Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಾಲೇಜು ಮೇಲ್ಛಾವಣಿ ಕುಸಿತ...

Kalaburagi | ಕಾಲೇಜು ಮೇಲ್ಛಾವಣಿ ಕುಸಿತ ಖಂಡಿಸಿ ಎಸ್‌ಎಫ್‌ಐ–ಡಿವೈಎಫ್‌ಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Jun 2026 5:57 PM IST
share
Kalaburagi | ಕಾಲೇಜು ಮೇಲ್ಛಾವಣಿ ಕುಸಿತ ಖಂಡಿಸಿ ಎಸ್‌ಎಫ್‌ಐ–ಡಿವೈಎಫ್‌ಐ ಪ್ರತಿಭಟನೆ
ಗಾಯಗೊಂಡ ವಿದ್ಯಾರ್ಥಿನಿಯರಿಗೆ ಪರಿಹಾರ, ಕಟ್ಟಡಗಳ ಸುರಕ್ಷತಾ ಪರಿಶೀಲನೆಗೆ ಒತ್ತಾಯ

ಕಲಬುರಗಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೇಲ್ಛಾವಣಿಯ ಒಂದು ಭಾಗ ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆಯನ್ನು ಖಂಡಿಸಿ, ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಹಾಗೂ ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ನೇತೃತ್ವದಲ್ಲಿ ಶುಕ್ರವಾರ ಎಸ್‌ವಿಪಿ ಚೌಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಲವಿತ್ರ ವಸ್ತ್ರದ, ವಿದ್ಯಾರ್ಥಿಗಳಿಗೆ ಸುರಕ್ಷಿತ ಶಿಕ್ಷಣ ವಾತಾವರಣ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ತಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬ ಆಶಯದಿಂದ ಪೋಷಕರು ಶಾಲೆ-ಕಾಲೇಜುಗಳಿಗೆ ಕಳುಹಿಸುತ್ತಾರೆ. ಆದರೆ ಶಿಕ್ಷಣ ಸಂಸ್ಥೆಗಳಲ್ಲೇ ವಿದ್ಯಾರ್ಥಿಗಳು ಗಾಯಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ಸರ್ಕಾರದ ನಿರ್ಲಕ್ಷ್ಯದ ಪರಿಣಾಮವಾಗಿದೆ ಎಂದು ಹೇಳಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಕಟ್ಟಡಗಳ ಸುರಕ್ಷತಾ ಪರಿಶೀಲನೆ ನಡೆಸಿ, ಅಪಾಯಕಾರಿಯಾಗಿರುವ ಕಟ್ಟಡಗಳನ್ನು ತಕ್ಷಣ ದುರಸ್ತಿಗೊಳಿಸುವ ಅಥವಾ ಪುನರ್‌ನಿರ್ಮಿಸುವ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಡಿವೈಎಫ್‌ಐ ಜಿಲ್ಲಾ ಮುಖಂಡ ಶಶಿ ಡಾಂಗೆ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ನಿರ್ವಹಣೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಇಂತಹ ಘಟನೆಗಳಿಗೆ ಕಾರಣವಾಗಿದೆ. ಇದರ ನೈತಿಕ ಹೊಣೆಯನ್ನು ಸಂಬಂಧಪಟ್ಟವರು ಹೊತ್ತುಕೊಳ್ಳಬೇಕು ಎಂದು ಹೇಳಿದರು.

ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಸರ್ವೇಶ್ ಮಾವಿನಕರ್ ಮಾತನಾಡಿ, ಘಟನೆಯಲ್ಲಿ ಒಬ್ಬ ವಿದ್ಯಾರ್ಥಿನಿಗೆ ತಲೆಗೆ ಒಂಬತ್ತು ಹೊಲಿಗೆ ಹಾಕುವಷ್ಟು ಗಂಭೀರ ಗಾಯವಾಗಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅಗತ್ಯ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಸುರಕ್ಷತೆಯ ವಿಚಾರದಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯ ಇಮಾಮ್ ಮಾತನಾಡಿ, ಗಾಯಗೊಂಡ ವಿದ್ಯಾರ್ಥಿಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಜೊತೆಗೆ ಸೂಕ್ತ ಪರಿಹಾರ ಘೋಷಿಸಿ, ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಕಟ್ಟಡಗಳ ತುರ್ತು ದುರಸ್ತಿ, ಸುರಕ್ಷತಾ ಲೆಕ್ಕಪರಿಶೋಧನೆ ಹಾಗೂ ವಿದ್ಯಾರ್ಥಿಗಳ ಭದ್ರತೆಗೆ ಆದ್ಯತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾ ಸಂಚಾಲಕ ಪ್ರಮೋದ್ ಪಂಚಾಳ, ಸಹ ಸಂಚಾಲಕ ಸಲ್ಮಾನ್ ಖಾನ್, ಪಾಂಡುರಂಗ ಮಾವಿನಕರ್, ಅನಿತಾ, ಅಕ್ಷರಾ, ವಿಜಯಲಕ್ಷ್ಮೀ, ಸೃಷ್ಟಿ, ವೈಷ್ಣವಿ, ಸಿಂಚನಾ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

protestDYFISFIKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X