Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ‘ಪುಷ್ಪ ಮಂಜರಿ’ ಕವನ...

Kalaburagi | ‘ಪುಷ್ಪ ಮಂಜರಿ’ ಕವನ ಸಂಕಲನ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ16 Jun 2026 7:14 PM IST
share
Kalaburagi | ‘ಪುಷ್ಪ ಮಂಜರಿ’ ಕವನ ಸಂಕಲನ ಲೋಕಾರ್ಪಣೆ
ಸಾಹಿತ್ಯವು ಸಮಾಜದ ಸ್ಪಂದನೆ, ಜೀವನ ಮೌಲ್ಯಗಳ ಪ್ರತಿಬಿಂಬ: ಡಾ. ಶೈಲಜಾ ಕೊಪ್ಪರ

ಕಲಬುರಗಿ: ಸಾಹಿತ್ಯವು ಸಮಾಜದ ವಾಸ್ತವತೆ, ಜೀವನ ಮೌಲ್ಯಗಳು ಹಾಗೂ ಮಾನವೀಯ ಅನುಭವಗಳ ಪ್ರತಿಬಿಂಬವಾಗಿದ್ದು, ಕಾವ್ಯ ನಮ್ಮೊಳಗಿನ ಚಿಂತನೆ ಮತ್ತು ಸಂವೇದನೆಗಳನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ. ಶೈಲಜಾ ಕೊಪ್ಪರ ಹೇಳಿದರು.

ನಗರದ ವಿಶ್ವರಾಧ್ಯ ಕಾಲೊನಿಯ ವಿಶ್ವಾಂಜನೆಯ ದೇವಸ್ಥಾನದಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ‘ಪುಷ್ಪ ಮಂಜರಿ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಿರುಪಮ ಗುರುರಾಜ ಹಾಗೂ ಡಾ. ಅಂಬುಜಾ ಮಳಖೇಡ್ಕರ್ ಅವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿರುವ ಈ ಸಂಕಲನದಲ್ಲಿ ವಿವಿಧ ಕವಯಿತ್ರಿಯರ ಅನುಭವಸಮೃದ್ಧ ಕವಿತೆಗಳು ಅಡಕವಾಗಿವೆ. ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳು, ಮಹಿಳೆಯರ ಬದುಕಿನ ಹೋರಾಟ, ಸಾಮಾಜಿಕ ಸಮಸ್ಯೆಗಳು ಹಾಗೂ ಭಕ್ತಿ ಪ್ರಧಾನ ವಿಚಾರಗಳು ಕೃತಿಯಲ್ಲಿ ಪರಿಣಾಮಕಾರಿಯಾಗಿ ಮೂಡಿಬಂದಿವೆ ಎಂದು ತಿಳಿಸಿದರು.

ಮೊಬೈಲ್ ಸಂಸ್ಕೃತಿಯ ಪ್ರಭಾವ, ಮಹಿಳೆಯರ ದೈನಂದಿನ ಸವಾಲುಗಳು ಮತ್ತು ಸಾಮಾಜಿಕ ಜವಾಬ್ದಾರಿಗಳ ಕುರಿತ ಕವಿತೆಗಳು ಓದುಗರಲ್ಲಿ ಚಿಂತನೆ ಮೂಡಿಸುವಂತಿವೆ ಎಂದು ಅಭಿಪ್ರಾಯಪಟ್ಟರು.

ದಾಸ ಸಾಹಿತ್ಯದ ಮಹತ್ವವನ್ನು ಉಲ್ಲೇಖಿಸಿದ ಅವರು, ದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದು, ಮಾನವೀಯ ಮೌಲ್ಯಗಳು, ಪ್ರೀತಿ, ಸಹಾನುಭೂತಿ ಮತ್ತು ಸಾತ್ವಿಕ ಬದುಕಿನ ಸಂದೇಶವನ್ನು ಸಾರಿದ್ದಾರೆ ಎಂದರು.

ಪುರಂದರದಾಸರು ಹಾಗೂ ಕನಕದಾಸರು ಸಮಾನತೆ, ಸೌಹಾರ್ದತೆ ಮತ್ತು ನೈತಿಕ ಬದುಕಿನ ಮಾರ್ಗವನ್ನು ತಮ್ಮ ಕೀರ್ತನೆಗಳ ಮೂಲಕ ಜನರಿಗೆ ತೋರಿಸಿದ್ದಾರೆ. “ಆಚಾರವಿಲ್ಲದ ನಾಲಿಗೆ” ಹಾಗೂ “ಕುಲಕುಲವೆಂದು ಹೊಡೆದಾಡದಿರಿ” ಎಂಬ ಕೀರ್ತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಠ್ಠಲರಾವ ಕುಲಕರ್ಣಿ ಮಾತನಾಡಿ, ಮಹಿಳೆಯರು ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದು, ಮಹಿಳೆ ಅಬಲೆ ಅಲ್ಲ, ಸಬಲೆ ಎಂಬುದನ್ನು ತಮ್ಮ ಪ್ರತಿಭೆಯ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಹೇಳಿದರು. ಇದೇ ವೇಳೆ ಡಾ. ಅಂಬುಜಾ ಮಳಖೇಡ್ಕರ್ ಅವರ ಸಾಹಿತ್ಯ ಸೇವೆಯನ್ನು ಪ್ರಶಂಸಿಸಲಾಯಿತು.

ದೇವಸ್ಥಾನದ ಉಪಾಧ್ಯಕ್ಷ ಶರಣಗೌಡ ಪಾಟೀಲ ಉಪಸ್ಥಿತರಿದ್ದರು. ನಿರುಪಮ ಗುರುರಾಜ ಕೃತಿಯ ಪರಿಚಯ ಮಾಡಿಕೊಟ್ಟರು. ಕಾರ್ಯಕ್ರಮದ ಅಂಗವಾಗಿ ನಡೆದ ಮಕ್ಕಳ ಭರತನಾಟ್ಯ ಪ್ರದರ್ಶನ ಪ್ರೇಕ್ಷಕರ ಮನಸೆಳೆಯಿತು. ಶಿಲ್ಪಾ ಸುಧೀಂದ್ರ ದಾಸ ಹಾಗೂ ಡಾ.ಪ್ರತಿಭಾ ಗುಡದೂರು ಕವನ ವಾಚನ ನಡೆಸಿದರು.

ವೈಷ್ಣವಿ ವಂದನಾರ್ಪಣೆ ಮಾಡಿದರು. ಸಾಹಿತ್ಯಾಸಕ್ತರು, ಕವಯಿತ್ರಿಯರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃತಿಯ ಯಶಸ್ಸಿಗೆ ಶುಭ ಹಾರೈಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X