Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ದೇವಲ ಗಾಣಗಾಪೂರ ಅಭಿವೃದ್ಧಿಗೆ...

ಕಲಬುರಗಿ | ದೇವಲ ಗಾಣಗಾಪೂರ ಅಭಿವೃದ್ಧಿಗೆ 200 ಕೋಟಿ ರೂ. ಮೊತ್ತದ ಯೋಜನೆ ಸಿದ್ಧ: ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ3 May 2025 8:57 PM IST
share
ಕಲಬುರಗಿ | ದೇವಲ ಗಾಣಗಾಪೂರ ಅಭಿವೃದ್ಧಿಗೆ 200 ಕೋಟಿ ರೂ. ಮೊತ್ತದ ಯೋಜನೆ ಸಿದ್ಧ: ಬಿ.ಫೌಝಿಯಾ ತರನ್ನುಮ್

ಕಲಬುರಗಿ : ಅಫಜಲಪೂರ ತಾಲೂಕಿನ ಸುಪ್ರಸಿದ್ದ ದೇವಲ ಗಾಣಗಾಪೂರದ ಶ್ರೀ ದತ್ತಾತ್ರೇಯ ದೇವಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರವಾಗಿರುವ ದೇವಲ ಗಾಣಗಾಪೂರವನ್ನು ಕಾಶಿ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿಗೆ 200 ಕೋಟಿ ರೂ. ಮೊತ್ತದ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.

ದೇವಲ ಗಾಣಗಾಪೂರ ಪಟ್ಟಣದಲ್ಲಿ ನಾಲ್ಕು ಲೇನ್ ರಸ್ತೆ, ಸಂಗಮ ಮತ್ತು ಅಷ್ಠ ತೀರ್ಥ ಸ್ಥಳಗಳ ಅಭಿವೃದ್ಧಿ, ಒಳಚರಂಡಿ, ಎಸ್.ಟಿ.ಪಿ ಘಟಕ ಸ್ಥಾಪನೆ, ನಾಗರಿಕ ಸೌಲಭ್ಯಗಳು ಸೇರಿದಂತೆ ಒಟ್ಟಾರೆ ದೇವಸ್ಥಾನ ಮತ್ತು ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಲು ಮತ್ತು ಭಕ್ತಾದಿಗಳ ಅನುಕೂಲಕ್ಕೆ ತಕ್ಕಂತೆ ಮೂಲಸೌಕರ್ಯ ಕಲ್ಪಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ "ಎ" ಅಡಿಯಲ್ಲಿ ಬರುವ ಶ್ರೀ ದತ್ತಾತ್ರೇಯನ ಸನ್ನಿದಿಯ ದರ್ಶನಕ್ಕೆ ದೇಶದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸುವುದರಿಂದ ಭಕ್ತರ ಅನುಕೂಲಕ್ಕೆ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಸೂಚನಾ ಫಲಕಗಳು, ಶೂ ಸ್ಟ್ಯಾಂಡ್, ಸಿ.ಸಿ.ಟಿ.ವಿ., ಸಂಗಮ ಮತ್ತು ಅಷ್ಟ ತೀರ್ಥಗಳ ಅಭಿವೃದ್ಧಿ, ಡಸ್ಟ್ ಬಿನ್ ಅಳವಡಿಕೆ, ಪ್ರವಾಸಿ ಮಾಹಿತಿ ಕೇಂದ್ರ, ವಿವಿಧೋದ್ದೇಶ ಸಭಾಂಗಣ ನಿರ್ಮಾಣ ಹೀಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ “ಪ್ರಸಾದ” ಯೋಜನೆಯಡಿ ಸೇರ್ಪಡೆ ಮಾಡುವಂತೆ 83.52 ಕೋಟಿ ರೂ. ಮೊತ್ತದ ಪ್ರಸ್ತಾವನೆ ಈಗಾಗಲೆ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 2024ರ ಅಕೋಬರ್ 29 ರಂದೇ ಸಲ್ಲಿಸಿದ್ದು, ಅನುಮೋದನೆಯ ನಿರೀಕ್ಷೆ ಹೊಂದಲಾಗಿದೆ ಎಂದು ಹೇಳಿದರು.

ಈ ಕುರಿತಂತೆ ರಾಜ್ಯದ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಈಗಾಗಲೆ 2-3 ಬಾರಿ ಬಾರಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವರನ್ನು ಕಂಡು ಗಾಣಗಾಪೂರ ಸಮಗ್ರ ಅಭಿವೃದ್ಧಿ ಕುರಿತಂತೆ ಮನವರಿಕೆ ಮಾಡಿ ಅನುದಾನ ಒದಗಿಸಲು ಕೋರಿದ್ದಾರೆ ಎಂದರು.

ಇತ್ತೀಚೆಗೆ ರಾಜ್ಯದ ಪ್ರಮುಖ 14 ದೇವಾಲಯಗಳ ಪ್ರಸಾದವನ್ನು ಆನ್‌ಲೈನ್ ಮೂಲಕ ಬುಕ್ ಮಾಡಿ ಪಡೆಯಲು “ಇ-ಪ್ರಸಾದ” ಸೇವೆ ಪ್ರಾರಂಭವಾಗಿದ್ದು, ಇದರಲ್ಲಿ ಗಾಣಗಾಪೂರದ ಶ್ರೀ ದತ್ತಾತ್ರೇಯನ ದೇವಸ್ಥಾನ ಒಳಗೊಂಡಿದೆ ಎಂದರು.

ವಾಕ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ :

ದೇವಸ್ಥಾನದ ನಿಧಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ವಾಕ್ ವೇ ಕೆಲಸ ಪ್ರಗತಿಯಲ್ಲಿದೆ. ಶ್ರೀ ದತ್ತಾತ್ರೇಯ ದೇವಸ್ಥಾನ, ಶ್ರೀ ಸಂಗಮ, ಶ್ರೀ ಕಲ್ಲೇಶ್ವರ ದೇವಸ್ಥಾನ ಹಾಗೂ ಅಷ್ಟ ತೀರ್ಥಗಳಿಗೆ ತೆರಳುವ ಭಕ್ತಾದಿಗಳ ನೆರವಿಗಾಗಿ ವಿವಿಧ ಬ್ಯಾನರ್ ಮತ್ತು ಕಬ್ಬಿಣದ ಬೋರ್ಡ್ ತಯಾರಿಸಿ ನಾಮ ಫಲಕಗಳನ್ನು ಅಳವಡಿಸಲಾಗಿದೆ. ಶ್ರೀ ದತ್ತಾತ್ರೇಯನ ದರ್ಶನ ಕಿಂಡಿಯು ತುಂಬಾ ಕಿರಿದಾಗಿದ್ದು, ಇದನ್ನು ದೊಡ್ಡದಾಗಿ ನಿರ್ಮಿಸುವ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ ಜಿಲ್ಲಾಡಳಿತದಿಂದ ಪ್ರಸ್ತಾವನೆ ಸಲ್ಲಿಸಿದೆ ಎಂದು ಬಿ.ಫೌಝಿಯಾ ತರನ್ನುಮ್ ತಿಳಿಸಿದರು.

ಕಲಬುರಗಿ ಜಿಲ್ಲೆಯ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ 1,630 ದೇವಾಲಯಗಳ ಪೈಕಿ 1,324 ದೇವಸ್ಥಾನಗಳ ಸರ್ವೆ ದಾಖಲೆಗಳನ್ನು ತಯಾರಿಸಲಾಗಿರುತ್ತದೆ. ಘತ್ತರಗಾ ಶ್ರೀ ಭಾಗ್ಯವಂತಿ ದೇವಿ ದೇವಸ್ಥಾನದ ಅಭಿವೃದ್ಧಿಗೂ ಡಿ.ಪಿ.ಆರ್ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಜಿಲ್ಲಾಧಿಕಾರಿಗಳು, ಶ್ರೀ ದತ್ತಾತ್ರೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಸ್ವಚ್ಛತೆ ಹಾಗೂ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಹಲವಾರು ಕಾರ್ಯಕ್ರಮವನ್ನು ರೂಪಿಸಿದ್ದು, ಭಕ್ತಗಣ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನದಲ್ಲಿ ಸುಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X