Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೆ.16ರಂದು 371(ಜೆ)...

Kalaburagi | ಸೆ.16ರಂದು 371(ಜೆ) ಸಾಧನೆ–ಆಶಯ ಕುರಿತು ಸರಣಿ ವಿಚಾರ ಸಂಕಿರಣ: ಲಕ್ಷ್ಮಣ್ ದಸ್ತಿ

ವಾರ್ತಾಭಾರತಿವಾರ್ತಾಭಾರತಿ12 Sept 2026 6:54 PM IST
share
Kalaburagi | ಸೆ.16ರಂದು 371(ಜೆ) ಸಾಧನೆ–ಆಶಯ ಕುರಿತು ಸರಣಿ ವಿಚಾರ ಸಂಕಿರಣ: ಲಕ್ಷ್ಮಣ್ ದಸ್ತಿ

ಕಲಬುರಗಿ: ಸಂವಿಧಾನದ 371(ಜೆ) ಕಲಂನ ಅನುಷ್ಠಾನದಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆಗಿರುವ ಸಾಧನೆಗಳು ಹಾಗೂ ಮುಂದಿನ ಅಭಿವೃದ್ಧಿಯ ಆಶಯಗಳ ಕುರಿತು ವಿವಿಧ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸರಣಿ ವಿಚಾರ ಸಂಕಿರಣಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 16ರಂದು ಶರಣಬಸವ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ನಡೆಯಲಿದೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಶರಣಬಸವ ವಿಶ್ವವಿದ್ಯಾಲಯ ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗೃಹ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ.

ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹಿ ಪೀಠಾಧಿಪತಿ ಪೂಜ್ಯ ಶ್ರೀ ದೊಡ್ಡಪ್ಪ ಎಸ್. ಅಪ್ಪ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಡಾ. ದಾಕ್ಷಾಯಣಿ ಎಸ್. ಅಪ್ಪ ಪಾವನ ಸಾನಿಧ್ಯ ವಹಿಸಲಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಡಾ. ಅಜಯಸಿಂಗ್, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಕೆಬಿಎನ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಜರತ್ ಹಾಫೀಜ್ ಡಾ. ಸೈಯದ್ ಮಹಮ್ಮದ್ ಅಲಿ ಅಲ್ ಹುಸೇನಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುಮಾರು 13 ವರ್ಷಗಳ ಹಿಂದೆ ಜಾರಿಯಾದ 371(ಜೆ) ವಿಶೇಷ ಸ್ಥಾನಮಾನದ ಪರಿಣಾಮವಾಗಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು ಹಾಗೂ ಈ ಭಾಗದ ಜನರಿಗೆ ದೊರೆತಿರುವ ಪ್ರಯೋಜನಗಳು, ಇನ್ನೂ ಈಡೇರಬೇಕಿರುವ ನಿರೀಕ್ಷೆಗಳು ಮತ್ತು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರಣಿ ವಿಚಾರ ಸಂಕಿರಣಗಳಲ್ಲಿ ಚರ್ಚೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ ವಹಿಸಲಿದ್ದಾರೆ. ಕಲಬುರಗಿ ಮಹಾನಗರ ಪಾಲಿಕೆ ಮಹಾಪೌರ ಶೇಖ್ ಅಜಮಲ್ ಗೋಲಾ, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಡಾ. ಲಕ್ಷ್ಮಣ ದಸ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Article 371(J)Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X