Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನಿವೃತ್ತಿ ಜೀವನ ಸಾಧನೆಗೆ...

Kalaburagi | ನಿವೃತ್ತಿ ಜೀವನ ಸಾಧನೆಗೆ ಅಂತ್ಯವಲ್ಲ, ಹೊಸ ಅವಕಾಶ : ಶಿವರಾಜ ಅಂಡಗಿ

ವಾರ್ತಾಭಾರತಿವಾರ್ತಾಭಾರತಿ2 Aug 2026 11:19 PM IST
share
Kalaburagi | ನಿವೃತ್ತಿ ಜೀವನ ಸಾಧನೆಗೆ ಅಂತ್ಯವಲ್ಲ, ಹೊಸ ಅವಕಾಶ : ಶಿವರಾಜ ಅಂಡಗಿ

ಕಲಬುರಗಿ: ನಿವೃತ್ತಿ ಜೀವನವು ಸಾಧನೆಗೆ ಅಂತ್ಯವಲ್ಲ, ಸಮಾಜಮುಖಿ ಹಾಗೂ ಸಾರ್ಥಕ ಬದುಕಿಗೆ ಹೊಸ ಅವಕಾಶವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಹೇಳಿದರು.

ನಗರದ ದೇವಿನಗರದಲ್ಲಿರುವ ಸಿದ್ದರೂಢ ಸತ್ಸಂಗ ಸಮಿತಿ ಹಾಗೂ ಶ್ರೀ ರಾಮಲಿಂಗ ಚೌಡೇಶ್ವರಿ ಸೇವಾ ಪ್ರತಿಷ್ಠಾನ (ರಿ) ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಗುರುನಾಥ ಭೀಮಳ್ಳಿ ವಿರಚಿತ ‘ಅಂತರ್ಜ್ಯೋತಿ’ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕರ್ತವ್ಯದ ಜೊತೆಗೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಬದುಕನ್ನು ಅಳವಡಿಸಿಕೊಂಡು, ನಿವೃತ್ತಿಯ ನಂತರ ತಮ್ಮ ಜ್ಞಾನ ಮತ್ತು ಅನುಭವಗಳನ್ನು ಸಮಾಜದೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಗುರುನಾಥ ಭೀಮಳ್ಳಿ ಅವರು ಈ ಕೃತಿಯನ್ನು ರಚಿಸಿರುವುದು ಶ್ಲಾಘನೀಯ. ನಿವೃತ್ತಿಯ ನಂತರವೂ ಸತ್ಸಂಗ, ಸಮಾಜಸೇವೆ ಹಾಗೂ ಸಾಹಿತ್ಯ ಚಟುವಟಿಕೆಗಳ ಮೂಲಕ ಸಕ್ರಿಯರಾಗಿರುವ ಅವರು ಹಿರಿಯ ನಾಗರಿಕರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಆಧ್ಯಾತ್ಮಿಕ ಚಿಂತಕರಾದ ಬಿ. ಮಹೇಶ್ವರಿಜೀ ಕೃತಿಯನ್ನು ಪರಿಚಯಿಸಿ, ‘ಅಂತರ್ಜ್ಯೋತಿ’ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಿಂತನೆಗಳ ಅಮೂಲ್ಯ ಸಂಕಲನವಾಗಿದೆ. ಮಾನವ ಜೀವನವನ್ನು ಮೌಲ್ಯಯುತವಾಗಿ ರೂಪಿಸಿಕೊಳ್ಳಲು ಅಗತ್ಯವಾದ ವಿಚಾರಗಳನ್ನು ಲೇಖಕರು ಸರಳ ಹಾಗೂ ಪರಿಣಾಮಕಾರಿ ಭಾಷೆಯಲ್ಲಿ ನಿರೂಪಿಸಿದ್ದು, ಆಧ್ಯಾತ್ಮಿಕ ಆಸಕ್ತಿ ಹೊಂದಿರುವ ಪ್ರತಿಯೊಬ್ಬರೂ ಓದಲೇಬೇಕಾದ ಕೃತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಮೈಂದರ್ಗಿ ಹಿರೇಮಠದ ಶ್ರೀ ಷ.ಬ್ರ. ಅಭಿನವ ರೇವಣಸಿದ್ದ ಪಟ್ಟದೇವರು ಆಶೀರ್ವಚನ ನೀಡಿ, “ಸೇವೆ ಸ್ವರ್ಗದ ಸೋಪಾನ” ಎಂಬ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡಿರುವ ಗುರುನಾಥ ಭೀಮಳ್ಳಿ ಅವರು ಶಿಕ್ಷಣ ಸಹಾಯ, ಗ್ರಂಥಾಲಯಗಳ ಸ್ಥಾಪನೆ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯೊಂದಿಗೆ ಸತ್ಸಂಗದ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಈ ಕೃತಿ ಆಧ್ಯಾತ್ಮಿಕ ಸಾಧಕರಿಗೆ ದಾರಿದೀಪವಾಗಲಿದೆ ಎಂದು ಹೇಳಿದರು.

ಲೇಖಕ ಗುರುನಾಥ ಭೀಮಳ್ಳಿ ಮಾತನಾಡಿ, ಶ್ರೀ ಸಿದ್ದಾರೂಢರ ಪ್ರೇರಣೆಯಿಂದ ನಡೆಸಿದ ಸತ್ಸಂಗಗಳ ಅನುಭವಗಳು ಮತ್ತು ಆಧ್ಯಾತ್ಮಿಕ ಚಿಂತನೆಗಳೇ ‘ಅಂತರ್ಜ್ಯೋತಿ’ ಕೃತಿಯ ರೂಪ ಪಡೆದಿವೆ ಎಂದರು. ಕೃತಿ ಪ್ರಕಟಣೆಗೆ ಸಹಕರಿಸಿದ ಶರತ್‌ಚಂದ್ರ ಪೊಲೀಸ್ ಪಾಟೀಲ, ಸಾಹಿತ್ಯ ಪರಿಷ್ಕರಣೆಗೆ ನೆರವಾದ ಡಾ. ಕಾವ್ಯಶ್ರೀ ಮಹಾಗಾಂವಕರ್, ಡಾ. ಶರಣಬಸಪ್ಪ ವಡ್ಡನಕೇರಿ ಹಾಗೂ ಸತ್ಸಂಗದ ಗೆಳೆಯರಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧೀನ ಕಾರ್ಯದರ್ಶಿ ಶಿವಪುತ್ರಪ್ಪ ಕಂಠಿ, ಶ್ರವಣಕುಮಾರ ಮುನ್ನೊಳ್ಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ನಿರ್ಮಲಾ ಸಿರಗಾಪೂರ ಸ್ವಾಗತಿಸಿದರು. ಕಾಶೀನಾಥ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ವಿನೋದಕುಮಾರ ಜನೇವರಿ ವಂದಿಸಿದರು.

ಕಾರ್ಯಕ್ರಮದಲ್ಲಿ ರೇವಣಸಿದ್ದಪ್ಪ ಜೀವಣಗಿ, ಗಣೇಶ ಚಿನ್ನಾಕರ್, ನಾಗೇಂದ್ರಪ್ಪ ಬಂಟನಳ್ಳಿ, ಸಂಗಪ್ಪ ಭೀಮಳ್ಳಿ, ಗುರುನಾಥ ವಿಠ್ಠಪ್ಪ, ಶರಣಬಸಪ್ಪ ಭೀಮಳ್ಳಿ, ಮಲ್ಲಿಕಾರ್ಜುನ ಆಳಂದ, ಚಂದ್ರಶೇಖರ ಭೀಮಳ್ಳಿ, ಚಂದ್ರಮೋಹನ ಭೀಮಳ್ಳಿ, ವಿಜಯಕುಮಾರ ಭಾಲ್ಕಿ, ಶಿವಶರಣ ಭೀಮಳ್ಳಿ, ಶ್ರೀಮತಿ ಮಲ್ಲಮ್ಮ, ಶ್ರೀಮತಿ ರೇಣುಕಾದೇವಿ ಸೇರಿದಂತೆ ಸಿದ್ದರೂಢ ಸತ್ಸಂಗ ಸಮಿತಿಯ ಸದಸ್ಯರು ಹಾಗೂ ಭಕ್ತರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X