Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಕೀಲ ರಾಕೇಶ್ ಕಿಶೋರ್‌...

ಕಲಬುರಗಿ | ವಕೀಲ ರಾಕೇಶ್ ಕಿಶೋರ್‌ ಗಡಿಪಾರಿಗೆ ಸಮತಾ ಸೈನಿಕ ದಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Oct 2025 9:34 PM IST
share
ಕಲಬುರಗಿ | ವಕೀಲ ರಾಕೇಶ್ ಕಿಶೋರ್‌ ಗಡಿಪಾರಿಗೆ ಸಮತಾ ಸೈನಿಕ ದಳ ಆಗ್ರಹ

ಕಲಬುರಗಿ: ಸುಪ್ರೀಂ ಕೋರ್ಟ್ ಗೌರವಾನ್ವಿತ ಪೀಠಕ್ಕೆ ಅವಮಾನ ಮಾಡಿದ ವಕೀಲರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ಸಮತಾ ಸೈನಿಕ ದಳ ಕಲಬುರಗಿ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಭಾರತವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅದರ ಮೂಲ ಅಸ್ತಿತ್ವವು ಸಂವಿಧಾನ ಮತ್ತು ನ್ಯಾಯಾಂಗದ ಗೌರವದಿಂದಲೇ ಉಳಿದಿದೆ. ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನ ಪವಿತ್ರ ಪೀಠಕ್ಕೆ ಶೂ ಎಸೆದು ಅಪಮಾನ ಮಾಡಿದ ವಕೀಲ ರಾಕೇಶ್ ಕಿಶೋರ್ ಕೃತ್ಯವು ಕೇವಲ ಒಬ್ಬ ವ್ಯಕ್ತಿಯ ಮೇಲಿನ ದಾಳಿ ಅಲ್ಲ. ಅದು ಭಾರತದ ಸಂವಿಧಾನದ ಆತ್ಮದ ಮೇಲಿನ ನೇರ ಅವಮಾನವಾಗಿದೆ. ಇದು ಕೇವಲ ಕಾನೂನು ಉಲ್ಲಂಘನೆ ಅಲ್ಲ. ಇದು ಸಂವಿಧಾನ, ನ್ಯಾಯಾಂಗ ಮತ್ತು ರಾಷ್ಟ್ರದ ಘನತೆಗೆ ವಿರುದ್ಧವಾದ ಅತಿದೊಡ್ಡ ಅಪರಾಧ. ಇಂತಹ ಕೃತ್ಯಗಳಿಗೆ ದೇಶದ ಪ್ರತಿ ನಾಗರಿಕನು ಖಂಡನೆ ವ್ಯಕ್ತಪಡಿಸಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಮ್ಮ ಸಂವಿಧಾನದ ಕಂಬಗಳಂತಿದ್ದಾರೆ. ಅವರು ನ್ಯಾಯ, ಸಮಾನತೆ ಮತ್ತು ಸತ್ಯಕ್ಕಾಗಿ ಬದ್ಧರಾಗಿದ್ದಾರೆ. ಇಂತಹ ನ್ಯಾಯಮೂರ್ತಿಗಳ ಗೌರವಕ್ಕೆ ಧಕ್ಕೆ ತಂದವರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPಅ) ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಅತ್ಯವಶ್ಯಕ ಎಂದು ಹೇಳಿದರು.

ಅವರು ಮಾಡಿದ ಕೃತ್ಯವು ಕೇವಲ ನ್ಯಾಯಾಂಗವನ್ನೇ ಅಲ್ಲ. ಬಾಬಾ ಸಾಹೇಬ್‌ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಿಗೆ ಮತ್ತು ಅವರ ಸಂವಿಧಾನಿಕ ಪರಂಪರೆಗೆ ಅಪಮಾನವಾಗಿದೆ. ಅಂಬೇಡ್ಕರ್ ಅವರು ಶಿಕ್ಷಣದಿಂದ ಶಕ್ತಿ ಪಡೆದು ಸಮಾನತೆ ಮತ್ತು ಮಾನವೀಯತೆಗಾಗಿ ಸಂವಿಧಾನವನ್ನು ರಚಿಸಿದ್ದರು. ಇಂತಹ ಅಪಮಾನಕಾರಿ ನಡೆಗಳು ಅವರ ಕನಸುಗಳ ಭಾರತವನ್ನು ಕಳಂಕಗೊಳಿಸುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಭಾರತದ ನ್ಯಾಯಾಂಗವು ಪ್ರಜಾಪ್ರಭುತ್ವದ ಹೃದಯವಾಗಿದೆ. ಅದರ ಮೇಲೆ ಕಲ್ಲು ಎಸೆಯುವವರು, ಭಾರತ ಸಂವಿಧಾನದ ನಾಳಗಳನ್ನು ಕತ್ತರಿಸುವವರಂತಿದ್ದಾರೆ. ನಾವು ಕರ್ನಾಟಕ ಸಮತಾ ಸೈನಿಕ ದಳ ಕಲಬುರಗಿ ಪರವಾಗಿ, ರಾಷ್ಟ್ರಪತಿಗಳಿಂದ ನ್ಯಾಯ ಮತ್ತು ಕ್ರಮದ ನಿರೀಕ್ಷೆಯಲ್ಲಿದ್ದೇವೆ. ವಕೀಲ ಕಿಶೋರ್‌ ರಾಕೇಶ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂದರ್ಭದಲ್ಲಿ ವಿಭಾಗೀಯ ಅಧ್ಯಕ್ಷ ಸಂಜೀವ ಟಿ.ಮಾಲೆ, ಜಿಲ್ಲಾಧ್ಯಕ್ಷ ಈರಣ್ಣಾ ಜಾನ, ಮಾಜಿ ಸಿಂಡಿಕೇಟ್ ಸದಸ್ಯ ಡಾ. ಸುನೀಲಕುಮಾರ ವಂಟಿ, ಅಪ್ಪಾರಾವ ಭಾವಿಮನಿ, ಶರಣು ಕಡಗಂಚಿ, ಮಹಾದೇವ ನಾಟೀಕಾರ, ಸಿದ್ದಾರ್ಥ ಕಣಮಸ್, ಶಿವಲಿಂಗಮ್ಮ ಸಾವಳಗಿ, ಜ್ಯೋತಿ ದರ್ಗಿ, ಅಮೃತಾವ ನಾಯಿಕೋಡಿ, ಖತಲಪ್ಪ ಕಟ್ಟಿಮನಿ, ಮಲ್ಲಿಕಾರ್ಜುನ ಉದಯಕರ, ಇಂದುಮತಿ ಭರತನೂರ, ಪದ್ಮಾ ಅಟ್ಟೋಕರ ನಗರ, ವಿಜಯಕುಮಾರ ಸಾವಳಗಿ, ಸೂರ್ಯಕಾಂತ ಅಂಬಲಗಿ, ಶಿವಮೂರ್ತಿ ಬಳಚಕ್ರ, ವಿಜಯಕುಮಾರ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X