ಕಲಬುರಗಿ | ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರಗೆ ಸಚಿವ ಸ್ಥಾನ ನೀಡಲು ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕೋಲಿ ಸಮಾಜದ ಧೀಮಂತ ನಾಯಕರಾಗಿರುವ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಅವರಿಗೆ ಮುಂಬರುವ ಸಚಿವ ಸಂಪುಟ ಪುನರ್ ರಚನೆಯಲ್ಲಿ ಅವಕಾಶ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಪಂ ಮಾಜಿ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಮನವಿ ಮಾಡಿದ್ದಾರೆ.
ಅಫಜಲಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ತಿಪ್ಪಣಪ್ಪ ಕಮಕನೂರ ಅವರ 72ನೇ ಜನ್ಮದಿನದ ಅಂಗವಾಗಿ ಬಡರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ನಡೆಸಿ ಮಾತನಾಡಿದರು.
ಕೋಲಿ ಸಮಾಜವನ್ನು ಎಸ್.ಟಿಗೆ ಸೇರ್ಪಡೆ ಮಾಡಬೇಕೆಂದು ನಿರಂತರವಾಗಿ ಹೋರಾಟ ಮಾಡುತ್ತಾ, ಈ ಭಾಗದಲ್ಲಿ ಕೋಲಿ ಸಮಾಜವನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿರುವ ಕಮಕನೂರ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಿದರೆ ಇಡೀ ಕೋಲಿ ಸಮಾಜಕ್ಕೆ ಆದ್ಯತೆ ನೀಡಿದಂತಾಗುತ್ತದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಡಾ.ವಿನಾಯಕ್ ಜೋಶಿ, ರಮೇಶ ಕ್ಷತ್ರಿಯ, ಶರಣಪ್ಪ ನಾಯಕೋಡಿ, ಭೀಮಾಶಂಕರ ವಡ್ಡರ,ಹಣಮಂತ ವಾಂಗಿ, ಪರಶುರಾಮ ಡಾಳೆ, ಸೈಬಣ್ಣ ಜಮಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







