ಕಲಬುರಗಿ | ಹಸಿರು ಸೇನೆಗೆ ಶಿವರಾಜ್ ಪಾಟೀಲ್ ಗೋಣಗಿ ಆಯ್ಕೆ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಹೆಚ್ ಪಾಟೀಲ್ ಗೋಣಗಿ ಇವರನ್ನು ಜಿಲ್ಲಾ ಕಚೇರಿಯಲ್ಲಿ ಸಭೆ ನಡೆಸಿ ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಘಟನಾ ಕಾರ್ಯಾದರ್ಶಿ ಸೋಮಣಗೌಡ ಎಸ್ ಪಾಟೀಲ್ ಅವರು ಆದೇಶ ಪತ್ರ ನೀಡಿ ಸನ್ಮಾನಿಸಿದ್ದರು.
ತಮಗೆ ನೀಡಿರುವ ಹುದ್ದೆಯನ್ನು ಜವಾಬ್ದಾರಿಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಿಷ್ಠಾವಂತರಾಗಿ ಕಾರ್ಯ ನಿರ್ವಹಿಸಿಕೊಂಡು ಅಲ್ಲಿ ಇರುವಂತ ಸಮಸ್ಯೆಗಳನ್ನು ತೆಗೆದುಕೊಂಡು ಬಂದ ರೈತರಿಗೆ ನ್ಯಾಯ ಒದಗಿಸಲು ಪ್ರಮಾಣಿಕ ಪ್ರಯತ್ನ ಹಾಗೂ ಕಲಬುರಗಿಯಲ್ಲಿ ಸಂಘಟನೆಯ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮುಂದಾಗುವಂತೆ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಎಚ್ ಆರ್ ಬಸವರಾಜಪ್ಪ ಆದೇಶದಲ್ಲಿ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಳಗಿ ತಾಲೂಕ ಅಧ್ಯಕ್ಷ ವೀರಣ್ಣ ಗಂಗಾಣಿ ರಟಕಲ್, ಚಿತ್ತಾಪುರ ಅಧ್ಯಕ್ಷ ಬಸವರಾಜ ಅಲಬ್ ಸೇರಿದಂತೆ ಇತರರು ಇದ್ದರು.
Next Story





