Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆರೆಸ್ಸೆಸ್ ಇಡೀ ಮಾನವಕುಲದ...

ಕಲಬುರಗಿ | ಆರೆಸ್ಸೆಸ್ ಇಡೀ ಮಾನವಕುಲದ ವಿರೋಧಿ : ಚಿಂತಕ ಆರ್.ಕೆ.ಹುಡಗಿ

ವಾರ್ತಾಭಾರತಿವಾರ್ತಾಭಾರತಿ30 Jan 2026 10:05 PM IST
share
ಕಲಬುರಗಿ | ಆರೆಸ್ಸೆಸ್ ಇಡೀ ಮಾನವಕುಲದ ವಿರೋಧಿ : ಚಿಂತಕ ಆರ್.ಕೆ.ಹುಡಗಿ
ʼಸಹಬಾಳ್ವೆಯ ಸಂಚುಗಾರಕ್ಕೆ 100 ವರ್ಷʼ ವಿಚಾರ ಸಂಕಿರಣ

ಕಲಬುರಗಿ : ನೂರು ವರ್ಷಗಳನ್ನು ಪೂರೈಸುತ್ತಿರುವ ಆರೆಸ್ಸೆಸ್ ಇಡೀ ಮಾನವಕುಲದ ವಿರೋಧಿಯಾಗಿದೆ ಎಂದು ಚಿಂತಕ ಆರ್.ಕೆ. ಹುಡಗಿ ತಿಳಿಸಿದ್ದಾರೆ.

ನಗರದ ಕನ್ನಡ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ ಆಯೋಜಿಸಿದ್ದ ʼಸಹಬಾಳ್ವೆಯ ಸಂಚುಗಾರಕ್ಕೆ 100 ವರ್ಷʼ ವಿಷಯದ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಆರೆಸ್ಸೆಸ್ ಎಲ್ಲಿ ಕಾಲಿಡುತ್ತದೋ ಅಲ್ಲಿ ಸತ್ಯನಾಶವಾಗುತ್ತದೆ. ಅದರ ಅಪಾಯಗಳನ್ನು ಅರ್ಥಮಾಡಿಕೊಂಡು, ಅದನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಗಂಭೀರ ಚರ್ಚೆ ಅಗತ್ಯವಿದೆ ಎಂದರು.

ಇತ್ತೀಚೆಗೆ ಆರೆಸ್ಸೆಸ್ ಲಿಂಗಾಯತ ಸಮುದಾಯವನ್ನು ದುರ್ಬಲಗೊಳಿಸಲು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಲಿಂಗಾಯತ ತತ್ವಧಾರೆ ಆರೆಸ್ಸೆಸ್‌ನ ವಿಚಾರಧಾರೆಗೆ ದೊಡ್ಡ ಸವಾಲಾಗಿದೆ. ಬಸವಣ್ಣ ಮತ್ತು ಶರಣರು ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ಮಾಡಿಲ್ಲ ಎಂದು ಹೇಳುವ ಮೂಲಕ ಆರೆಸ್ಸೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ದೂರಿದರು.

ಕಳೆದ 100 ವರ್ಷಗಳಲ್ಲಿ ಆರೆಸ್ಸೆಸ್ ದೇಶದ್ರೋಹಿ ಹಾಗೂ ಅಸಂವಿಧಾನಿಕ ಚಟುವಟಿಕೆಗಳನ್ನೇ ನಡೆಸಿಕೊಂಡು ಬಂದಿದೆ. ದೇಶಕ್ಕೆ ಹೆಮ್ಮೆಪಡುವಂತಹ ಕೆಲಸಗಳನ್ನು ಮಾಡದೇ ಕೇವಲ ಸಂಚುಗಾರಿಕೆಯಲ್ಲಿ ತೊಡಗಿದೆ ಎಂದು ಅವರು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಭಾಷಣದಲ್ಲಿ ಆರೆಸ್ಸೆಸ್ ಬಗ್ಗೆ ಮಾತನಾಡಿರುವುದು ಹಾಗೂ ನಾಣ್ಯ ಬಿಡುಗಡೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ ಅವರು, “ಇಂದು ದೇಶದಲ್ಲಿ ಮೋದಿ ಇಲ್ಲ, ಬದಲಿಗೆ ಮೋಹನ್ ಭಾಗವತ್ ಇದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಬಸವದಳದ ಜಿಲ್ಲಾಧ್ಯಕ್ಷ ಆರ್.ಜಿ. ಶೆಟಗಾರ್, ದೇಶಕ್ಕಾಗಿ ಜೀವನ ಸಮರ್ಪಿಸಿದವರನ್ನು ಕೊಲೆ ಮಾಡುವ ಮನಸ್ಥಿತಿ ಭಯಾನಕವಾಗಿದೆ. ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಕೇವಲ ಒಂದೇ ಸಮುದಾಯ ಹೋರಾಟ ಮಾಡಿದರೆ ಸಾಲದು, ಎಲ್ಲಾ ಪ್ರಗತಿಪರ ಸಂಘಟನೆಗಳು ಒಗ್ಗೂಡಬೇಕು ಎಂದರು.

ಡಿಎಸ್ಎಸ್ ರಾಜ್ಯ ಸಂಚಾಲಕ ಅರ್ಜುನ್ ಭದ್ರೆ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾತಂತ್ರ್ಯ ನಂತರದಿಂದಲೂ ಆರೆಸ್ಸೆಸ್ ಬುದ್ಧ, ಬಸವ, ಅಂಬೇಡ್ಕರ್ ತತ್ವಗಳನ್ನು ವಿರೋಧಿಸುತ್ತಾ ಬಂದಿದೆ. ಸಂವಿಧಾನ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸದ ಈ ಸಂಘಟನೆ ದೇಶದಲ್ಲಿ ದ್ವೇಷ ಬಿತ್ತುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸಂಚಾಲಕ ಮಲ್ಲಿಕಾರ್ಜುನ್ ಕ್ರಾಂತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೋರಾಟಗಾರ ಮರಿಯಪ್ಪ ಹಳ್ಳಿ, ದತ್ತಾತ್ರೇಯ ಇಕ್ಕಳಕಿ, ರಾಷ್ಟ್ರೀಯ ಬಸವದಳದ ಜಿಲ್ಲಾಧ್ಯಕ್ಷ ಆರ್.ಜಿ.ಶೆಟಗಾರ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ, ಗುರುಲಿಂಗಪ್ಪ ಕೋಟನೂರ, ಅರ್ಜುನ್ ಗೊಬ್ಬೂರ, ಮೀನಾಕ್ಷಿ ಅಜಾದಪುರ, ಜಯಪಾಲ ಭದ್ರೆ, ಭೀಮರಾವ್ ಗೌಡ, ಬಸಲಿಂಗಮ್ಮ ಏವೂರ, ರೇಣುಕಾ ಸಿಂಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಅಪ್ಪಣ್ಣ ಗಾಯಕ್ವಾಡ್ ಸ್ವಾಗತಿಸಿದರು.

ಭಾರತ ದೇಶವನ್ನು ಒಡೆದದ್ದು ಸಾವರ್ಕರ್ :

ಭಾರತ ದೇಶವನ್ನು ನಿಜವಾಗಿ ಒಡೆದಿದ್ದು ಸಾವರ್ಕರ್. ಈತ 1935 ರ ಹಿಂದೆಯೇ ಎರಡು ದೇಶಗಳನ್ನು ಪ್ರತಿಪಾದಿಸಿದವನು. ಇದಾದ ಬಳಿಕವೇ ಮುಹಮ್ಮದ್ ಅಲಿ ಜಿನ್ನಾ ಪ್ರತ್ಯೇಕ ದೇಶದ ಬೇಡಿಕೆ ಇಟ್ಟವನು. ಆದರೆ ಈಗ ನೋಡಿದರೆ ಗಾಂಧಿ, ನೆಹರೂ ಅವರೇ ದೇಶ ಒಡೆದವರು ಎನ್ನುತ್ತಿದ್ದಾರೆ.

-ಪ್ರೊ.ಆರ್.ಕೆ ಹುಡಗಿ (ಚಿಂತಕ)

Tags

R.K.HudagiRSSKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X