Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶರಣರ ವಚನಗಳು ವೈಜ್ಞಾನಿಕ...

ಕಲಬುರಗಿ | ಶರಣರ ವಚನಗಳು ವೈಜ್ಞಾನಿಕ ಚಿಂತನೆಗಳಾಗಿವೆ : ಡಾ.ರಾಜಶೇಖರ ಮಾoಗ್

ವಾರ್ತಾಭಾರತಿವಾರ್ತಾಭಾರತಿ7 Jan 2025 10:00 PM IST
share
Photo of Program

ಕಲಬುರಗಿ : ಹನ್ನೆರಡನೆಯ ಶತಮಾನದಲ್ಲಿ ಶರಣರು ರಚಿಸಿದ ವಚನಗಳು ವೈಜ್ಞಾನಿಕ ಚಿಂತನೆಗಳಾಗಿವೆ. ಅವುಗಳು ಸಮಾಜದಲ್ಲಿನ ಮೌಢ್ಯತೆ, ಕಂದಾಚಾರ, ಅಂಧಾನುಕರಣೆಗಳನ್ನು ವಿರೋಧಿಸುತ್ತವೆ ಎಂದು ಸಾಹಿತಿ ಡಾ.ರಾಜಶೇಖರ ಮಾಂಗ್ ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಚಿಂಚೋಳಿಯ ಚಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಚಿಂಚೋಳಿ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ ಹೊಸ ವರ್ಷ 2025 ರ ಕ್ಯಾಲೆಂಡರ್ ಬಿಡುಗಡೆ, ವಿಶೇಷ ಉಪನ್ಯಾಸ ಹಾಗೂ ವಚನ ಸಂಗೀತ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೀರ ಕಂಡಲ್ಲಿ ಮುಳುಗುವರಯ್ಯ ಮರವ ಕಂಡಲ್ಲಿ ಸುತ್ತುವರಯ್ಯ..... ಕಲ್ಲ ನಾಗರ ಕಂಡರೆ ಹಾಲನೆರೆಯೆಂಬರು, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ..... ದೇವಲೋಕ ಮರ್ತ್ಯ ಲೋಕ ಬೇರಿಲ್ಲ ಕಾಣಿರೋ..... ಮುಂತಾದ ಬಸವಣ್ಣನವರ ವೈಚಾರಿಕ ವಚನಗಳನ್ನು ಉಲ್ಲೇಖಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು, ಅಚ್ಚ ಕನ್ನಡದಲ್ಲಿರುವ ಬಸವಾದಿ ಶರಣರ ವಚನಗಳನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಹಿರಿಯ ಉಪನ್ಯಾಸಕ ಹಣಮಂತ ಕೋರೆಯವರು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಚಿಂಚೋಳಿ ವಲಯದ ಅಬಕಾರಿ ನಿರೀಕ್ಷಕರಾದ ಧನರಾಜ ಹಳ್ಳಿಖೇಡ, ಚಿತ್ರಕಲಾ ಶಿಕ್ಷಕ ನಾಗೇಶ್ ಬಿ ಶೀಲವಂತ, ಹೆಡ್ ಮಾಸ್ಟರ್ ಗೋಪಾಲ ಯಂಪಳ್ಳಿ, ಮುಖ್ಯ ಅತಿಥಿಗಳಾಗಿದ್ದರು. ತಾಲೂಕ ಅಧ್ಯಕ್ಷ ಬಸವರಾಜ ಐನೋಳಿ ವಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ರೇವಣಸಿದ್ದಯ್ಯ ಹಿರೇಮಠ, ಶರಣಯ್ಯಸ್ವಾಮಿ ಅಲ್ಲಾಪುರ, ಗುರುರಾಜ ಜೋಶಿ ಐನೂಲಿ ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಗೌರವ ಕೋಶ್ಯಾಧ್ಯಕ್ಷ ಗಣಪತ ದೇವಕತ್ತೆ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಶ್ರೀಶೈಲ್ ನಾಗಾವಿ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X