Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉದ್ಯೋಗಿ, ಉದ್ಯೋಗದಾತರಿಗೆ...

Kalaburagi | ಉದ್ಯೋಗಿ, ಉದ್ಯೋಗದಾತರಿಗೆ 2,400 ಕೋಟಿ ರೂ. ಪ್ರೋತ್ಸಾಹಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 Jun 2026 9:25 PM IST
share
Kalaburagi | ಉದ್ಯೋಗಿ, ಉದ್ಯೋಗದಾತರಿಗೆ 2,400 ಕೋಟಿ ರೂ. ಪ್ರೋತ್ಸಾಹಧನ ವಿತರಣೆ
ಪ್ರಧಾನಮಂತ್ರಿ ವಿಕ್ಸಿತ್ ಭಾರತ್ ರೋಜಗಾರ್ ಯೋಜನೆ

ಕಲಬುರಗಿ: ಕಳೆದ ಆಗಸ್ಟ್ 2025ರಿಂದ ಹೊಸದಾಗಿ ಉದ್ಯೋಗಕ್ಕೆ ಸೇರಿದ ಉದ್ಯೋಗಿಗಳು ಹಾಗೂ ಉದ್ಯೋಗದಾತರಿಗೆ ಕೇಂದ್ರ ಸರ್ಕಾರದ ವಿಕಸಿತ ಭಾರತ ರೋಜಗಾರ್ ಯೋಜನೆಯಡಿ ಸುಮಾರು 2,400 ಕೋಟಿ ರೂ. ಪ್ರೋತ್ಸಾಹಧನವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿತರಣೆ ಮಾಡಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಬಿಟಿ (ನೇರ ಹಣ ವರ್ಗಾವಣೆ) ಮೂಲಕ ಪ್ರೋತ್ಸಾಹಧನ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವ ಯುವಕರಿಗೆ ಶಕ್ತಿ ತುಂಬುವ ಯೋಜನೆಯಿದು. ಉದ್ಯೋಗಿಗಳು ಮತ್ತು ಉದ್ಯೋಗದಾತರು ಅಭಿವೃದ್ಧಿಯ ಪಯಣದಲ್ಲಿ ಜೊತೆಯಾಗಿ ಹೆಜ್ಜೆ ಇಡುವ ಮೂಲಕ ವಿಕಸಿತ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ನೇರ ಪ್ರಸಾರವನ್ನು ಕಲಬುರಗಿಯ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸ್ಥಳೀಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ ಜಿ. ನಮೋಶಿ, ಪ್ರತಿಯೊಬ್ಬರ ಜೀವನದಲ್ಲಿ ಮೊದಲ ಉದ್ಯೋಗ ಮತ್ತು ಮೊದಲ ವೇತನ ಅತ್ಯಂತ ಸ್ಮರಣೀಯ ಕ್ಷಣವಾಗಿದೆ. ಎರಡು ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿರುವ ಈ ಯೋಜನೆ ಕಾರ್ಮಿಕ ವರ್ಗಕ್ಕೆ ಕೇಂದ್ರ ಸರ್ಕಾರ ನೀಡಿರುವ ಮಹತ್ವದ ಕೊಡುಗೆಯಾಗಿದೆ ಎಂದು ಹೇಳಿದರು.

ಇಪಿಎಫ್‌ಒ ಅಡಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಜೊತೆಗೆ ಶಿಕ್ಷಣ, ಕೌಶಲ್ಯ, ಉದ್ಯೋಗ ಹಾಗೂ ಘನತೆಯ ಬದುಕಿಗೆ ಅಗತ್ಯವಾದ ಅವಕಾಶಗಳನ್ನು ಈ ಯೋಜನೆ ಕಲ್ಪಿಸಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಇಪಿಎಫ್‌ಒ ಕಲಬುರಗಿ ಪ್ರಾಂತೀಯ ಆಯುಕ್ತ ಎಂ. ಸುಬ್ರಮಣ್ಯಂ, ಯೋಜನೆಯು ಆಗಸ್ಟ್ 2025ರಿಂದ ಜುಲೈ 2026ರವರೆಗೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಉದ್ಯೋಗಕ್ಕೆ ಸೇರುವ ಯುವಕರು ಹಾಗೂ ಉದ್ಯೋಗ ನೀಡುವ ಸಂಸ್ಥೆಗಳಿಗೆ ವಿಶೇಷ ಪ್ರೋತ್ಸಾಹಧನ ದೊರೆಯಲಿದೆ ಎಂದರು.

ಇಂದು ದೇಶಾದ್ಯಂತ ಸುಮಾರು 15 ಲಕ್ಷ ಉದ್ಯೋಗಿಗಳಿಗೆ ಡಿಬಿಟಿ ಮೂಲಕ ಪ್ರೋತ್ಸಾಹಧನ ವಿತರಿಸಲಾಗುತ್ತಿದ್ದು, ಕರ್ನಾಟಕದ 18,606 ಉದ್ಯೋಗಿಗಳು ಹಾಗೂ 57 ಉದ್ಯೋಗದಾತರಿಗೆ ಒಟ್ಟು 10 ಕೋಟಿ ರೂ. ಸಹಾಯಧನ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ನೇಮಕಾತಿ ಪತ್ರ ವಿತರಣೆ :

ಕಾರ್ಯಕ್ರಮದ ವೇಳೆ ಹೊಸದಾಗಿ ಉದ್ಯೋಗಕ್ಕೆ ಆಯ್ಕೆಯಾದ ಯುವಕರಿಗೆ ವಿವಿಧ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ನೇಮಕಾತಿ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಇಪಿಎಫ್‌ಒ ಪ್ರಾದೇಶಿಕ ಸಮಿತಿ ಸದಸ್ಯ ಶಂಕರ ಸುಲೆಗಾಂವ, ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ ಸೇರಿದಂತೆ ಅನೇಕ ಉದ್ಯಮಿಗಳು ಹಾಗೂ ಉದ್ಯೋಗಾರ್ಥಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X