Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ನಾಡು-ನುಡಿಗೆ ಸರಕಾರಿ ನೌಕರರ...

ಕಲಬುರಗಿ | ನಾಡು-ನುಡಿಗೆ ಸರಕಾರಿ ನೌಕರರ ಸೇವೆ ಅನನ್ಯ: ಸಿ.ಎಸ್.ಷಡಾಕ್ಷರಿ

ವಾರ್ತಾಭಾರತಿವಾರ್ತಾಭಾರತಿ14 Sept 2025 7:41 PM IST
share
ಕಲಬುರಗಿ | ನಾಡು-ನುಡಿಗೆ ಸರಕಾರಿ ನೌಕರರ ಸೇವೆ ಅನನ್ಯ: ಸಿ.ಎಸ್.ಷಡಾಕ್ಷರಿ
ಷಡಾಕ್ಷರಿ, ಸಂಗಾ ಅವರಿಗೆ 'ಸ್ವರ್ಣ ಸಿರಿ' ಪ್ರಶಸ್ತಿ ಪ್ರದಾನ

ಕಲಬುರಗಿ : ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಸರಕಾರಿ ನೌಕರರ ಸೇವೆ ಅನನ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಏರ್ಪಡಿಸಿದ ಸಮಾರಂಭದಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಅವರಿಗೆ ಸ್ವರ್ಣ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಪ್ರಾಚೀನ ಭಾಷೆಯಾದ ಕನ್ನಡಕ್ಕೆ ವಿಶೇಷ ಸ್ಥಾನಮಾನ ಹೊಂದಿದೆ. ನಮ್ಮ ಮಾತೃ ಭಾಷೆಯನ್ನು ಕಲಿತು ಅನ್ಯ ಭಾಷೆಯನ್ನು ಪ್ರೀತಿಸಿ ಗೌರವಿಸಬೇಕು. ಇಂದು ಕನ್ನಡ ಸಾಹಿತ್ಯ ಪರಿಷತ್ತಿಗೆ ಶೇ.50 ರಷ್ಟು ಜನ ಸರಕಾರಿ ನೌಕರರು ಸದಸ್ಯರಾಗಿದ್ದಾರೆ. ಹೀಗಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ನಮ್ಮ ಸರಕಾರಿ ನೌಕರರು ತಮ್ಮ ಒಂದು ದಿನದ ವೇತನ ನೀಡಿ ಪ್ರೋತ್ಸಾಹಿಸುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಸರಕಾರಿ ನೌಕರರ ಗಡಿ ನಾಡ ಕನ್ನಡ ಉತ್ಸವ ಮಾಡಬೇಕೆಂಬ ಬೇಡಿಕೆಗೆ ಸ್ಪಂದಿಸಿದ ಅವರು, ಬರುವ ದಿನಗಳಲ್ಲಿ ಉತ್ಸವ ನಡೆಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ, ಅನ್ಯ ಭಾಷೆ ದ್ವೇಷಿಸುವವರಿಗೆ ಪ್ರೀತಿ ತೋರಬೇಕು. ಇಂಥ ಸಾಹಿತ್ಯದ ಸಾಮರಸ್ಯ ಬೆರೆಸಬೇಕಾಗಿದೆ. ಕರ್ನಾಟಕ ರಾಜ್ಯದ ಸಾಧಕರ ಪ್ರೀತಿ ಮತ್ತು ಕಾಳಜಿ ನೌಕರರಲ್ಲಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉತ್ತಮ ಕಾರ್ಯ ಮಾಡುತ್ತಿದೆ. ಪ್ರೀತಿ ಮತ್ತು ದ್ವೇಷ ಇದ್ದಾಗಲೇ ಸಾಹಿತ್ಯ ಸೃಷ್ಟಿಯಾಗಲು ಕಾರಣವಾಗುತ್ತದೆ ಎಂದರು.

ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಮಾತನಾಡಿ, ಕಲೆ, ಸಾಹಿತ್ಯ, ಸಂಗೀತಗಳಿಗೆ ಸರಕಾರಿ ನೌಕರರು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಇಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೌಕರರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಾಮಾಜಿಕ ಜವಾಬ್ದಾರಿಯೊಂದಿಗೆ ಸೇವಾ ಕಾರ್ಯ-ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸರಕಾರಿ ನೌಕರರು ಪರಿವರ್ತನೆಗೆ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ರಾಜ್ಯ ಪರಿಷತ್ ಸದಸ್ಯ ಧರ್ಮರಾಜ ಜವಳಿ, ಸರಕಾರಿ ನೌಕರರ ಸಂಘದ ರಾಜ್ಯ ಸಮಿತಿಯ ಗಿರಿಗೌಡ ಹೆಚ್., ಎಸ್ ಬಸವರಾಜು, ಮಲ್ಲಿಕಾರ್ಜುನ ಬಳ್ಳಾರಿ, ಜಿಲ್ಲಾ ಸಮಿತಿಯ ಮಹೇಶ ಹೂಗಾರ, ಚಂದ್ರಕಾoತ ಏರಿ, ನಿಜಲಿಂಗಪ್ಪ ಕೊರಳ್ಳಿ, ಎಂ.ಬಿ. ಪಾಟೀಲ, ಸುರೇಶ ವಗ್ಗೆ, ಸಿದ್ಧಲಿಂಗ ಬಾಳಿ, ರವೀಂದ್ರಕುಮರ ಭಂಟನಳ್ಳಿ, ಶಿವರಾಜ ಅಂಡಗಿ, ಧರ್ಮಣ್ಣ ಹೆಚ್ ಧನ್ನಿ, ಶರಣರಾಜ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಶಕುಂತಲಾ ಪಾಟೀಲ ಇತರರು ವೇದಿಕೆ ಮೇಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X