Kalaburagi | ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಎಸ್‌ಬಿ ವಾಣಿಜ್ಯ ವಿದ್ಯಾರ್ಥಿ ತೇರ್ಗಡೆ

ಕಲಬುರಗಿ: ನಗರದ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸೈಯದ್ ಸುಲೈಮಾನ್ ಅವರು ಜೂನ್ ತಿಂಗಳಲ್ಲಿ ನಡೆದ ಸಿ.ಎ. (ಚಾರ್ಟರ್ಡ್ ಅಕೌಂಟೆನ್ಸಿ) ಫೌಂಡೇಶನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್. ಅಪ್ಪ, 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಎಸ್. ಅಪ್ಪ ಹಾಗೂ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಅಭಿನಂದಿಸಿ, ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದಾರೆ.
ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಶರಥ ಮೇತ್ರೆ, ನ್ಯಾಕ್ ಸಂಯೋಜಕರಾದ ಡಾ. ಸುನಂದಾ ವಾಂಜರಖೇಡೆ, ಪ್ರೊ. ದಯಾನಂದ ಹೊಡಲ್ ಸೇರಿದಂತೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೈಯದ್ ಸುಲೇಮಾನ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Next Story




