ಕಲಬುರಗಿ | ಗಾಳಿ-ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: 5 ವರ್ಷದ ಬಾಲಕಿ ಮೃತ್ಯು

ಕಲಬುರಗಿ: ಬಿರುಗಾಳಿ, ಮಳೆಗೆ ಮನೆಯ ಮೇಲ್ಛಾವಣಿ ಒಂದ ಪಾರ್ಶ್ವ ಕುಸಿದು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮೃತಳನ್ನು ಅಹಾಧ್ಯ ಮಲ್ಲಪ್ಪ ಪಸಪೂರ (5) ಎಂದು ಗುರುತಿಸಲಾಗಿದೆ.
ಮನೆಯೊಳಗೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಏಕಾಏಕಿ ಮೇಲ್ಛಾವಣಿ ಕುಸಿದುಬಿದ್ದಿದ್ದು, ಆಕೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯ ವೇಳೆ ಬಾಲಕಿ ಮೂವರು ಸಹೋದರಿಯರು ಇನ್ನೊಂದು ಕೋಣೆಯಲ್ಲಿದ್ದರೆ, ಅಡುಗೆ ಮನೆಯಲ್ಲಿದ್ದ ತಾಯಿ ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ.
ಈ ಬಗ್ಗೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





