ರ ಬುನಾದಿ: ಶಶೀಲ್ ನಮೋಶಿ

ಕಲಬುರಗಿ: 2026-27ನೇ ಶೈಕ್ಷಣಿಕ ಸಾಲಿನ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಅಂಗವಾಗಿ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಹಾಗೂ ಆದರ್ಶನಗರ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ಶೈಕ್ಷಣಿಕ ಸಮಸ್ಯೆಗಳು ಹಾಗೂ ಇಲಾಖೆಯ ಗೊಂದಲಕಾರಿ ಆದೇಶಗಳ ನಡುವೆಯೂ ಈ ಬಾರಿಯ ಪಿಯುಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿದ ಉಪನ್ಯಾಸಕರು ನಿಜಕ್ಕೂ ಅಭಿನಂದನೆಗೆ ಅರ್ಹರು ಎಂದು ಹೇಳಿದರು.

“ಉಪನ್ಯಾಸಕರ ನಿರಂತರ ಪರಿಶ್ರಮ, ಬೋಧನಾ ಕೌಶಲ್ಯ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ನೀಡಿದ ಮಾರ್ಗದರ್ಶನದಿಂದ ಉತ್ತಮ ಫಲಿತಾಂಶ ಸಾಧ್ಯವಾಗಿದೆ. ರಾಜ್ಯದಲ್ಲಿ ಸರ್ಕಾರಿ ಕಾಲೇಜುಗಳ ಸಾಧನೆ ಮತ್ತು ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣದಲ್ಲಿ ಕಂಡುಬಂದ ಏರಿಕೆ ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಉಪನ್ಯಾಸಕರ ಕೊರತೆಯಿದ್ದರೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, “ಕಲಾ ವಿಭಾಗದಲ್ಲಿ ರಾಜ್ಯ ಪ್ರಥಮ ಸ್ಥಾನ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ರಾಜ್ಯದ ಟಾಪ್-10 ರ‍್ಯಾಂಕ್ ಪಟ್ಟಿಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯ. ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮತ್ತು ಜಾಣ್ಮೆಯನ್ನು ಈ ಬಾರಿಯ ಫಲಿತಾಂಶದ ಮೂಲಕ ಸ್ಪಷ್ಟವಾಗಿ ತೋರಿಸಿದ್ದಾರೆ ಎಂದು ಹೇಳಿದರು.

ನಂತರ ವಿದ್ಯಾರ್ಥಿಗಳಿಗೆ ಪುಷ್ಪ ವಿತರಿಸುವ ಮೂಲಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಬಾಲಿಕೆಯರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ದೇವನಗೌಡ ಪಾಟೀಲ್, ಆದರ್ಶನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಜು ಗಂಗಾಧರ್, ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ. ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ ಸೇರಿದಂತೆ ಎರಡೂ ಕಾಲೇಜುಗಳ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Tags

studentPUCKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X