Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶಿಕ್ಷಕರ ಸಮಸ್ಯೆಗಳ...

ಕಲಬುರಗಿ | ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಡಾ. ಶಶೀಲ್ ಜಿ. ನಮೋಶಿ

ವಾರ್ತಾಭಾರತಿವಾರ್ತಾಭಾರತಿ21 Jun 2026 7:24 PM IST
share
ಕಲಬುರಗಿ | ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಡಾ. ಶಶೀಲ್ ಜಿ. ನಮೋಶಿ

ಕಲಬುರಗಿ: ಶಿಕ್ಷಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಹಲವು ವರ್ಷಗಳಿಂದ ಬಗೆಹರಿಯದೆ ಉಳಿದಿದ್ದು, ಅವುಗಳ ಪರಿಹಾರಕ್ಕಾಗಿ ಸದನದ ಒಳಗೆ ಹಾಗೂ ಹೊರಗೆ ಹಂತ ಹಂತವಾಗಿ ಹೋರಾಟ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಘಟಕದ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಗಳಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಪ್ರಮುಖ ಬೇಡಿಕೆಗಳಲ್ಲಿ ಒಂದಾದ ಹಳೆಯ ಪಿಂಚಣಿ ಯೋಜನೆ ಜಾರಿಯ ವಿಷಯವನ್ನು ಅನೇಕ ಬಾರಿ ಸರ್ಕಾರದ ಗಮನಕ್ಕೆ ತರಲಾಗಿದ್ದರೂ ಇನ್ನೂ ಅಂತಿಮ ಪರಿಹಾರ ದೊರೆತಿಲ್ಲ. ಶಿಕ್ಷಕರ ನ್ಯಾಯಯುತ ಹಕ್ಕುಗಳಿಗಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಗಟ್ಟಿಯಾಗಿ ಧ್ವನಿ ಎತ್ತಿ, ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಶಾಲೆಗಳೆಂಬ ನಾಲ್ಕು ಗೋಡೆಗಳ ಮಧ್ಯೆ ದೇಶದ ಭವಿಷ್ಯವನ್ನು ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ನಿರ್ವಹಿಸುತ್ತಿದ್ದಾರೆ. ಅವರ ಸೇವೆ ಸಮಾಜಕ್ಕೆ ಅಮೂಲ್ಯವಾದದ್ದು ಎಂದು ಹೇಳಿದರು.

ಪರಿಷತ್ತಿನ ಚಟುವಟಿಕೆಗಳಿಗೆ ಶಿಕ್ಷಕರೇ ದೊಡ್ಡ ಶಕ್ತಿಯಾಗಿದ್ದು, ಶಿಕ್ಷಕರು ನಿತ್ಯವೂ ಸಾಹಿತ್ಯ ಮತ್ತು ಸಂಸ್ಕೃತಿಯೊಂದಿಗೆ ನಂಟು ಹೊಂದಿರುವ ಸಾಹಿತಿಗಳಂತೆಯೇ ಕಾರ್ಯನಿರ್ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರಿಗಾಗಿ ವಿಶೇಷವಾಗಿ “ಶಿಕ್ಷಕ ಸಾಹಿತ್ಯ ಸಮ್ಮೇಳನ”ವನ್ನು ಜುಲೈ ತಿಂಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ, ಜಿಲ್ಲಾ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ ಹೂಗಾರ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮರಾಜ ಜವಳಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶಿವಲೀಲಾ ಕಲಗುರ್ಕಿ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿ ಸೈಯ್ಯದ್ ನಜಿರುದ್ದೀನ್ ಮುತ್ತವಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್. ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಭುವನೇಶ್ವರಿ ಹಳ್ಳಿಖೇಡ, ರಾಜೇಂದ್ರ ಮಾಡಬೂಳ, ಗಣೇಶ ಚಿನ್ನಾಕಾರ, ಜ್ಯೋತಿ ಕೋಟನೂರ, ಶ್ವೇತಾ ಪಾಟೀಲ, ವಿಶಾಲಾಕ್ಷಿ ಮಾಯಣ್ಣವರ್, ದಿನೇಶ ಮದಕರಿ, ಶಿವಾನಂದ ಸುರವಸೆ, ಚಂದ್ರಕಾಂತ ಏರಿ, ಮಲ್ಲಿಕಾರ್ಜುನ ಇಬ್ರಾಹಿಂಪೂರ, ಮಹೇಶ ಚಿಂತನಪಳ್ಳಿ, ಬಂಗಾರೆಪ್ಪಾಡಿನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Tags

KalaburagiDr. Shasheel G. Nmoshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X