Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗಾಣಗಾಪುರ ದತ್ತಾತ್ರೇಯ...

Kalaburagi | ಗಾಣಗಾಪುರ ದತ್ತಾತ್ರೇಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 250 ಕೋಟಿ ರೂ. ಮಾಸ್ಟರ್ ಪ್ಲ್ಯಾನ್

ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚದ ಆರು ಪ್ರಮುಖ ಕಾಮಗಾರಿಗಳಿಗೆ ಯೋಜನೆ ಸಿದ್ಧ

ವಾರ್ತಾಭಾರತಿವಾರ್ತಾಭಾರತಿ8 Nov 2026 6:17 PM IST
share
Kalaburagi | ಗಾಣಗಾಪುರ ದತ್ತಾತ್ರೇಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 250 ಕೋಟಿ ರೂ. ಮಾಸ್ಟರ್ ಪ್ಲ್ಯಾನ್

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 250 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗಿದೆ. ಇದರ ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ಸಿದ್ಧಪಡಿಸಲಾಗಿದೆ.

ಗೃಹ, ಐಟಿಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಮತ್ತು ವಿನ್ಯಾಸ ಸಿದ್ಧಪಡಿಸಲಾಗಿದೆ. ಮೊದಲ ಹಂತದ ಕಾಮಗಾರಿಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಸಂಪುಟದ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಂದಾಜು 50 ಕೋಟಿ ರೂ. ವೆಚ್ಚದ ಈ ಹಂತದಲ್ಲಿ ಆರು ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.

ಮೊದಲ ಹಂತದಲ್ಲಿ ಆರು ಪ್ರಮುಖ ಕಾಮಗಾರಿಗಳು :

ಮೊದಲ ಹಂತದ ಯೋಜನೆಯಡಿ 17.12 ಕೋಟಿ ರೂ. ವೆಚ್ಚದಲ್ಲಿ ಸಂಗಮ ಘಾಟ್, 12.50 ಕೋಟಿ ರೂ. ವೆಚ್ಚದಲ್ಲಿ ಪಾಪವಿನಾಶ ತೀರ್ಥ, 6.50 ಕೋಟಿ ರೂ. ವೆಚ್ಚದಲ್ಲಿ ಪ್ರೊಮೆನಡ್ ಟು ಟೆಂಪಲ್, 9.10 ಕೋಟಿ ರೂ. ವೆಚ್ಚದಲ್ಲಿ ಪಾರ್ಕಿಂಗ್ ಮತ್ತು ಟ್ರಾನ್ಸಿಟ್ ವ್ಯವಸ್ಥೆ, 52 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣದಿಂದ ದೇವಸ್ಥಾನದವರೆಗೆ ಪಾದಚಾರಿ ಮಾರ್ಗ ಹಾಗೂ 4.25 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಸಂಕೀರ್ಣದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.

ಎಲ್ಲಿ ಏನೆಲ್ಲ ಅಭಿವೃದ್ಧಿಯಾಗಲಿದೆ? :

ಸಂಗಮ ಘಾಟ್: 17.12 ಕೋಟಿ ರೂ. ವೆಚ್ಚದಲ್ಲಿ ಸಂಗಮ ಘಾಟ್ ಅಭಿವೃದ್ಧಿಪಡಿಸಲಾಗುತ್ತದೆ. ಇಲ್ಲಿ ವಾಹನಗಳ ಪಿಕಪ್ ಮತ್ತು ಡ್ರಾಪ್ ವ್ಯವಸ್ಥೆ, 70 ಕಾರುಗಳ ನಿಲುಗಡೆಗೆ ಪಾರ್ಕಿಂಗ್ ಸೌಲಭ್ಯ, 40 ವಾಣಿಜ್ಯ ಮಳಿಗೆಗಳು, ಉದ್ಯಾನವನ, ಮಾಹಿತಿ ಕೇಂದ್ರ, ಆಕರ್ಷಕ ವಿದ್ಯುತ್ ದೀಪಾಲಂಕಾರ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಯೋಜಿಸಲಾಗಿದೆ.

ಪಾಪವಿನಾಶ ತೀರ್ಥ: 12.50 ಕೋಟಿ ರೂ. ವೆಚ್ಚದಲ್ಲಿ ಪಾಪವಿನಾಶ ತೀರ್ಥವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಭಕ್ತರು ಸುರಕ್ಷಿತವಾಗಿ ತೀರ್ಥಸ್ನಾನ ಮಾಡಲು ಫ್ಲೋಟಿಂಗ್ ಜೆಟ್ಟಿ (ತೇಲುವ ಸ್ನಾನ ವೇದಿಕೆ), ಬಟ್ಟೆ ಬದಲಾಯಿಸುವ ಕೊಠಡಿಗಳು, ಉದ್ಯಾನವನ ಹಾಗೂ ಶೌಚಾಲಯ ನಿರ್ಮಿಸಲಾಗುತ್ತದೆ. ನದಿಗೆ ಇಳಿಯಲು 95 ಮೀಟರ್ ಉದ್ದದ ಮೆಟ್ಟಿಲುಗಳನ್ನು ನಿರ್ಮಿಸುವ ಯೋಜನೆಯೂ ಇದೆ.

ಪ್ರೊಮೆನಡ್ ಟು ಟೆಂಪಲ್: 6.50 ಕೋಟಿ ರೂ. ವೆಚ್ಚದಲ್ಲಿ ಮುಖ್ಯ ರಸ್ತೆಯಿಂದ ಮಹಾದ್ವಾರದ ಮೂಲಕ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳುವ 160 ಮೀಟರ್ ಉದ್ದದ ಮಾರ್ಗವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಮಾರ್ಗದಲ್ಲಿ 30 ಅಂಗಡಿಗಳು, ಸಾರ್ವಜನಿಕ ಶೌಚಾಲಯ, ಷಟಲ್ ಸರ್ವಿಸ್, ಮಾಹಿತಿ ಕೇಂದ್ರ ಹಾಗೂ ಪ್ರತಿಮೆ ಸ್ಥಾಪಿಸಲಾಗುತ್ತದೆ. ಭೂಗತ ವಿದ್ಯುತ್ ಸರಬರಾಜು ವ್ಯವಸ್ಥೆ ಕಲ್ಪಿಸುವುದರ ಜತೆಗೆ ಡಿಜಿಟಲೀಕರಣಕ್ಕೂ ಆದ್ಯತೆ ನೀಡಲಾಗುತ್ತದೆ. ಮಾರ್ಗದುದ್ದಕ್ಕೂ ಆಕರ್ಷಕ ವಿದ್ಯುತ್ ದೀಪಾಲಂಕಾರ ಇರಲಿದೆ.

ಪಾರ್ಕಿಂಗ್ ಮತ್ತು ಟ್ರಾನ್ಸಿಟ್ ವ್ಯವಸ್ಥೆ: ದೇವಸ್ಥಾನದಿಂದ ಸುಮಾರು 1.9 ಕಿ.ಮೀ. ದೂರದಲ್ಲಿರುವ ಚೌಡಾಪುರ ರಸ್ತೆಯ ದಿಕ್ಕಿನಲ್ಲಿ ಪಾರ್ಕಿಂಗ್ ಮತ್ತು ಟ್ರಾನ್ಸಿಟ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. 10 ಎಕರೆ ಪ್ರದೇಶದಲ್ಲಿ 8 ಎಕರೆ ಜಾಗವನ್ನು ಬಳಸಿಕೊಂಡು ಬೃಹತ್ ಪಾರ್ಕಿಂಗ್ ಸಂಕೀರ್ಣ ನಿರ್ಮಿಸುವ ಉದ್ದೇಶವಿದೆ. ಇಲ್ಲಿ 860 ಕಾರುಗಳು ಹಾಗೂ 500 ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಪಾರ್ಕಿಂಗ್ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಜತೆಗೆ ಮಾಹಿತಿ ಕೇಂದ್ರ ಮತ್ತು ಶೌಚಾಲಯ ನಿರ್ಮಿಸಲಾಗುತ್ತದೆ.

ಪಾದಚಾರಿ ಮಾರ್ಗ: 52 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣದಿಂದ ದೇವಸ್ಥಾನದವರೆಗೆ ಪಾದಚಾರಿ ಮಾರ್ಗ ನಿರ್ಮಿಸಲಾಗುತ್ತದೆ. 1.8 ಮೀಟರ್ ಅಗಲದ ಈ ಮಾರ್ಗದಲ್ಲಿ ಆಕರ್ಷಕ ಸಸಿಗಳನ್ನು ನೆಡಲಾಗುತ್ತದೆ. ಮಾರಾಟಗಾರರಿಗೆ ವ್ಯವಸ್ಥಿತ ಕಿಯೋಸ್ಕ್‌ಗಳನ್ನು ಸ್ಥಾಪಿಸುವುದರ ಜತೆಗೆ ಯಾತ್ರಿಕರು ವಿಶ್ರಾಂತಿ ಪಡೆಯಲು ಅಲ್ಲಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗುತ್ತದೆ.

ದೇವಸ್ಥಾನ ಸಂಕೀರ್ಣದ ಅಭಿವೃದ್ಧಿ: 4.25 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಗರ್ಭಗುಡಿಯ ದರ್ಶನಕ್ಕೆ ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ರೂಪಿಸಲಾಗುತ್ತದೆ. ವಿಐಪಿ ಪ್ರವೇಶಕ್ಕೂ ವ್ಯವಸ್ಥೆ ಕಲ್ಪಿಸಲಾಗುತ್ತದೆ. ದೇವಸ್ಥಾನದ ಪಕ್ಕದ ಕಟ್ಟಡದಲ್ಲಿ ಪೂಜೆ ಮತ್ತು ಅಭಿಷೇಕಕ್ಕೆ ಪ್ರತ್ಯೇಕ ಹಾಲ್ ನಿರ್ಮಿಸುವುದರ ಜತೆಗೆ ಭಕ್ತರು ಪಾದರಕ್ಷೆಗಳನ್ನು ಇರಿಸಲು ವ್ಯವಸ್ಥೆ ಮಾಡಲಾಗುತ್ತದೆ. ಅಂಗವಿಕಲರ ಅನುಕೂಲಕ್ಕಾಗಿ ವಿಶೇಷ ಪ್ರವೇಶ ಮಾರ್ಗವನ್ನೂ ನಿರ್ಮಿಸಲಾಗುತ್ತದೆ.

ಯಾತ್ರಿಕರು, ಪ್ರವಾಸಿಗರಿಗೆ ಆಕರ್ಷಕ ಕೇಂದ್ರ :

ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲದೆ, ಹೊರರಾಜ್ಯಗಳಿಂದಲೂ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಉದ್ಯಾನವನ, ವಿದ್ಯುತ್ ದೀಪಾಲಂಕಾರ, ಅಗತ್ಯ ಮೂಲಸೌಕರ್ಯ ಹಾಗೂ ವಾಣಿಜ್ಯ ಮಳಿಗೆಗಳನ್ನು ವ್ಯವಸ್ಥಿತವಾಗಿ ನಿರ್ಮಿಸಲು ಯೋಜಿಸಲಾಗಿದೆ. ನದಿ ತೀರದ ಸೌಂದರ್ಯೀಕರಣಕ್ಕೂ ಆದ್ಯತೆ ನೀಡಲಾಗಿದೆ. ಈ ಎಲ್ಲ ಅಭಿವೃದ್ಧಿ ಕಾರ್ಯಗಳಿಂದ ಗಾಣಗಾಪುರ ಕ್ಷೇತ್ರವು ಯಾತ್ರಿಕರು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.

ಗಾಣಗಾಪುರದ ಶ್ರೀ ದತ್ತಾತ್ರೇಯ ಕ್ಷೇತ್ರಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಒದಗಿಸಿ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಕಲಬುರಗಿ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ.

-ಪ್ರಿಯಾಂಕ್ ಖರ್ಗೆ, ಗೃಹ, ಐಟಿಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲಾ ಉಸ್ತುವಾರಿ ಸಚಿವರ ಆಶಯದಂತೆ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಗಾಣಗಾಪುರ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗಿದ್ದು, ಸರ್ಕಾರದಿಂದ ಶೀಘ್ರದಲ್ಲೇ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ಈ ಯೋಜನೆ ಜಾರಿಯಾದರೆ ಶ್ರೀ ದತ್ತಾತ್ರೇಯನ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

-ಇಕ್ರಮ್ ಶರೀಫ್, ಜಿಲ್ಲಾಧಿಕಾರಿ

Tags

Ganagapur DattatreyaKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X