Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗಾಂಧೀಜಿಯವರನ್ನು ಅರಿಯಲು...

Kalaburagi | ಗಾಂಧೀಜಿಯವರನ್ನು ಅರಿಯಲು ಮೂಲ ಕೃತಿಗಳನ್ನು ಓದಿ : ಡಾ.ಕಿರಣ್ ಗಾಜನೂರು

ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Oct 2026 6:54 PM IST
share
Kalaburagi | ಗಾಂಧೀಜಿಯವರನ್ನು ಅರಿಯಲು ಮೂಲ ಕೃತಿಗಳನ್ನು ಓದಿ : ಡಾ.ಕಿರಣ್ ಗಾಜನೂರು

ಕಲಬುರಗಿ: ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧೀಜಿಯವರ ಕುರಿತು ಸುಳ್ಳು ಹಾಗೂ ತಪ್ಪು ಮಾಹಿತಿಗಳನ್ನು ಹರಿಬಿಡಲಾಗುತ್ತಿದ್ದು, ರಾಜಕೀಯ ದುರುದ್ದೇಶದಿಂದ ಇಂತಹ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ. ಗಾಂಧೀಜಿಯವರನ್ನು ನೈಜವಾಗಿ ಅರಿಯಬೇಕಾದರೆ ಅವರ ಮೂಲ ಕೃತಿಗಳನ್ನು ಓದಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಕಿರಣ್ ಗಾಜನೂರು ಹೇಳಿದರು.

ನಗರದ ದೊಡ್ಡಪ್ಪ ಅಪ್ಪ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಹಾಗೂ ಕಲಬುರಗಿಯ ಗಾಂಧಿ ವಿಚಾರ ವೇದಿಕೆ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಾಂಧೀಜಿಯವರ ಚಿಂತನೆ ಹಾಗೂ ಬದುಕಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಇಂತಹ ಮಾಹಿತಿಗಳನ್ನು ನಂಬುವ ಬದಲು ಗಾಂಧೀಜಿಯವರ ಸ್ವಂತ ಬರಹಗಳು, ಕೃತಿಗಳು ಹಾಗೂ ಅವರ ಜೀವನದ ದಾಖಲೆಗಳನ್ನು ಅಧ್ಯಯನ ಮಾಡುವ ಮೂಲಕ ಅವರ ವಿಚಾರಧಾರೆಗಳನ್ನು ಅರ್ಥಮಾಡಿಕೊಳ್ಳಬೇಕು. ಆಗ ಮಾತ್ರ ನೈಜ ಗಾಂಧೀಜಿ ನಮಗೆ ಪರಿಚಯವಾಗುತ್ತಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಹಿರಿಯ ಪತ್ರಕರ್ತ ಮನೋಜಕುಮಾರ ಗುದ್ದಿ ಮಾತನಾಡಿ, ಸತ್ಯ, ಅಹಿಂಸೆ ಹಾಗೂ ಪ್ರಾಮಾಣಿಕತೆ ಗಾಂಧೀಜಿಯವರ ಮೂಲಮಂತ್ರವಾಗಿದ್ದವು. ನ್ಯಾಯದ ಮಾರ್ಗದಲ್ಲಿ ನಡೆಯಬೇಕು ಹಾಗೂ ಸೌಹಾರ್ದತೆಯಿಂದ ಬದುಕಬೇಕು ಎಂಬುದು ಗಾಂಧೀಜಿಯವರ ಪ್ರಮುಖ ಸಂದೇಶವಾಗಿತ್ತು ಎಂದು ಹೇಳಿದರು.

ಗಾಂಧಿ ವಿಚಾರ ವೇದಿಕೆಯ ಕಾರ್ಯದರ್ಶಿ ಗಿರೀಶ ಪಾಟೀಲ್ ಮಾತನಾಡಿ, ಗಾಂಧಿ ಎಂದರೆ ಇಂದಿನ ರಾಜಕೀಯದಲ್ಲಿ ಕಾಣಿಸಿಕೊಳ್ಳುವ ಯಾವುದೇ ಅಡ್ಡಹೆಸರಿನ ‘ನಕಲಿ ಗಾಂಧಿ’ಗಳಲ್ಲ. ಗಾಂಧೀಜಿ ಪಕ್ಷಾತೀತರು ಹಾಗೂ ಧರ್ಮಾತೀತರು. ಅವರ ವಿಚಾರಗಳು ಎಲ್ಲರಿಗೂ ಸೇರಿವೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರಾಮಕೃಷ್ಣ ರೆಡ್ಡಿ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಯುಗದಲ್ಲಿಯೂ ಗಾಂಧೀಜಿಯವರ ಚಿಂತನೆಗಳು ಪ್ರಸ್ತುತವಾಗಿವೆ. ಅವರ ಬದುಕಿನ ಮೌಲ್ಯಗಳು ಇಂದಿನ ವಿದ್ಯಾರ್ಥಿಗಳಿಗೆ ಅತ್ಯಂತ ಅಗತ್ಯವಾಗಿದ್ದು, ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪೂರ್ವಿ ಹಾಗೂ ಗೌರಿ ಅವರ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಪ್ರಾಚಾರ್ಯ ವಿನೋದಕುಮಾರ್ ಎಲ್. ಪತಂಗೆ ಸ್ವಾಗತಿಸಿದರು. ಉಪನ್ಯಾಸಕ ಶಿವರಾಜ ದಂಡೋತಿ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಗಾಂಧಿ ವಿಚಾರ ವೇದಿಕೆಯ ಬಸವಪ್ರಭು ಶಾಂತರಸ, ಕಿರಣ ಪಾಟೀಲ, ಸುರೇಶ್ ಬಡಿಗೇರ, ಡಾ. ಸಂಗನಗೌಡ ಸೇರಿದಂತೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Tags

GandhijiKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X