Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬೆಂಬಲ ಬೆಲೆಯಡಿ ಹೆಸರು ಕಾಳು,...

ಕಲಬುರಗಿ | ಬೆಂಬಲ ಬೆಲೆಯಡಿ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಡಿಸಿ ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ6 Oct 2025 9:47 PM IST
share
ಕಲಬುರಗಿ | ಬೆಂಬಲ ಬೆಲೆಯಡಿ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: 2025-26ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ (FAQ) ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಖರೀದಿಸಲು ಸರ್ಕಾರವು ಸೆ.25ರ 2025 ರಂದು ಹಾಗೂ ಸೋಯಾಬಿನ್ ಖರೀದಿಸಲು ಸೆ.29ರ 2025 ರಂದು ಆದೇಶ ಹೊರಡಿಸಿದ್ದು, ಅದರಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾಮಟ್ಟದ ಟಾಸ್ಕ್ಫೋರ್ಸ್ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಈ ಕೆಳಕಂಡಂತೆ ಕೃಷಿ ಉತ್ಪನ್ನಗಳ ಖರೀದಿಗೆ ಖರೀದಿ ಕೇಂದ್ರಗಳನ್ನು ತೆರೆದು ಖರೀದಿಸಲು ಅನುಮತಿ ನೀಡಲಾಗಿದ್ದು, ಕಲಬುರಗಿ ಜಿಲ್ಲೆಯ ರೈತ ಭಾಂದವರು ಇದರ ಸದುಪಯೋಗ ಪಡೆದುಕೊಂಡು ತಮ್ಮ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ (PACS) ಹಾಗೂ ರೈತ ಉತ್ಪಾದಕ ಸಂಘ (FPO) ಗಳಿಗೆ ಭೇಟಿ ನೀಡಿ ತಾವು ಬೆಳೆದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗು ಸೋಯಾಬೀನ ಮಾರಾಟಕ್ಕೆ ನೋಂದಾಯಿಸಿಕೊಂಡು ಮಾರಾಟ ಮಾಡಬೇಕೆಂದು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಹೆಸರು ಕಾಳನ್ನು ಪ್ರತಿ ಕ್ವಿಂಟಾಲ್ಗೆ ಖರೀದಿ ದರ 8,768 ರೂ. ರಂತೆ ಪ್ರತಿ ಎಕರೆಗೆ 3 ಕ್ವಿಂಟಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಖರೀದಿಸಲಾಗುತ್ತದೆ. ಉದ್ದಿನ ಕಾಳು ಪ್ರತಿ ಕ್ವಿಂಟಾಲ್ಗೆ ದರ 7,800 ರೂ. ರಂತೆ ಪ್ರತಿ ಎಕರೆಗೆ 5 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 30 ಕ್ವಿಂಟಾಲ್ವರೆಗೆ ಖರೀದಿಸಲಾಗುತ್ತದೆ. ಸೂರ್ಯಕಾಂತಿ ಪ್ರತಿ ಕ್ವಿಂಟಾಲ್ಗೆ ದರ 7,721 ರೂ.ರಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ವರೆಗೆ ಖರೀದಿಸಲಾಗುತ್ತದೆ. ಸೋಯಾಬೀನ್ ಪ್ರತಿ ಕ್ವಿಂಟಾಲ್ಗೆ 5,328 ರೂ.ರಂತೆ ಪ್ರತಿ ಎಕರೆಗೆ 5 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುತ್ತದೆ.

ಹೆಸರು ಕಾಳು, ಉದ್ದಿನ ಕಾಳು ಹಾಗೂ ಸೂರ್ಯಕಾಂತಿ ಖರೀದಿಸಲು ರೈತರ ನೋಂದಣಿ ಕಾರ್ಯವನ್ನು ಡಿ.13ರ 2025 ರವರೆಗೆ ಹಾಗೂ ಖರೀದಿ ಪ್ರಕ್ರಿಯೆಯು ಡಿ.23ರ 2025 ರವರೆಗೆ ಗೊಳ್ಳಲಾಗುತ್ತದೆ. ಅದೇ ರೀತಿ ಸೋಯಾಬೀನ್ ಖರೀದಿಸಲು ರೈತರ ನೋಂದಣಿ ಕಾರ್ಯವನ್ನು ಡಿ.17ರ 2025 ರವರೆಗೆ ಹಾಗೂ ಖರೀದಿ ಪ್ರಕ್ರಿಯೆಯನ್ನು ಡಿ.27ರ 2025 ರವರೆಗೆ ಕೈಗೊಳ್ಳಲಾಗುತ್ತದೆ. ರೈತರಿಂದ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ಡಿ.ಬಿ.ಟಿ. (DBT) ಪೋರ್ಟಲ್ ಮೂಲಕ ಪಾವತಿಸಲಾಗುತ್ತದೆ.

ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 67 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮೂಲಕ (PACS) ಹಾಗೂ ರೈತ ಉತ್ಪಾದಕ ಸಂಘ (FPO) ಗಳ ಮೂಲಕ ಹೆಸರು ಕಾಳು ಹಾಗೂ ಉದ್ದಿನ ಕಾಳು ಒಟ್ಟು 59 (PACS) ಹಾಗೂ (FPO) ಗಳ ಮೂಲಕ ಸೂರ್ಯಕಾಂತಿ ಮತ್ತು 47 (PACS) ಹಾಗೂ (FPO) ಗಳ ಮೂಲಕ ಸೋಯಾಬೀನ ಖರೀದಿ ಮಾಡಲಾಗುತ್ತದೆ.

ನಾಫೆಡ್ ಸಂಸ್ಥೆ (NAFED) ರಾಜ್ಯ ಖರೀದಿ ಸಂಸ್ಥೆಯಾಗಿದ್ದು, ಪ್ರತಿಯೊಂದು ಖರೀದಿ ಕೇಂದ್ರಗಳಲ್ಲಿ ಪಿ.ಓ.ಎಸ್. (POS) ಯಂತ್ರಗಳ ಮೂಲಕ ರೈತರ ನೊಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ UIDAI ಬಯೋ ಮೇಟ್ರಿಕ್ ಪಡೆಯುವುದು ಕಡ್ಡಾಯವಾಗಿರುತ್ತದೆ.

ಸರ್ಕಾರದ ಆದೇಶದಂತೆ ಕಲಬುರಗಿ ಜಿಲ್ಲೆಗೆ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಸಲು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಕಲಬುರಗಿ ಸಂಸ್ಥೆಯನ್ನು, ಉದ್ದಿನ ಕಾಳು ಹಾಗೂ ಸೋಯಾಬೀನ್ ಖರೀದಿಸಲು ಕಲಬುರಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಹಾಗೂ ಸೂರ್ಯಕಾಂತಿ ಖರೀದಿಸಲು ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳ ನಿಯಮಿತ (KOF) ಸಂಸ್ಥೆಯನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉದ್ದಿನ ಕಾಳು ಮತ್ತು ಸೋಯಾಬೀನ ಖರೀದಿಗಾಗಿ (KSCMF)-ಮೊಬೈಲ್ ಸಂಖ್ಯೆ 9449864446, ಹೆಸರು ಕಾಳು ಖರೀದಿಗಾಗಿ (KSPAML) ಮೋಬೈಲ್ ಸಂಖ್ಯೆ: 9964474444 ಹಾಗೂ ಸೂರ್ಯಕಾಂತಿ ಖರೀದಿಗಾಗಿ (KOF) ಮೊಬೈಲ್ ಸಂಖ್ಯೆ 9591812142 ಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X