Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ2 Oct 2026 7:19 PM IST
share
ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ ಸತ್ಯಾಗ್ರಹ

ಕಲಬುರಗಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಎಸ್‌ಐಆರ್‌ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಹಾಗೂ ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದವರ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನದ ವತಿಯಿಂದ ಶುಕ್ರವಾರ ನಗರದ ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಹೋರಾಟಗಾರರು, ಚುನಾವಣಾ ಆಯೋಗದ ಸ್ವತಂತ್ರ, ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಇತ್ತೀಚೆಗೆ ವ್ಯಕ್ತವಾಗಿರುವ ಆಕ್ಷೇಪಗಳು ಹಾಗೂ ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ ಮತ್ತು ಮರುಸ್ಥಾಪನೆ ಸೇರಿದಂತೆ ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕರ ನಂಬಿಕೆಯನ್ನು ಮರುಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅರ್ಜಿ ನಮೂನೆ–7ರ ಮೂಲಕ ಮತದಾರರ ವಿರುದ್ಧ ಸಲ್ಲಿಸಲಾಗಿರುವ ಆಕ್ಷೇಪಣೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಆಕ್ಷೇಪಣೆಗಳ ಹಿಂದೆ ಯಾರಿದ್ದಾರೆ ಹಾಗೂ ಅವುಗಳ ಉದ್ದೇಶವೇನು ಎಂಬುದನ್ನು ಪತ್ತೆಹಚ್ಚಿ, ಮತದಾನದ ಹಕ್ಕಿಗೆ ಧಕ್ಕೆ ಉಂಟುಮಾಡಿರುವುದು ತನಿಖೆಯಿಂದ ದೃಢಪಟ್ಟಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಬೇಕು ಹಾಗೂ ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಬಲಪಡಿಸಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಸಾಥ್ ನೀಡಿದರು. ಆಂದೋಲನದ ಸಂಚಾಲಕರಾದ ಮಹೇಶಕುಮಾರ ರಾಠೋಡ, ಅಫಝಲ್ ಮಹಿಮೂದ್, ಕೆ.ನೀಲಾ, ಫಾದರ್ ಸ್ಟ್ಯಾನಿ ಲೋಬೋ, ಮೀನಾಕ್ಷಿ ಬಾಳಿ, ಆರ್.ಕೆ. ಹುಡಗಿ, ಸಲೀಂ ಅಹಮದ್ ಚಿತಾಪುರಿ, ಮುಬೀನ್ ಅಹ್ಮದ್, ಎಸ್.ಆರ್. ಕೊಲ್ಲೂರ, ಶರಣಬಸಪ್ಪ ಮಮಶೆಟ್ಟಿ, ಮಹೇಶ ಎಸ್.ಬಿ., ಅಬ್ದುಲ್ ಜಬ್ಬಾರ, ಎಸ್.ಎಂ. ಶರ್ಮಾ, ಕರೆಪ್ಪ ಕರಗೊಂಡ, ಕೋದಂಡರಾಮ, ಸಂಧ್ಯಾರಾಜ್ ಸ್ಯಾಮ್ಯುಯೆಲ್, ಲವಿತ್ರ ವಸ್ತ್ರದ್, ರೇಣುಕಾ ಸಿಂಗೆ, ಗುರು ಚಾಂದಕವಠೆ, ಪಾಂಡುರಂಗ ಮಾವಿನಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

KalaburagiCECGyanesh Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X