Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜನರ ಹೃದಯದಲ್ಲಿ ಸ್ಥಾನ...

Kalaburagi | ಜನರ ಹೃದಯದಲ್ಲಿ ಸ್ಥಾನ ಪಡೆದಿರುವುದೇ ನನ್ನ ದೊಡ್ಡ ಸಾಧನೆ: ಹನೀಫಾ ಎಂ.ಶೇಖ್

ವಾರ್ತಾಭಾರತಿವಾರ್ತಾಭಾರತಿ10 July 2026 8:17 PM IST
share
Kalaburagi | ಜನರ ಹೃದಯದಲ್ಲಿ ಸ್ಥಾನ ಪಡೆದಿರುವುದೇ ನನ್ನ ದೊಡ್ಡ ಸಾಧನೆ: ಹನೀಫಾ ಎಂ.ಶೇಖ್

ಕಲಬುರಗಿ : “ನಾನು ಸ್ವತಃ ಯಾವುದೇ ದೊಡ್ಡ ಸಾಧನೆ ಮಾಡಿಲ್ಲ. ಆದರೆ ಜನರ ಹೃದಯದಲ್ಲಿ ಸ್ಥಾನ ಪಡೆದಿರುವುದೇ ನನ್ನ ಜೀವನದ ಅತ್ಯಂತ ದೊಡ್ಡ ಸಾಧನೆ. ಕಲಬುರಗಿ ಜಿಲ್ಲೆಯಲ್ಲಿ ಕಲೆಗೆ ಇನ್ನಷ್ಟು ಪ್ರೋತ್ಸಾಹ ಮತ್ತು ಗೌರವ ಸಿಗಬೇಕಿದೆ” ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಜಾನಪದ ಕಲಾವಿದೆ ಹನೀಫಾ ಎಂ. ಶೇಖ್ ಹೇಳಿದರು.

ನಗರದ ರಂಗಾಯಣ ಅಡಿಟೋರಿಯಂನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡತನದ ದಿನಗಳಲ್ಲಿ ಜಾನಪದ ಕಲೆಯೇ ತಮ್ಮ ಬದುಕಿಗೆ ಆಸರೆಯಾಗಿತ್ತು ಎಂದು ಸ್ಮರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಹಾಗೂ ಸಹ ಕಲಾವಿದರು ತಮ್ಮೊಂದಿಗೆ ಇರುವವರೆಗೆ ತಾವು ಬಡವರಲ್ಲ, ಶ್ರೀಮಂತರೇ ಎಂದು ಹೇಳಿದ ಅವರು, ಇಲಾಖೆಯ ಬೆಂಬಲವನ್ನು ಶ್ಲಾಘಿಸಿದರು. ಇದೇ ವೇಳೆ ತಾವು ರಚಿಸಿದ ಭಜನಾ ಗೀತೆಯನ್ನು ಹಾಡಿ ನೆರೆದಿದ್ದವರ ಮೆಚ್ಚುಗೆಗೆ ಪಾತ್ರರಾದರು. ಕಲಾವಿದರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಮಾತನಾಡಿ, ಕಲ್ಯಾಣ ಕರ್ನಾಟಕವು ವಚನ, ತತ್ವಪದ ಹಾಗೂ ದಾಸ ಪರಂಪರೆಯ ಮೂಲಕ ಮಹಿಳಾ ಧ್ವನಿಯನ್ನು ಜಗತ್ತಿಗೆ ಪರಿಚಯಿಸಿದ ಸಾಂಸ್ಕೃತಿಕ ನೆಲವಾಗಿದೆ. ಸಂಪ್ರದಾಯಸ್ಥ ಕುಟುಂಬದಿಂದ ಬಂದ ಹನೀಫಾ ಎಂ. ಶೇಖ್ ಅವರು ತತ್ವಪದಗಳ ಮೂಲಕ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಕಟ್ಟಿಕೊಟ್ಟಿದ್ದು, ಅವರ ಜೀವನ ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

ರಂಗಾಯಣದ ಆಡಳಿತಾಧಿಕಾರಿ ಸಿದ್ರಾಮ ಸಿಂಧೆ ಮಾತನಾಡಿ, ಕಡಿಕೋಲ ಮಡಿವಾಳಪ್ಪನವರ ತತ್ವಪದಗಳನ್ನು ಗಾಯನದ ಮೂಲಕ ಜನಮಾನಸಕ್ಕೆ ತಲುಪಿಸಿ, ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಹನೀಫಾ ಎಂ. ಶೇಖ್ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಶಂಸಿಸಿದರು.

ನಶಿಸುತ್ತಿರುವ ಸಾಂಪ್ರದಾಯಿಕ ಕಲೆಗಳನ್ನು ಉಳಿಸುವ ಉದ್ದೇಶದಿಂದ ಹಿರಿಯ ಕಲಾವಿದರನ್ನು ಗುರುತಿಸಿ ವೇದಿಕೆ ಕಲ್ಪಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯವನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ, ದತ್ತಾತ್ರೇಯ ಭಂಗಿ, ಸಿದ್ಧರಾಮ ಪೊಲೀಸ್ ಪಾಟೀಲ್, ಗಣ್ಯರಾದ ಕೋಬಾಳ, ಗಿರಿಜಾ ಕರ್ಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X