Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರೌಡಿ ಶೀಟರ್ ಅಶೋಕ ಸಿಂಗೆ...

Kalaburagi | ರೌಡಿ ಶೀಟರ್ ಅಶೋಕ ಸಿಂಗೆ ಬೆಂಗಳೂರಿಗೆ ಗಡಿಪಾರು

ವಾರ್ತಾಭಾರತಿವಾರ್ತಾಭಾರತಿ9 Sept 2026 8:10 PM IST
share
Kalaburagi | ರೌಡಿ ಶೀಟರ್ ಅಶೋಕ ಸಿಂಗೆ ಬೆಂಗಳೂರಿಗೆ ಗಡಿಪಾರು

ಕಲಬುರಗಿ: ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಅಶೋಕ ವಿಠಲರಾವ ಸಿಂಗೆ (40) ಎಂಬಾತನನ್ನು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕಲಬುರಗಿ ನಗರದಿಂದ ಗಡಿಪಾರು ಮಾಡಿ ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಕಳುಹಿಸಲಾಗಿದೆ.

ಕೆಎಸ್‌ಆರ್‌ಟಿಸಿ ಕಾಲೋನಿ ನಿವಾಸಿಯಾಗಿರುವ ಅಶೋಕ ಸಿಂಗೆ ಗೌಂಡಿ ಕೆಲಸ ಮಾಡುತ್ತಿದ್ದು, 2003ರಿಂದ 2026ರವರೆಗೆ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ 8 ಪ್ರಕರಣಗಳು, ಎನ್‌ಡಿಪಿಎಸ್ ಕಾಯ್ದೆಯಡಿ 4 ಪ್ರಕರಣಗಳು ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ 4 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಆತನನ್ನು ‘ಎ’ ರೌಡಿ ಎಂದು ಗುರುತಿಸಲಾಗಿದ್ದು, ರೌಡಿ ಶೀಟ್ ಪ್ರಸ್ತುತ ಚಾಲ್ತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಶೋಕ ಸಿಂಗೆ ವಿರುದ್ಧ ಕೊಲೆ ಯತ್ನ, ಸುಲಿಗೆ, ಮಹಿಳೆಯರ ಮೇಲೆ ಹಲ್ಲೆ, ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸುವುದು, ಅಕ್ರಮ ಕೂಟ ರಚನೆ, ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ, ಶಾಂತಿ ಭಂಗಕ್ಕೆ ಕಾರಣವಾಗುವ ಕೃತ್ಯಗಳು, ಸಾರ್ವಜನಿಕರಿಗೆ ಜೀವ ಬೆದರಿಕೆ, ಅಪರಾಧಿಕ ಬೆದರಿಕೆ ಹಾಗೂ ಅಕ್ರಮವಾಗಿ ಗಾಂಜಾ ಸಂಗ್ರಹಣೆ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳು ದಾಖಲಾಗಿವೆ. ಈತನ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರ ನಿರ್ದೇಶನದ ಮೇರೆಗೆ ಅಶೋಕ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ ಕಣಿಮೇಶ್ವರ ಅವರು ಆರೋಪಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55ರ ಅಡಿಯಲ್ಲಿ ಗಡಿಪಾರು ಮಾಡುವಂತೆ ವರದಿ ಸಲ್ಲಿಸಿದ್ದರು.

ಈ ವರದಿಯ ಆಧಾರದ ಮೇಲೆ ಕಲಬುರಗಿ ನಗರದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಶಾಲೂ ಅವರು ವಿಚಾರಣೆ ನಡೆಸಿ, ಅಶೋಕ ಸಿಂಗೆ ಅವರನ್ನು ಬೆಂಗಳೂರು ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

Tags

BengaluruKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X