ಕಲಬುರಗಿ| ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ್‌ರಿಗೆ ಸಚಿವ ಸ್ಥಾನ ನೀಡುವಂತೆ ಸಾಬಣ್ಣ ಭರಾಟೆ ಆಗ್ರಹ

ಕಲಬುರಗಿ: ಕೋಲಿ ಸಮಾಜದ ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕೋಲಿ ಸಮಾಜಕ್ಕೆ ನಿಜವಾದ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ಕೋಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಸಾಬಣ್ಣ ಭರಾಟೆ ದಂಡೋತಿ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಸಾಬಣ್ಣ ಭರಾಟೆ, ತಿಪ್ಪಣ್ಣಪ್ಪ ಕಮಕನೂರ್ ಅವರನ್ನು ಮಂತ್ರಿಯನ್ನಾಗಿ ಮಾಡಿದಾಗ ಮಾತ್ರ ಕೋಲಿ ಸಮಾಜಕ್ಕೆ ನ್ಯಾಯ ಒದಗಿಸಿಕೊಟ್ಟಂತಾಗುತ್ತದೆ. ರಾಜ್ಯದಲ್ಲಿ 40 ರಿಂದ 50 ಲಕ್ಷ ಜನಸಂಖ್ಯೆ ಹೊಂದಿರುವ ಕೋಲಿ ಸಮಾಜ, ಕಾಂಗ್ರೆಸ್ ಪಕ್ಷಕ್ಕೆ ಪ್ರಮುಖ ಬೆಂಬಲ ನೀಡುತ್ತಾ ಬಂದಿದೆ. ಹಿಂದುಳಿದ ವರ್ಗಗಳ ಪರವಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೋಲಿ ಸಮಾಜದ ಈ ನ್ಯಾಯಬದ್ದ ಬೇಡಿಕೆಯನ್ನು ಪರಿಗಣಿಸಿ ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಾಬಣ್ಣ ಭರಾಟೆ ಆಗ್ರಹಿಸಿದ್ದಾರೆ.
Next Story





