ಕಲಬುರಗಿ | ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸುಟ್ಟು ಕರಕಲು

ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್ ಎಂಬುವವರಿಗೆ ಸೇರಿದ ಅಂಗಡಿ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಪರಿಹಾರಕ್ಕೆ ಅಂಗಡಿ ಮಾಲಕರು ಒತ್ತಾಯಿಸಿದ್ದಾರೆ.
Next Story





