Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರೌಡಿ ಶೀಟರ್ ಸಣ್ಣ ಕೊಡಲಿ...

Kalaburagi | ರೌಡಿ ಶೀಟರ್ ಸಣ್ಣ ಕೊಡಲಿ ರಾಜಾ ಬಳ್ಳಾರಿಗೆ ಗಡಿಪಾರು

ವಾರ್ತಾಭಾರತಿವಾರ್ತಾಭಾರತಿ24 Sept 2026 7:32 PM IST
share
Kalaburagi | ರೌಡಿ ಶೀಟರ್ ಸಣ್ಣ ಕೊಡಲಿ ರಾಜಾ ಬಳ್ಳಾರಿಗೆ ಗಡಿಪಾರು

ಕಲಬುರಗಿ: ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ‘ಎ’ ರೌಡಿ ಶೀಟರ್ ರಾಜು ಅಲಿಯಾಸ್ ಸಣ್ಣ ಕೊಡಲಿ ರಾಜಾ (30) ಎಂಬಾತನನ್ನು ಬಳ್ಳಾರಿ ಜಿಲ್ಲೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಕಲಬುರಗಿ ನಗರ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ತಾರಫೈಲ್ ನಿವಾಸಿ ಬಾಲಪ್ಪ ಗುರುಸಣಗಿ ಅವರ ಪುತ್ರ ರಾಜು ಅಲಿಯಾಸ್ ಸಣ್ಣ ಕೊಡಲಿ ರಾಜಾ ವಿರುದ್ಧ 2015ರಿಂದ 2026ರವರೆಗೆ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ. ಕೊಲೆ, ಕೊಲೆಗೆ ಯತ್ನ, ದೊಂಬಿ, ಮಾರಕ ಆಯುಧಗಳೊಂದಿಗೆ ದೊಂಬಿ, ಹಲ್ಲೆ, ಗಾಯಗೊಳಿಸುವುದು ಹಾಗೂ ಅಕ್ರಮ ಕೂಟ ರಚನೆ ಸೇರಿದಂತೆ ಹಲವು ಗಂಭೀರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳು ಆತನ ವಿರುದ್ಧ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿತನನ್ನು ‘ಎ’ ರೌಡಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧದ ರೌಡಿ ಶೀಟ್ ಪ್ರಸ್ತುತ ಚಾಲ್ತಿಯಲ್ಲಿದೆ. ಪದೇಪದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಪಿಐ ಜಿ.ಎಂ. ಪಾಟೀಲ್ ಅವರು ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 55ರ ಅಡಿಯಲ್ಲಿ ಆರೋಪಿಯನ್ನು ಗಡಿಪಾರು ಮಾಡುವಂತೆ ವರದಿ ಸಲ್ಲಿಸಿದ್ದರು. ಅದರ ಆಧಾರದ ಮೇಲೆ ನ್ಯಾಯಾಲಯ ಗಡಿಪಾರು ಆದೇಶ ಹೊರಡಿಸಿದೆ

Tags

BallariRowdy-sheeterKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X