Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ನಟರಾಜ್ ಹುಳಿಯಾರ್ ಅವರ...

ಕಲಬುರಗಿ| ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’ ಕೃತಿಯ ಎರಡನೇ ಮುದ್ರಣ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 Oct 2026 7:14 PM IST
share
ಕಲಬುರಗಿ| ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’ ಕೃತಿಯ ಎರಡನೇ ಮುದ್ರಣ ಬಿಡುಗಡೆ

ಕಲಬುರಗಿ: ಡಾ. ರಾಮ ಮನೋಹರ ಲೋಹಿಯಾ ಅವರು ಭಾರತದಲ್ಲಿ ಸಮತಾ ಸಮಾಜ ನಿರ್ಮಾಣದ ಕನಸು ಹೊತ್ತ ಬಹುದೊಡ್ಡ ಹೋರಾಟಗಾರರಾಗಿದ್ದರು ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಶಾಸಕರಾದ ಬಿ.ಆರ್. ಪಾಟೀಲ್ ಹೇಳಿದರು.

ನಗರದ ರಂಗಾಯಣದಲ್ಲಿ ಮಂಗಳವಾರ ಲೇಖಕ ನಟರಾಜ್ ಹುಳಿಯಾರ್ ಅವರು ರಚಿಸಿದ ಡಾ. ರಾಮ ಮನೋಹರ ಲೋಹಿಯಾ ಅವರ ಜೀವನಯಾನವನ್ನು ಪರಿಚಯಿಸುವ ‘ಡಾಕ್ಟರ್ ಸಾಹೇಬ್’ ಕೃತಿಯ ಎರಡನೇ ಮುದ್ರಣವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಲೋಹಿಯಾ ಅವರು ನಿಷ್ಠುರ ಚಿಂತಕರಾಗಿದ್ದರು. “ನಾನು ಇರುವವರೆಗೆ ನನ್ನ ಮಾತುಗಳನ್ನು ಯಾರೂ ನಂಬುವುದಿಲ್ಲ. ಆದರೆ ನಾನು ಸತ್ತ ಮೇಲೆ ನನ್ನ ವಿಚಾರಗಳನ್ನು ಎಲ್ಲರೂ ನಂಬುತ್ತಾರೆ” ಎಂದು ಅವರೇ ಹೇಳಿದ್ದರು. ಗಾಂಧೀಜಿಯವರೊಂದಿಗೆ ಗುರುತಿಸಿಕೊಂಡು ಲೋಹಿಯಾ ಚಿಂತನೆಗಳನ್ನು ಪ್ರತಿಪಾದಿಸಿದ ಅವರು ಸಾಮಾಜಿಕ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿದ್ದ ಲೋಹಿಯಾ ಅವರು ಗ್ರಾಮ, ಜಿಲ್ಲೆ, ವಿಧಾನಸಭೆ ಮತ್ತು ಸಂಸತ್ ಮಟ್ಟದಲ್ಲಿ ಆಡಳಿತ ವ್ಯವಸ್ಥೆ ಇರಬೇಕೆಂದು ಪ್ರತಿಪಾದಿಸಿದ್ದರು. ಚುನಾವಣೆಯಲ್ಲಿ ಹಣದ ಬಳಕೆಯನ್ನು ಕಟುವಾಗಿ ವಿರೋಧಿಸುವ ಮೂಲಕ ಭಾರತೀಯ ರಾಜಕಾರಣಕ್ಕೆ ಹೊಸ ಆಯಾಮ ನೀಡಿದ ರಾಜಕಾರಣಿಯಾಗಿದ್ದರು. ಅಕ್ಕಮಹಾದೇವಿಯವರ ಚಿಂತನೆಗಳಿಂದ ಪ್ರೇರಿತರಾಗಿ ಪುರುಷ ಪ್ರಧಾನ ವ್ಯವಸ್ಥೆಯನ್ನು ವಿರೋಧಿಸಿದ್ದರು. ಕಲಬುರಗಿಯ ಸಮಾಜವಾದಿ ಚಿಂತಕರಾಗಿದ್ದ ವೀರಣ್ಣ ತಿಮ್ಮಾಜಿ ಅವರ ಮೂಲಕ ಅಕ್ಕಮಹಾದೇವಿ ಮತ್ತು ಬಸವಣ್ಣನವರ ತತ್ವಗಳನ್ನು ತಿಳಿದುಕೊಂಡಿದ್ದರು ಎಂದು ವಿವರಿಸಿದರು.

ಸಮೃದ್ಧ ಭಾರತ ನಿರ್ಮಾಣಕ್ಕೆ ಸಮತೆಯ ಸಮಾಜದ ಚಿಂತನೆಗಳು ಇಂದು ಅತ್ಯಂತ ಅಗತ್ಯವಾಗಿವೆ. ಈ ಕಾರಣದಿಂದ ಕರ್ನಾಟಕದಲ್ಲಿ ಅನೇಕ ಸಮಾಜವಾದಿ ಚಿಂತಕರು ರೂಪುಗೊಂಡಿದ್ದಾರೆ. ಈ ಕೃತಿ ಲೋಹಿಯಾ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಲು ಪ್ರೇರಣೆ ನೀಡಲಿದೆ ಎಂದು ಬಿ.ಆರ್. ಪಾಟೀಲ್ ಅಭಿಪ್ರಾಯಪಟ್ಟರು.

ಸಾಹಿತಿ ಹಾಗೂ ಅನುವಾದಕಿ ಡಾ. ಹೇಮಾ ಪಟ್ಟಣಶೆಟ್ಟಿ ಮಾತನಾಡಿ, ಲೋಹಿಯಾ ಅವರು ಮಾನವತಾವಾದಿ ವ್ಯಕ್ತಿತ್ವದವರಾಗಿದ್ದರು. ಭಾರತದ ಬಡತನ ಮತ್ತು ಹಸಿವಿನ ಸಮಸ್ಯೆಗಳನ್ನು ಅರಿಯಲು ಹೊರಟ ದೂರದೃಷ್ಟಿಯ ಚಿಂತಕರಾಗಿದ್ದರು ಎಂದು ಹೇಳಿದರು.

ಮಾನವೀಯತೆ ಮತ್ತು ತಾರ್ಕಿಕ ಚಿಂತನೆಯನ್ನು ಮೈಗೂಡಿಸಿಕೊಂಡಿದ್ದ ಲೋಹಿಯಾ ಅವರು ಸಮಾಜವಾದದ ಮೂಲಕ ಪ್ರಜಾಪ್ರಭುತ್ವದಲ್ಲಿ ಗಂಡು-ಹೆಣ್ಣಿನ ಸಮಾನತೆಯನ್ನು ತೀವ್ರವಾಗಿ ಪ್ರತಿಪಾದಿಸಿದ್ದರು. ಲೋಹಿಯಾ ಅವರ ಸಮಗ್ರ ವ್ಯಕ್ತಿತ್ವವನ್ನು ಲೇಖಕ ನಟರಾಜ್ ಹುಳಿಯಾರ್ ಅವರು ಮೂರು ದಶಕಗಳ ಅಧ್ಯಯನ ಮತ್ತು ಚಿಂತನೆಯ ಫಲವಾಗಿ ಸತ್ಯನಿಷ್ಠೆಯಿಂದ ಕಟ್ಟಿಕೊಟ್ಟು ಓದುಗರಿಗೆ ನೀಡಿದ್ದಾರೆ. ಲೋಹಿಯಾ ಅವರ ಸಮಾನತಾವಾದಿ ಚಿಂತನೆಗಳಿಂದ ಆಕರ್ಷಿತರಾದ ನೂರಾರು ಲೇಖಕರು ತಮ್ಮ ಬರಹಗಳ ಮೂಲಕ ಆ ವಿಚಾರಧಾರೆಗೆ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.

ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಿಕ್ರಮ್ ವಿಸಾಜಿ ಮಾತನಾಡಿ, ಲೋಹಿಯಾ ಮತ್ತು ಅಂಬೇಡ್ಕರ್ ಅವರ ರಾಜಕೀಯ ಚಿಂತನೆಗಳು ಮುಖಾಮುಖಿಯಾದ ಕಾಲಘಟ್ಟವನ್ನು ನಟರಾಜ್ ಹುಳಿಯಾರ್ ತಮ್ಮ ಒಳನೋಟದ ಮೂಲಕ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಈ ಕೃತಿಯಲ್ಲಿ ಲೋಹಿಯಾ ಅವರ ವೈಯಕ್ತಿಕ ಜೀವನ, ವಿಚಾರಧಾರೆ, ರಾಜಕೀಯ ಸಾಧ್ಯತೆಗಳು ಹಾಗೂ ಭಾರತೀಯ ಸಂಸ್ಕೃತಿಯನ್ನು ಅವರು ಗ್ರಹಿಸಿದ ರೀತಿಯನ್ನು ಜೀವನಯಾನದ ಮೂಲಕ ಪರಿಚಯಿಸಲಾಗಿದೆ. ಚರಿತ್ರೆಯನ್ನು ಓದುವ ಮತ್ತು ಅರ್ಥೈಸಿಕೊಳ್ಳುವ ಬಗೆಯ ಕುರಿತು ಎಚ್ಚರ ಮೂಡಿಸುವ ಲೋಹಿಯಾ ಅವರ ಚಿಂತನೆಗಳನ್ನು ಕೃತಿ ಒಳಗೊಂಡಿದೆ. ನಿರಾಕರಣೆ ಮತ್ತು ಸ್ವೀಕಾರದ ನೆಲೆಗಳನ್ನು ತಿಳಿಸಿಕೊಡುವ ಮಹತ್ವದ ಕೃತಿ ಇದಾಗಿದೆ ಎಂದು ಅಭಿಪ್ರಾಯಪಟ್ಟರು.

ಕೃತಿಯ ಲೇಖಕ ನಟರಾಜ್ ಹುಳಿಯಾರ್ ಮಾತನಾಡಿ, ಇಂತಹ ಕೃತಿ ರಚನೆಗೆ ಚಿಂತಕರ ಬರಹಗಳು ಹಾಗೂ ಅನೇಕ ಲೇಖನಗಳು ಪ್ರೇರಣೆಯಾಗಿವೆ. ಯಾವುದೇ ಲೇಖಕ ಕೃತಿ ರಚಿಸುವ ಮೊದಲು ಆತ್ಮಕಥನದ ಮೂಲಕ ಸತ್ಯವನ್ನು ದಾಖಲಿಸುವ ಪ್ರಯತ್ನ ಮಾಡಬೇಕು. ಆಗ ಮಾತ್ರ ಆತ ನಿಜವಾದ ಲೇಖಕನಾಗಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಕೃತಿಯ ಮೊದಲ ಮುದ್ರಣದ ಒಂದು ಸಾವಿರ ಪ್ರತಿಗಳೂ ಸಂಪೂರ್ಣವಾಗಿ ಮಾರಾಟವಾಗಿದ್ದು, ಎರಡನೇ ಮುದ್ರಣಕ್ಕೆ ಬೇಡಿಕೆ ಬಂದಿರುವುದು ಓದುಗರಲ್ಲಿ ಲೋಹಿಯಾ ಅವರ ಚಿಂತನೆಗಳ ಮೇಲಿರುವ ಪ್ರೀತಿಗೆ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕುಮಾರಿ ಪೂಜಾ ಪ್ರಾರ್ಥನಾ ಗೀತೆ ಹಾಡಿದರು. ಪಲ್ಲವ ಪ್ರಕಾಶನದ ವೆಂಕಟೇಶ್ ಅವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಜೀಮ್ ಪಾಷಾ ವಂದನಾರ್ಪಣೆ ಮಾಡಿದರು. ಕಿರಣ್ ವಲ್ಯಾಪುರೆ ಕಾರ್ಯಕ್ರಮ ನಿರೂಪಿಸಿದರು.

Tags

KalaburagiNataraj Hluiyar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X