ಕಲಬುರಗಿ | ಜೀತ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ : ಶ್ರೀನಿವಾಸ ನವಲೆ

ಕಲಬುರಗಿ : ಜೀತ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಜೀತ ಪದ್ದತಿ ನಿರ್ಮೂಲನಾ ಕಾಯಿದೆ 1976 ರಲ್ಲಿ ಜಾರಿಗೆ ಬಂದರೂ, ಜೀತ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ಶುಕ್ರವಾರದಂದು ಹಳೆ ಜಿಲ್ಲಾ ಪಂಚಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆ ಕಲಬುರಗಿ ಇವರುಗಳು ಸಂಯುಕ್ತಾಶ್ರಯದಲ್ಲಿ ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ಮಾಡಿದ ಸಾಲವನ್ನು ತೀರಿಸಲಾಗದೆ, ಕಾರ್ಮಿರನ್ನು, ಕೃಷಿಕರನ್ನು, ಜೀತ ಪದ್ದತಿ ಹೆಸರಿನಿಲ್ಲಿ ಶೋಷಣೆ ಮಾಡುತ್ತಿರುವುದನ್ನು ಸಮಾಜದಲ್ಲಿ ಕಾಣಬಹುದು ಎಂದರು.
ಮುಖ್ಯ ಅತಿಥಿಗಳಗಿ ಭಾಗವಹಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಭಂವರ ಸಿಂಗ್ ಮೀನಾ ಅವರು ಮಾತನಾಡಿ, ಜೀತ ಪದ್ದತಿ ರದ್ದಾಗಿ ಸುಮಾರು ನಲವತ್ತು ವರ್ಷಗಳಾದರೂ ಕುಟುಂಬದಲ್ಲಿ ಆರ್ಥಿಕ ಸಮಸ್ಯೆ ಮಾಡಿದ ಸಾಲಕ್ಕೆ ಬಡ್ಡಿಯನ್ನು ಕಟ್ಟಲಾಗದೆ ಕುಟುಂಬದವರ ಮಕ್ಕಳು ಬಾಲ ಕಾರ್ಮಿಕರಾಗಿ ಜೀತ ಪದ್ದತಿಯಲ್ಲಿ ಅನಿವಾರ್ಯವಾಗಿ ಸಿಲುಕಿ ವಿಧ್ಯಾಭ್ಯಾಸವನ್ನು ಪೂರ್ಣಗೊಳಿಸುತ್ತಿಲ್ಲ ಎಂದು ಹೇಳಿದರು.
ಜೀತ ಪದ್ದತಿಯನ್ನು ನಿರ್ಮೂಲನೆಯನ್ನು ಮಾಡುವಲ್ಲಿ ಎಲ್ಲಾ ಇಲಾಖೆಯ ಅಧಿಕಾರಿ ವರ್ಗ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕೆಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪ ಆರ್.ಹೆಚ್. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಜೀತ ಪದ್ದತಿಯು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ ಇಂದಿಗೂ ಜೀತ ಪದ್ದತಿಯಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಾರ್ಮಿಕರನ್ನು ಶೋಷಿಸಲಾಗುತ್ತಿದೆ. ಎಂದರು.
ವೇದಿಕೆ ಮೇಲೆ ಜಗದೇವಪ್ಪ, ಡಿ.ಹೆಚ್.ಓ.ಶರಣಬಸಪ್ಪ ಕ್ಯಾತನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಉಪಕಾರ್ಮಿಕ ಆಯುಕ್ತ ವೆಂಕಟೇಶ, ಜಿಲ್ಲಾ ಎಸ್.ಬಿಎಮ್ ಸಂಯೋಜಕಿ ಗಂಗೂಬಾಯಿ ಎಸ್ ಪಾಟೀಲ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕ ಪಂಚಾಯತ್ ಅಧಿಕಾರಿಗಳು ಭಾಗವಹಿಸಿದ್ದರು. ಬಾಲಕಾರ್ಮಿಕ ಯೋಜನಾ ನಿರ್ದೇಶಕರ ಸಂತೋಷ ಕುಲಕರ್ಣಿ ವಂದಿಸಿದರು.







