ಕಲಬುರಗಿ | ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಕ್ಸೊ ಪ್ರಕರಣ ದಾಖಲು

ಕಲಬುರಗಿ, ಆ.28: ಸಿಗರೇಟ್ ಸೇದುವ ನೆಪದಲ್ಲಿ ಬಾಲಕನೋರ್ವ ಮತ್ತೋರ್ವ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
ಚಿತ್ತಾಪುರ ಪಟ್ಟಣದಲ್ಲಿರುವ ಸ್ಥಳೀಯ ನ್ಯಾಯಾಲಯದ ಹಳೆಯ ಕಟ್ಟಡದ ಆವರಣದೊಳಗೆ 16 ವರ್ಷದ ಬಾಲಕನೋರ್ವ 14 ವರ್ಷದ ಬಾಲಕನ ಮೇಲೆ ಆ.26 ರಂದು ರಾತ್ರಿ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ.
ದೌರ್ಜನ್ಯಕ್ಕೊಳಗಾದ ಬಾಲಕನು ತಾಯಿಯ ಮುಂದೆ ನಡೆದ ವಿಷಯ ವಿವರಿಸಿದ್ದಾನೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಮಾಡಿದ ಬಾಲಕನ ವಿರುದ್ಧ ಚಿತ್ತಾಪುರ ಠಾಣೆಯ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಲಾಗಿದ್ದು, ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





