Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಕೆಆರ್‌ಟಿಸಿ...

Kalaburagi | ಕೆಕೆಆರ್‌ಟಿಸಿ ಅಭಿವೃದ್ಧಿಗೆ ಹಲವು ಮಹತ್ವದ ಕ್ರಮ: ಅರುಣಕುಮಾರ ಪಾಟೀಲ್‌

► 58 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಮರುನಿರ್ಮಾಣ ► ರಾಜ್ಯದ 4 ನಿಗಮಗಳಲ್ಲಿ ಕೆಕೆಆರ್‌ಟಿಸಿ ಅಗ್ರಸ್ಥಾನ

ವಾರ್ತಾಭಾರತಿವಾರ್ತಾಭಾರತಿ12 Nov 2026 5:53 PM IST
share
Kalaburagi | ಕೆಕೆಆರ್‌ಟಿಸಿ ಅಭಿವೃದ್ಧಿಗೆ ಹಲವು ಮಹತ್ವದ ಕ್ರಮ: ಅರುಣಕುಮಾರ ಪಾಟೀಲ್‌

ಕಲಬುರಗಿ : ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಪೈಕಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಜನರ ಕಷ್ಟ-ನೋವುಗಳಿಗೆ ಸ್ಪಂದಿಸಿ ಸಾರಿಗೆ ಸಮಸ್ಯೆಗಳನ್ನು ಬಗೆಹರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವೈ.ಪಾಟೀಲ್‌ ಹೇಳಿದರು.

ಗುರುವಾರ ನಗರದ ನಿಗಮದ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷರಾಗಿ ಒಂದು ವರ್ಷದ ಆಡಳಿತಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ನಿಗಮದ ಸಾಧನೆಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಳೆದ ಬಜೆಟ್ ಮಂಡನೆಯ ಸಂದರ್ಭದಲ್ಲಿ ಕಲಬುರಗಿ ಕೇಂದ್ರ ಬಸ್ ನಿಲ್ದಾಣವನ್ನು ನವೀಕರಿಸುವಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಳೆಯ ಕಟ್ಟಡವನ್ನು ನೆಲಸಮಗೊಳಿಸಿ 58 ಕೋಟಿ ರೂ. ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಕಲಬುರಗಿಯ ರಿಂಗ್ ರಸ್ತೆ ಬಳಿ ನಾಲ್ಕು ಎಕರೆ ಜಮೀನಿನಲ್ಲಿ ಹೊಸ ಮಾದರಿಯ ಬಸ್ ನಿಲ್ದಾಣ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 20 ಕೋಟಿ ರೂ. ವೆಚ್ಚದಲ್ಲಿ ನಿಗಮದ ನೂತನ ಆಡಳಿತ ಕಚೇರಿ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ವಾಡಿ ಬಸ್ ನಿಲ್ದಾಣದ ನಾಲ್ಕು ಎಕರೆ ವಿಶಾಲ ಜಮೀನಿನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಫಜಲಪುರದ ಮಿನಿ ವಿಧಾನಸೌಧದ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸುವುದು ಹಾಗೂ ಹಳೆಯ ಬಸ್ ನಿಲ್ದಾಣದ ಜಾಗದಲ್ಲಿ ನಿಗಮದ ವತಿಯಿಂದ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದೆ. ಇದೇ ವೇಳೆ ವಿಜಯಪುರದ ಕೇಂದ್ರೀಯ ಬಸ್ ನಿಲ್ದಾಣಕ್ಕೆ ‘ವೀರ ರಾಣಿ ಕಿತ್ತೂರು ಚೆನ್ನಮ್ಮ ಬಸ್ ನಿಲ್ದಾಣ’ ಎಂದು ನಾಮಕರಣ ಮಾಡಲಾಗಿದೆ ಎಂದರು.

ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಯಡಿ ಮಹಿಳೆಯರು ಸಂತೋಷದಿಂದ ಪ್ರಯಾಣಿಸುತ್ತಿದ್ದಾರೆ. ನಿಗಮದ ಬಲವರ್ಧನೆ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ 56 ಕೋಟಿ ರೂ. ವೆಚ್ಚದಲ್ಲಿ 142 ನಗರ ಸಾರಿಗೆ ಬಸ್‌ಗಳು ಮತ್ತು 33.35 ಕೋಟಿ ರೂ. ವೆಚ್ಚದಲ್ಲಿ 56 ಪ್ರತಿಷ್ಠಿತ ಬಸ್‌ಗಳನ್ನು ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ 20 ಎಸಿ ಸ್ಲೀಪರ್, 20 ನಾನ್‌-ಎಸಿ ಸ್ಲೀಪರ್ ಹಾಗೂ 16 ಎಸಿ ಸೀಟರ್ ಬಸ್‌ಗಳು ಸೇರಿವೆ. ಈಗಾಗಲೇ 40 ಬಸ್‌ಗಳು ಸೇವೆಗೆ ಲಭ್ಯವಾಗಿವೆ ಎಂದು ಹೇಳಿದರು.

2025-26ನೇ ಸಾಲಿನ ಆಯವ್ಯಯದಲ್ಲಿ 400 ಹಾಗೂ 2026-27ನೇ ಸಾಲಿನ ಆಯವ್ಯಯದಲ್ಲಿ 200 ಸೇರಿದಂತೆ ಒಟ್ಟು 600 ಹೊಸ ಬಸ್‌ಗಳನ್ನು ನಿಗಮಕ್ಕೆ ಹಂಚಿಕೆ ಮಾಡಲಾಗಿದೆ. ಇವುಗಳ ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದರೊಂದಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ಇಟಿಎಂ (ETM) ಯಂತ್ರಗಳಲ್ಲಿ ಯುಪಿಐ (UPI) ಪಾವತಿ ಸೌಲಭ್ಯ ಅಳವಡಿಸಲಾಗಿದೆ.

ಸರ್ಕಾರದ ಆದೇಶದಂತೆ 2,30,224 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ವಿಜಯನಗರ, ಬಳ್ಳಾರಿ, ರಾಯಚೂರು ಹಾಗೂ ಕಲಬುರಗಿ ಮಾರ್ಗಗಳಲ್ಲಿ ಹೊಸ ‘ಮಿನಿ ಕಲ್ಯಾಣ ರಥ’ ಬಸ್‌ಗಳನ್ನು ಆರಂಭಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ ಬಸ್ ಸೌಲಭ್ಯವಿಲ್ಲದ ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಆರು ಗ್ರಾಮಗಳಿಗೆ ಹೊಸದಾಗಿ ಬಸ್ ಸಂಪರ್ಕ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜುಲೈ 2026ರಲ್ಲಿ 16 ಸಹಾಯಕ ಲೆಕ್ಕಿಗರು ಹಾಗೂ 300 ನಿರ್ವಾಹಕರ ಹುದ್ದೆಗಳ ನೇಮಕಾತಿ ಪೂರ್ಣಗೊಳಿಸಲಾಗಿದೆ. ಮುಂದಿನ ಹಂತದಲ್ಲಿ 163 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಅಲ್ಲದೆ, ಸೇವೆಯಲ್ಲಿದ್ದಾಗ ಮೃತಪಟ್ಟ ನೌಕರರ ಅರ್ಹ 55 ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ವಿವಿಧ ಹುದ್ದೆಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದರು.

ಸಿಬ್ಬಂದಿಯ ಆಂತರಿಕ ಗುಂಪು ವಿಮಾ ಪರಿಹಾರದ ಮೊತ್ತವನ್ನು 10 ಲಕ್ಷ ರೂ. ದಿಂದ 12.50 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. 110 ಮೃತ ನೌಕರರ ಅವಲಂಬಿತರಿಗೆ ಒಟ್ಟು 11.72 ಕೋಟಿ ರೂ. ಪರಿಹಾರ ಧನ ವಿತರಿಸಲಾಗಿದೆ. ನೌಕರರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಹಾಗೂ ಕ್ಯಾನ್ಸರ್‌ನಂತಹ ಕಾಯಿಲೆಗಳನ್ನು ತಡೆಗಟ್ಟುವ ಉದ್ದೇಶದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಸುಮಾರು 4,440 ಸಿಬ್ಬಂದಿಗೆ ನಗದುರಹಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ ಎಂದು ವಿವರಿಸಿದರು.

ಒಟ್ಟಾರೆಯಾಗಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುವುದರ ಜತೆಗೆ ನಿಗಮದ ಆರ್ಥಿಕ ಹಾಗೂ ಆಡಳಿತಾತ್ಮಕ ಬಲವರ್ಧನೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷರು ಮಾಹಿತಿ ಹಂಚಿಕೊಂಡರು.

ಶೀಘ್ರದಲ್ಲೇ ಸ್ಯಾಟಲೈಟ್ ಬಸ್ ನಿಲ್ದಾಣ ಆರಂಭ :

ಕಲಬುರಗಿ ನಗರದಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಪ್ರಕ್ರಿಯೆ ಬಹುತೇಕ ಅಂತಿಮ ಹಂತ ತಲುಪಿದೆ. ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಿಲ್ದಾಣ ನಿರ್ಮಿಸಲು ಬಹುತೇಕ ಒಪ್ಪಿಗೆ ದೊರೆತಿದೆ. ಇದರ ಜತೆಗೆ ಜೇವರ್ಗಿ ಕ್ರಾಸ್‌ನ ಕೃಷಿ ಇಲಾಖೆಗೆ ಸೇರಿದ ಎರಡು ಎಕರೆ, ಆಳಂದ ಚೆಕ್‌ಪೋಸ್ಟ್ ಸಮೀಪದ ಕೃಷಿ ವಿಶ್ವವಿದ್ಯಾಲಯದ ಎರಡು ಎಕರೆ ಹಾಗೂ ಗಂಜ್ ಪ್ರದೇಶದ ಗ್ರಾಮೀಣ ಪೊಲೀಸ್ ಠಾಣೆ ಸಮೀಪದ 15 ಗುಂಟೆ ಜಮೀನು ಕೋರಲಾಗಿದೆ. ಶೀಘ್ರದಲ್ಲೇ ಜಮೀನು ಅಂತಿಮಗೊಳಿಸಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣ ಆರಂಭಿಸಲಾಗುವುದು ಎಂದು ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ ತಿಳಿಸಿದರು.

Tags

KKRTCKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X