Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿವಿಧ ಅಭಿವೃದ್ಧಿ...

ಕಲಬುರಗಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡಲು ಮನವಿ

ವಾರ್ತಾಭಾರತಿವಾರ್ತಾಭಾರತಿ3 Jan 2025 9:37 PM IST
share
Photo of Program

ಕಲಬುರಗಿ : ಶುಕ್ರವಾರ ನಗರಕ್ಕೆ ಆಗಮಿಸಿದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಭೈರತಿ ಸುರೇಶ್‌ ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಯಲ್ಲಪ್ಪ ಎಸ್.ನಾಯಕೋಡಿ, ಮಾಜಿ ಮಹಾಪೌರರಾದ ಸಯ್ಯದ್ ಅಹ್ಮದ್‌, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪರವೀನ್ ಬೇಗಂ, ಸಚಿನ ಶಿರವಾಳ, ಮಹಮ್ಮದ್ ಅಜೀಮೊದ್ದಿನ್, ಇರ್ಫಾನಾ ಪರವೀನ್, ಲತಾ ರವೀಂದ್ರಕುಮಾರ, ಪಾಲಿಕೆಯ‌ ಸದಸ್ಯರುಗಳು ಸಚಿವರನ್ನು ಸ್ವಾಗತಿಸಿ, ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.

ಕಲಬುರಗಿ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನದ ಬೇಡಿಕೆ ಇದ್ದು, ರಸ್ತೆಗಳು ಮತ್ತು ಒಳಚರಂಡಿ ಗಳಿಗೆ 70 ಕೋಟಿ ರೂ. ಅನುದಾನ, ಕಲಬುರಗಿ ನಗರದ ಹೊರವಲಯದಲ್ಲಿ ನಾಲ್ಕು ದಿಕ್ಕಿನಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ಸಲುವಾಗಿ ಭೂಮಿ ಖರೀದಿಸುವುದಕ್ಕಾಗಿ 100 ಕೋಟಿ ರೂ., ಮಹಾನಗರ ಪಾಲಿಕೆಯ ಸಭಾಭವನ ಕಟ್ಟಡಕ್ಕಾಗಿ 20 ಕೋಟಿ ರೂ., ರಸ್ತೆ ಅಗಲೀಕರಣಕ್ಕಾಗಿ 20 ಕೋಟಿ ರೂ., ಸರಡಗಿ ನಾಲಾ ಡೈವರ್ಶನ ಕಾಮಗಾರಿಗಾಗಿ 10 ಕೋಟಿ ರೂ., ನೀರು ಸರಬರಾಜು ಯೋಜನೆಗಾಗಿ 190.4 ಕೋಟಿ ರೂ., ಒಳಚರಂಡಿ ವ್ಯವಸ್ಥೆಗಾಗಿ 350 ಕೋಟಿ ರೂ. ಅನುದಾನ, ಉದ್ಯಾನವನ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒಟ್ಟು 1020.04 ಕೋಟಿ ರೂ.ಗಳ ಅನುದಾನವನ್ನು ಕಲಬುರಗಿ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡುವಂತೆ ಕೋರಿ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.

ಅಲ್ಲದೇ ಕಲಬುರಗಿ ಸ್ಥಳೀಯ ಪ್ರದೇಶದಲ್ಲಿ ಮಂಡಲ/ ಗ್ರಾಮ ಪಂಚಾಯತ್‌ ಯಿಂದ ಹಸ್ತಾಂತರಗೊಂಡ ಮತ್ತು ಅನುಮೋದನೆಗೊಂಡ ವಿನ್ಯಾಸಗಳಲ್ಲಿಯ ನಿವೇಶನಗಳ ಕರವಸೂಲಿ, ಕಟ್ಟಡ ಪರವಾನಿಗೆ ಹಾಗೂ ಇನ್ನಿತರ ಎಲ್ಲಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಸೂಕ್ತ ಮಾರ್ಗದರ್ಶನವನ್ನು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅನುಮತಿ ನೀಡುವಂತೆ ಕೋರಲಾಯಿತು.

ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ ನೀಡಲು ಪ್ರಸ್ತುತ ಇರುವ ವಲಯ ನಿಯಮಾವಳಿಗಳನ್ನು ಪರಿಷ್ಕರಿಸಿ ಕಲಬುರಗಿ ನಗರದ ಬೆಳವಣಿಗೆಗಾಗಿ ಕಟ್ಟಡದ ಎತ್ತರ 15 ಮೀಟರ್ ವರೆಗೆ ಹಾಗೂ ಎಫ್.ಎ.ಆರ್. 4 (ಗರಿಷ್ಠ) ವರೆಗೆ ಹೆಚ್ಚಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು.

ಪಾಲಿಕೆಯ ಆಯುಕ್ತರಾದ ಅವಿನಾಶ ಸಂಜೀವನ್ ಶಿಂಧೆ, ಭಾ.ಆ.ಸೇ., ಉಪ ಆಯುಕ್ತರಾದ ಆರ್.ಪಿ. ಜಾಧವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X