ಕಲಬುರಗಿ | ಸರಣಿ ಅಪಘಾತ : ಸ್ಥಳದಲ್ಲೇ ಮೂವರು ಮೃತ್ಯು

ಕಲಬುರಗಿ: ಜೀಪ್ ಹಾಗೂ ಬಸ್ ಗಳ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿಯಿಂದ ಅಫಜಲ್ಪುರ ಮಧ್ಯೆ ಇರುವ ಹಡಗಿಲ್ ಹಾರುತಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.
ಮೃತರನ್ನು ಅಫಜಲಪುರ ತಾಲೂಕಿನ ಮೂಲದವರೆಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ಸಂಚಾರಿ ಪೊಲೀಸ್ ಠಾಣೆ 1 ವ್ಯಾಪ್ತಿಯಲ್ಲಿ ನಡೆದಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.
Next Story







