Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ʼಡಿ.28, 29ರಂದು...

ಕಲಬುರಗಿ | ʼಡಿ.28, 29ರಂದು ಬಾಗಲೂರಿನಲ್ಲಿ ವೈಜ್ಞಾನಿಕ ಸಮ್ಮೇಳನʼ

ವಾರ್ತಾಭಾರತಿವಾರ್ತಾಭಾರತಿ25 Dec 2024 5:39 PM IST
share
Photo of Press meet

ಕಲಬುರಗಿ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ.28 ಮತ್ತು 29ರಂದು ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಬಾಗಲೂರು ವಿ.ಜೆ. ಇಂಟರ್ ನ್ಯಾಶನಲ್ ಶಾಲಾ ಮೈದಾನದಲ್ಲಿ 4ನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ನಡೆಯಲಿದೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ.ಶೀವರಂಜನ ಸತ್ಯಂಪೇಟೆ ತಿಳಿಸಿದರು.

ಬುಧವಾರ ನಗರದ ಪತ್ರಿಕಾಭವನದಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಚಿವೆ, ರಂಗಕರ್ಮಿ, ಚಲನಚಿತ್ರನಟಿ ಉಮಾಶ್ರೀ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನವನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. 28ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ, ಸತೀಶ್ ಜಾರಕಿಹೊಳಿ, ಎನ್.ಎಸ್.ಬೋಸರಾಜ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಾಸಕರಾದ ಎಸ್.ಆರ್.ವಿಶ್ವನಾಥ, ಮಂಜುಳಾ ಅರವಿಂದ ಲಿಂಬಾವಳಿ, ಮುನಿರತ್ನ, ರಾಮಮೂರ್ತಿ, ಎಸ್.ಟಿ.ಸೋಮಶೇಖರ ಮತ್ತಿತರರು ಭಾಗವಹಿಸಲಿದ್ದಾರೆ. ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ನಮ್ಮ ಸಂವಿಧಾನ ನಮ್ಮ ಹಕ್ಕು, ಪ್ರಸ್ತುತ ರೈತರ ಭವಣೆಗಳು, ಪ್ರಸ್ತುತ ಶೈಕ್ಷಣಿಕ ತಲ್ಲಣಗಳು, ಅಂಗೈಯಲ್ಲಿ ಆರೋಗ್ಯ, ಸ್ತ್ರೀ ಮನದ ತಲ್ಲಣಗಳು, ಸೈಬರ್ ಸುರಕ್ಷತೆ ವಿಷಯ ಕುರಿತು ಮೂರು ಗೋಷ್ಠಿಗಳು ಜರುಗಲಿದ್ದು, ಜಸ್ಟಿಸ್ ನಾಗಮೋಹನದಾಸ್, ಡಾ.ಪುರುಷೋತ್ತಮ ಬಿಳಿಮಲೆ, ಎಚ್.ಕೆ.ವಿವೇಕಾನಂದ, ಡಾ.ಆಂಜನಪ್ಪ, ಡಾ.ಪ್ರೇಮ ಸಿದ್ಧರಾಜು, ಡಾ.ಉದಯಶಂಕರ ಪುರಾಣಿಕ ಅವರು ವಿಷಯ ಮಂಡಿಸಲಿದ್ದಾರೆ ಎಂದು ಹೇಳಿದರು.

29ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಬೆಂಗಳೂರು ಕೃಷಿ ವಿವಿ ವಿಶ್ರಾಂತ ನಿರ್ದೇಶಕ ಕೆ.ನಾರಾಯಣಗೌಡ ಸಮಾರೋಪ ನುಡಿಗಳನ್ನಾಡಲಿದ್ದಾರೆ. ನಂತರ ನಡೆಯಲಿರುವ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ ವಹಿಸಲಿದ್ದು, ಹುಲಿಕಲ್ ನಟರಾಜ್ ಅವರಿಂದ ಪವಾಡ ಬಯಲು ಕಾರ್ಯಕ್ರಮ ಹಾಗೂ ಕೆಂಪೇಗೌಡ ನಾಟಕ ಪ್ರದರ್ಶನವಾಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಣಮಂತರಾಯ ಐನೂಲಿ, ಡಾ.ಅಶೋಕ ದೊಡ್ಡಮನಿ, ಸಂಗಣ್ಣ ಜಿ.ಸತ್ಯಂಪೇಟೆ, ಸತೀಶ ಸಜ್ಜನಶೆಟ್ಟಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಶಸ್ತಿ ಪುರಸ್ಕೃತ ಸಾಧಕರು :

ಇದೇ ವೇಳೆಯಲ್ಲಿ ರಾಜ್ಯಮಟ್ಟದ ಜೀವಮಾನ ಸಾಧನಾ ಪ್ರಶಸ್ತಿ, ಹೆಚ್.ಎನ್. ಪ್ರಶಸ್ತಿ ಹಾಗೂ ಚೈತನ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಲಬುರಗಿ ಜಿಲ್ಲೆಯಿಂದ ಜೀವಮಾನ ಸಾಧನಾ ಪ್ರಶಸ್ತಿಗೆ ಮುಖ್ಯಮಂತ್ರಿ ಸಲಹೆಗಾರ ಹಾಗೂ ಶಾಸಕ ಬಿ.ಆರ್.ಪಾಟೀಲ್ ಎಚ್.ಎನ್., ಡಾ.ನೀಲಾಂಬಿಕಾ ಪೊಲೀಸ್ ಪಾಟೀಲ, ಚೈತನ್ಯಶ್ರೀ ಪ್ರಶಸ್ತಿಗೆ ಜಯಶ್ರೀ ಚಟ್ನಳ್ಳಿ ಆಯ್ಕೆಯಾಗಿದ್ದಾರೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X