Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಲ್ ಆ್ಯಂಡ್ ಟಿ ಸಾಫ್ಟ್‌ವೇರ್...

ಕಲಬುರಗಿ | ಎಲ್ ಆ್ಯಂಡ್ ಟಿ ಸಾಫ್ಟ್‌ವೇರ್ ಸಂಸ್ಥೆಯೊಂದಿಗೆ ಶರಣಬಸವ ವಿವಿ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ10 Oct 2025 7:55 PM IST
share
ಕಲಬುರಗಿ | ಎಲ್ ಆ್ಯಂಡ್ ಟಿ ಸಾಫ್ಟ್‌ವೇರ್ ಸಂಸ್ಥೆಯೊಂದಿಗೆ ಶರಣಬಸವ ವಿವಿ ಒಪ್ಪಂದ

ಕಲಬುರಗಿ: ನಿರಂತರವಾಗಿ ಬದಲಾಗುತ್ತಿರುವ ಕೈಗಾರಿಕಾ ಮಾನದಂಡಗಳನ್ನು ಪೂರೈಸಲು ಕೌಶಲ್ಯ ಆಧಾರಿತ ಇಂಜಿನಿಯರಿಂಗ್ ಶಿಕ್ಷಣವನ್ನು ಉನ್ನತೀಕರಿಸುವ ನಿರಂತರ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಶರಣಬಸವ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೆಷನ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳನ್ನು ಅನುಸರಿಸುವ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೌಶಲ್ಯ ವರ್ಧನೆ ಐಚ್ಛಿಕ ಕೋರ್ಸ್ ಪರಿಚಯಿಸಲು ಕೈಗಾರಿಕಾ ಸಂಸ್ಥೆಯಾದ ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ) ಜೊತೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ.

ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ ಎಸ್ ಜಿ ಡೊಳ್ಳೇಗೌಡರ್ ಮತ್ತು ಎಲ್ & ಟಿಯ ಶೈಕ್ಷಣಿಕ ಪಾಲುದಾರಿಕೆಯ ಮುಖ್ಯಸ್ಥ ಮಯಾಂಕ್ ರಂಜನ್ ಅವರು ಉನ್ನತ ಶಿಕ್ಷಣದಲ್ಲಿ ಕೈಗಾರಿಕೆ-ವಿಶ್ವವಿದ್ಯಾಲಯ ಭಾಗವಹಿಸುವಿಕೆಯಲ್ಲಿ ಹೊಸ ಆರಂಭವನ್ನು ಸೂಚಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ದಾಕ್ಷಾಯಿಣಿ ಅವ್ವಾಜಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಡಾ.ಎಸ್.ಎಚ್.ಹೊನ್ನಳ್ಳಿ, ಎಲ್ & ಟಿಯ ವಿಷಯ ತಜ್ಞರಾದ ಡಾ.ಉಮಾ ಪವನ ಮತ್ತು ಇತರರ ಸಮ್ಮುಖದಲ್ಲಿ ಈ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಉದ್ಯಮದ ಅವಶ್ಯಕತೆಗಳನ್ನು ಪೂರೈಸಲು ಮತ್ತು ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳನ್ನು ಅನುಸರಿಸುವ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಸೂಕ್ತವಾದ ಇಂಜಿನಿಯರಿಂಗ್ ವಿಷಯಗಳೊಂದಿಗೆ ಎಲ್ & ಟಿ “ಎಲ್ & ಟಿ ಎಜುಟೆಕ್” ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಇಂಜಿನಿಯರಿಂಗ್ ಕೋರ್ಸ್‍ಗಳಲ್ಲಿನ ವಿಭಾಗಗಳಿಗೆ ಕೋರ್ಸ್ ಸಾಮಗ್ರಿಗಳನ್ನು ಎಲ್ & ಟಿ ಎಜುಟೆಕ್ ಸಿದ್ಧಪಡಿಸುತ್ತದೆ ಮತ್ತು ಸಂಪೂರ್ಣ ಕೋರ್ಸ್ ಅವಧಿಯಲ್ಲಿ ಎಲ್ & ಟಿ ಎಜುಟೆಕ್‍ನ ಅಧ್ಯಾಪಕರು ಆಯಾ ವಿಶ್ವವಿದ್ಯಾಲಯಗಳಲ್ಲಿಯೇ ಇದ್ದು, ವಿದ್ಯಾರ್ಥಿಗಳಿಗೆ ನೀಡುವ ಕೋರ್ಸ್‍ಗಳಲ್ಲಿ ತರಗತಿಗಳನ್ನು ನಡೆಸುತ್ತಾರೆ.

ವಿಶ್ವವಿದ್ಯಾಲಯ ಮತ್ತು ಎಲ್ & ಟಿ ಎಜುಟೆಕ್ ನಡುವೆ ಸಹಿ ಹಾಕಿದ ಒಪ್ಪಂದದ ಪ್ರಕಾರ, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯ ವರ್ಧನೆ ಆಯ್ಕೆ ಕೋರ್ಸ್‍ಗಳನ್ನು ಪರಿಚಯಿಸಲಾಗಿದೆ. ನೀಡಲಾಗುವ ಹೊಸ ಕಾರ್ಯಕ್ರಮದಲ್ಲಿ “ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ಮತ್ತು ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್/ಐಟಿ” ಕೋರ್ಸಗಳು ಸೇರಿವೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್‍ನಲ್ಲಿ ಕನಿಷ್ಠ ವಿದ್ಯಾರ್ಥಿಗಳ ದಾಖಲಾತಿಯನ್ನು 50 ಕ್ಕೆ ನಿಗದಿಪಡಿಸಲಾಗಿದ್ದು, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಕೋರ್ಸ್‍ಗೆ ಕನಿಷ್ಠ ವಿದ್ಯಾರ್ಥಿಗಳ ದಾಖಲಾತಿಯನ್ನು 150 ಕ್ಕೆ ನಿಗದಿಪಡಿಸಲಾಗಿದೆ. ಹೊಸ ಕೌಶಲ್ಯ ವರ್ಧನೆ ಐಚ್ಛಿಕ ಕೋರ್ಸ್ ಮುಂದುವರಿಸಲು ಆಯ್ಕೆ ಮಾಡುವ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ಸೆಮಿಸ್ಟರ್‍ಗೆ 8000 ರೂ. ಶುಲ್ಕ ವಿಧಿಸಲಾಗುತ್ತದೆ. ಈ ಹೊಸ ಕೋರ್ಸ್ ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ಕಡ್ಡಾಯ ಮಾನದಂಡವಿಲ್ಲ, ಇದು ಆಯಾ ವಿಭಾಗಗಳಲ್ಲಿರುವ ಸಾಮಾನ್ಯ ಕೋರ್ಸ್‍ಗೆ ಹೆಚ್ಚುವರಿಯಾಗಿರುತ್ತದೆ.

ಮಾತೋಶ್ರೀ ಪೂಜ್ಯ ಡಾ. ಅವ್ವಾಜಿ ಅವರು ಹೊಸ ಒಪ್ಪಂದವು ವಿದ್ಯಾರ್ಥಿಗಳ ಕೌಶಲ್ಯಗಳನ್ನು ಹೆಚ್ಚಿಸುವಲ್ಲಿ ಮತ್ತು ಆಯಾ ಕೋರ್ಸ್‍ಗಳ ಕೊನೆಯಲ್ಲಿ ಅವರನ್ನು ಉದ್ಯಮಕ್ಕೆ ಸಿದ್ಧಪಡಿಸುವಲ್ಲಿ ಬಹಳ ಸಹಾಯ ಮಾಡುತ್ತದೆ ಎಂದು ಈ ಸಂಧರ್ಭದಲ್ಲಿ ಹೇಳಿದರು ಮತ್ತು ಉದ್ಯಮದ ಪ್ರಮುಖ ಸಂಸ್ಥೆ ಎಲ್ & ಟಿ ಜೊತೆ ಒಪ್ಪಂದ ಮಾಡಿಕೊಳ್ಳಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಒಪ್ಪಿಗೆ ನೀಡಿದರು. ಒಪ್ಪಂದದ ಪ್ರಕಾರ ಇಡೀ ಕೋರ್ಸ್‍ನ ಪಠ್ಯಕ್ರಮವನ್ನು ಎಲ್ & ಟಿ ಯ ತಜ್ಞರು ಸಿದ್ಧಪಡಿಸುತ್ತಾರೆ ಮತ್ತು ಎಲ್ & ಟಿ ಯ ತಜ್ಞ ಅಧ್ಯಾಪಕರು ಹೊಸ ಕೋರ್ಸ್‍ನಲ್ಲಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕಲಿಸುತ್ತಾರೆ ಎಂದು ಅವರು ತಿಳಿಸಿದರು.

ವಿವಿಯ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಅವರು ಈ ಹೊಸ ಕೋರ್ಸ್ ವಿದ್ಯಾರ್ಥಿಗಳಿಗೆ ನೀಡಲು ಹೊಸ ತಂತ್ರಜ್ಞಾನ ಬಳಸುತ್ತಾರೆ ಹಾಗೂ ಎಲ್ & ಟಿ ಎಜುಟೆಕ್ ನೀಡುವ ಈ ಕೋರ್ಸ್, ವಿದ್ಯಾರ್ಥಿಗಳನ್ನು ಕೌಶಲ್ಯಪೂರ್ಣಗೊಳಿಸುವ ಮತ್ತು ಅವರನ್ನು ಉದ್ಯಮಕ್ಕೆ ಸಿದ್ಧಗೊಳಿಸುವ ಪ್ರಯತ್ನಗಳಲ್ಲಿ ವಿಶ್ವವಿದ್ಯಾಲಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X