Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಿಕ್ಷಕರ ಮೇಲಿನ ಆನ್‌ಲೈನ್...

Kalaburagi | ಶಿಕ್ಷಕರ ಮೇಲಿನ ಆನ್‌ಲೈನ್ ಕಾರ್ಯಭಾರ ಕಡಿಮೆ ಮಾಡಿ: ಸರ್ಕಾರಕ್ಕೆ ಎಂಎಲ್‌ಸಿ ಶಶೀಲ್ ನಮೋಶಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Jun 2026 10:00 PM IST
share
Kalaburagi | ಶಿಕ್ಷಕರ ಮೇಲಿನ ಆನ್‌ಲೈನ್ ಕಾರ್ಯಭಾರ ಕಡಿಮೆ ಮಾಡಿ: ಸರ್ಕಾರಕ್ಕೆ ಎಂಎಲ್‌ಸಿ ಶಶೀಲ್ ನಮೋಶಿ ಆಗ್ರಹ

ಕಲಬುರಗಿ : ಸರ್ಕಾರಿ ಶಾಲಾ ಶಿಕ್ಷಕರ ಮೇಲಿನ ಆನ್‌ಲೈನ್ ಆಡಳಿತಾತ್ಮಕ ಕಾರ್ಯಭಾರವನ್ನು ಕಡಿಮೆ ಮಾಡಿ, ಅಗತ್ಯ ಡಿಜಿಟಲ್ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ತಂತ್ರಜ್ಞಾನದ ಯುಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲೀಕರಣ ಸ್ವಾಗತಾರ್ಹ ಬೆಳವಣಿಗೆಯಾದರೂ, ಅದರ ಸಂಪೂರ್ಣ ಹೊಣೆಗಾರಿಕೆ ಶಿಕ್ಷಕರ ಮೇಲೆಯೇ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಸರ್ಕಾರಿ ಶಾಲಾ ಶಿಕ್ಷಕರು ಬೋಧನಾ ಕಾರ್ಯದ ಜೊತೆಗೆ ಕಾಮ್ಸ್, ಸ್ಯಾಟ್ಸ್, ಯುಡೈಸ್, ಪಿಎಫ್‌ಎಂಎಸ್, ಆಧಾರ್ ಅಪಾರ್ ಐಡಿ, ಶಿಕ್ಷಾ ಕೋ-ಪೈಲಟ್, ಇನ್‌ಸ್ಪೈರ್ ಅವಾರ್ಡ್ ಮಾನಕ್, ಸೇತುಬಂಧ್ ಪರೀಕ್ಷೆಗಳ ದಾಖಲೆ ನಿರ್ವಹಣೆ, ಬಿಸಿಯೂಟ ಯೋಜನೆ, ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ, ಬಿಎಲ್‌ಒ ಕರ್ತವ್ಯ ಸೇರಿದಂತೆ ಅನೇಕ ಆನ್‌ಲೈನ್ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ ಇಲಾಖೆ ವಿವಿಧ ಮಾಹಿತಿಗಳು ಮತ್ತು ವರದಿಗಳನ್ನು ಸ್ಪ್ರೆಡ್‌ಶೀಟ್ ಹಾಗೂ ಮೊಬೈಲ್ ಅಪ್ಲಿಕೇಷನ್‌ಗಳಲ್ಲಿ ದಾಖಲಿಸುವಂತೆ ಸೂಚಿಸುತ್ತಿರುವುದರಿಂದ ಶಿಕ್ಷಕರ ಮೇಲೆ ಹೆಚ್ಚುವರಿ ಒತ್ತಡ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಅನೇಕ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಹಾಗೂ ಶಾಶ್ವತ ಇಂಟರ್‌ನೆಟ್ ಸೌಲಭ್ಯಗಳ ಕೊರತೆಯಿಂದ ಶಿಕ್ಷಕರು ತಮ್ಮ ಸ್ವಂತ ಮೊಬೈಲ್, ಡೇಟಾ ಹಾಗೂ ಇಂಟರ್‌ನೆಟ್ ಬಳಸಿ ಅಧಿಕೃತ ಕಾರ್ಯಗಳನ್ನು ನಿರ್ವಹಿಸುವಂತಾಗಿದೆ. ಇದರಿಂದ ಆರ್ಥಿಕ ಹೊರೆ ಹೆಚ್ಚುವುದರ ಜೊತೆಗೆ ಕಣ್ಣಿನ ಸಮಸ್ಯೆ, ಕುತ್ತಿಗೆ ಮತ್ತು ಬೆನ್ನುನೋವು, ತಲೆನೋವು ಹಾಗೂ ಮಾನಸಿಕ ಒತ್ತಡದಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕೆಲವೆಡೆ ಆನ್‌ಲೈನ್ ಕಾರ್ಯಭಾರದ ಒತ್ತಡದಿಂದ ಅಪಘಾತಗಳು ಸಂಭವಿಸಿರುವ ವರದಿಗಳೂ ಬಂದಿವೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಶಾಲೆಗೆ ಕಂಪ್ಯೂಟರ್ ಹಾಗೂ ಶಾಶ್ವತ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಬೇಕು. ಇಲ್ಲವೇ ಶಿಕ್ಷಕರಿಗೆ ಉಚಿತ ಟ್ಯಾಬ್ಲೆಟ್, ಇಂಟರ್‌ನೆಟ್ ಸೌಲಭ್ಯ, ಮಾಸಿಕ ಮೊಬೈಲ್ ಅಥವಾ ಡೇಟಾ ಭತ್ಯೆ ನೀಡಬೇಕು. ಪರ್ಯಾಯವಾಗಿ ಪ್ರತಿ ಶಾಲೆಗೆ ಒಬ್ಬ ಕಂಪ್ಯೂಟರ್ ಆಪರೇಟರ್ ನೇಮಕ ಮಾಡುವಂತಹ ಶಾಶ್ವತ ಪರಿಹಾರಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಬೇಡಿಕೆ ಶಿಕ್ಷಕರ ಅನುಕೂಲಕ್ಕಾಗಿ ಮಾತ್ರವಲ್ಲ; ಬೋಧನಾ ಗುಣಮಟ್ಟ ಸುಧಾರಿಸಲು, ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯ ಮೀಸಲಿಡಲು ಹಾಗೂ ಶಿಕ್ಷಕರ ಆರೋಗ್ಯ ಕಾಪಾಡಲು ಅಗತ್ಯವಾಗಿದೆ ಎಂದು ನಮೋಶಿ ತಿಳಿಸಿದ್ದಾರೆ.

“ಶಿಕ್ಷಕರ ಸಮಯ ಮತ್ತು ಶಕ್ತಿಯನ್ನು ಡೇಟಾ ನಮೂದಿಸಲು ಬಳಸುವುದಕ್ಕಿಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಬಳಸಬೇಕು. ಇಂದು ಶಿಕ್ಷಕರು ಶಿಕ್ಷಕರಿಗಿಂತ ಹೆಚ್ಚಾಗಿ ಕಚೇರಿ ಸಿಬ್ಬಂದಿಯ ಕೆಲಸ ನಿರ್ವಹಿಸುವಂತಾಗಿದೆ. ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಂಡುಹಿಡಿಯಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಶಿಕ್ಷಕರ ಸಂಘಗಳು, ಶಿಕ್ಷಣಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ವಿಷಯದಲ್ಲಿ ಸರ್ಕಾರದ ಗಮನ ಸೆಳೆಯಲು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಶಶೀಲ್ ನಮೋಶಿ ಕರೆ ನೀಡಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X