Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪಂಪ್‌ಸೆಟ್ ಕೇಬಲ್ ಕಳ್ಳತನ...

Kalaburagi | ಪಂಪ್‌ಸೆಟ್ ಕೇಬಲ್ ಕಳ್ಳತನ ಪ್ರಕರಣ : 36 ರೈತರಿಗೆ ಕೇಬಲ್ ಮರಳಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ29 Oct 2026 9:58 PM IST
share
Kalaburagi | ಪಂಪ್‌ಸೆಟ್ ಕೇಬಲ್ ಕಳ್ಳತನ ಪ್ರಕರಣ : 36 ರೈತರಿಗೆ ಕೇಬಲ್ ಮರಳಿಸಿದ ಪೊಲೀಸರು

ಕಲಬುರಗಿ : ಬರಗಾಲದ ಸಂಕಷ್ಟದಲ್ಲಿ ಬೆಳೆ ಉಳಿಸಿಕೊಳ್ಳಲು ಹೋರಾಡುತ್ತಿರುವ ರೈತರಿಗೆ ಪಂಪ್‌ಸೆಟ್‌ಗಳ ಮೋಟರ್ ಕೇಬಲ್ ಕಳ್ಳತನವಾಗುವುದು ಮತ್ತಷ್ಟು ಆರ್ಥಿಕ ಹೊರೆಯಾಗುತ್ತದೆ. ಇಂತಹ ಸಂದರ್ಭದಲ್ಲಿ ಕಳ್ಳತನ ಪ್ರಕರಣವನ್ನು ಭೇದಿಸಿ 36 ರೈತರಿಗೆ ಕೇಬಲ್‌ಗಳನ್ನು ಮರಳಿಸುವ ಮೂಲಕ ಪೊಲೀಸ್ ಸಿಬ್ಬಂದಿ ರೈತರಿಗೆ ನೆರವಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಿಪಿಐ ಲಖನ್ ಮಸಗುಪ್ಪಿ ಹೇಳಿದರು.

ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಗುನ್ನೆ ನಂ. 93/26ರ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಮೂವರು ಆರೋಪಿಗಳನ್ನು ಪತ್ತೆಹಚ್ಚಿ, ಅವರಿಂದ ಕಳವು ಮಾಡಿದ್ದ ಕೇಬಲ್‌ಗಳನ್ನು ವಶಪಡಿಸಿಕೊಂಡು ರೈತರಿಗೆ ಮರಳಿಸಿದ್ದಾರೆ ಎಂದು ಅವರು ತಿಳಿಸಿದರು.

ಪಿಎಸ್‌ಐ ಸಂಗೀತಾ ಸಿಂಧೆ ಮಾತನಾಡಿ, ತೆಲ್ಲೂರ, ಘೂಳನೂರ, ಸಿರಸಗಿ, ಬಂದರವಾಡ, ಸಾಗನೂರ, ಚಿಣಮಗೇರಾ, ಹೂವಿನಹಳ್ಳಿ, ದೇವಲ ಗಾಣಗಾಪುರ, ಹಾವನೂರ ಹಾಗೂ ಗೊಬ್ಬೂರ (ಬಿ) ಗ್ರಾಮಗಳ ರೈತರು ತಮ್ಮ ಹೊಲಗಳಲ್ಲಿನ ಪಂಪ್‌ಸೆಟ್‌ಗಳ ಕೇಬಲ್ ಕಳ್ಳತನವಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡು, ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಬ್ಬಂದಿ ತಂಡದೊಂದಿಗೆ ತನಿಖೆ ನಡೆಸಿದಾಗ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದರು. ವಿಚಾರಣೆ ವೇಳೆ ಅವರು ಇತರ ರೈತರ ಕೇಬಲ್‌ಗಳನ್ನೂ ಕದ್ದಿರುವುದಾಗಿ ಒಪ್ಪಿಕೊಂಡಿದ್ದರು. ಪ್ರಕರಣ ದಾಖಲಾಗದಿದ್ದರೂ ಕಳ್ಳತನದ ಬಗ್ಗೆ ಮಾಹಿತಿ ನೀಡಿದ ರೈತರ ವಿವರಗಳನ್ನು ಪರಿಶೀಲಿಸಿ, ಅವರಿಗೆ ಸೇರಿದ ಕೇಬಲ್‌ಗಳನ್ನು ಮರಳಿಸಲಾಗಿದೆ ಎಂದು ಹೇಳಿದರು.

ಎಸ್‌ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್‌ಪಿ ಮಹೇಶ ಮೇಘಣ್ಣನವರ, ಡಿವೈಎಸ್‌ಪಿ ತಮ್ಮರಾಯ ಪಾಟೀಲ್ ಹಾಗೂ ಸಿಪಿಐ ಲಖನ್ ಮಸಗುಪ್ಪಿ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ಸಂಗೀತಾ ಸಿಂಧೆ ಮತ್ತು ಶ್ರೀದೇವಿ ಕಟ್ಟಿ ಕಾರ್ಯಾಚರಣೆ ನಡೆಸಿದರು. ಪೊಲೀಸ್ ಸಿಬ್ಬಂದಿಗಳಾದ ಶಿವಯ್ಯ, ಆನಂದ, ಯಲ್ಲಪ್ಪ, ಮಕ್ತುಂ ಪಟೇಲ್, ಅಣ್ಣಪ್ಪ, ವಿಠ್ಠಲ್, ಚಂದ್ರಶಾ, ಸಂಗಣ್ಣ, ಬಲರಾಮ, ಸಂತೋಷ, ಕಾಶಿನಾಥ ಹಾಗೂ ಭಾಗಣ್ಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸರ ಕಾರ್ಯಕ್ಕೆ ರೈತರ ಮೆಚ್ಚುಗೆ :

ಹೊಲಗಳಲ್ಲಿನ ಕೇಬಲ್ ಕಳ್ಳತನದಿಂದ ಬೆಳೆಗಳಿಗೆ ನೀರು ಹಾಯಿಸಲು ತೊಂದರೆಯಾಗುವುದರ ಜೊತೆಗೆ ಹೊಸ ಕೇಬಲ್ ಖರೀದಿಸುವ ಹೆಚ್ಚುವರಿ ವೆಚ್ಚವೂ ರೈತರ ಮೇಲೆ ಬೀಳುತ್ತದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಪೊಲೀಸರು ಕಳವು ಮಾಡಿದ ಕೇಬಲ್‌ಗಳನ್ನು ಪತ್ತೆಹಚ್ಚಿ ಮರಳಿಸಿರುವುದು ದೊಡ್ಡ ನೆರವಾಗಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯ ತ್ವರಿತ ಸ್ಪಂದನೆ ಹಾಗೂ ಸಿಬ್ಬಂದಿಯ ಪರಿಶ್ರಮದಿಂದ ರೈತರಿಗೆ ನ್ಯಾಯ ದೊರೆತಿದ್ದು, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X