Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಐಆರ್ ನಿಲ್ಲಿಸುವಂತೆ...

Kalaburagi | ಎಸ್‌ಐಆರ್ ನಿಲ್ಲಿಸುವಂತೆ ಆಗ್ರಹಿಸಿ ಅ.2ರಂದು ಧರಣಿ ಸತ್ಯಾಗ್ರಹ : ಡಾ.ಮಹೇಶಕುಮಾರ ರಾಠೋಡ

ವಾರ್ತಾಭಾರತಿವಾರ್ತಾಭಾರತಿ30 Sept 2026 6:55 PM IST
share
Kalaburagi | ಎಸ್‌ಐಆರ್ ನಿಲ್ಲಿಸುವಂತೆ ಆಗ್ರಹಿಸಿ ಅ.2ರಂದು ಧರಣಿ ಸತ್ಯಾಗ್ರಹ : ಡಾ.ಮಹೇಶಕುಮಾರ ರಾಠೋಡ

ಕಲಬುರಗಿ: ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದವರ ಮತದಾನದ ಹಕ್ಕು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಅ.2ರಂದು ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ನಾಗರಿಕರ ಹಕ್ಕುಗಳ ರಕ್ಷಣಾ ಆಂದೋಲನದ ಸಂಚಾಲಕ ಡಾ. ಮಹೇಶಕುಮಾರ ರಾಠೋಡ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲಿಯೂ ಬದಲಾವಣೆ ತರಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಆಯೋಗದ ಮೂವರು ಆಯುಕ್ತರಲ್ಲಿ ಇಬ್ಬರು ವಿವಿಧ ನಿರ್ಧಾರಗಳ ಕುರಿತು ಆಕ್ಷೇಪ ದಾಖಲಿಸಿರುವುದಾಗಿ ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಈ ಬೆಳವಣಿಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಹಾಗೂ ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಠೋಡ ಹೇಳಿದರು.

ಅ.2ರಂದು ಬೆಳಗ್ಗೆ 11.30ಕ್ಕೆ ಜಗತ್ ವೃತ್ತದಲ್ಲಿ ಧರಣಿ ಆರಂಭವಾಗಲಿದೆ. ಮಧ್ಯಾಹ್ನ 2.30ಕ್ಕೆ ಸೂಪರ್ ಮಾರ್ಕೆಟ್‌ನಿಂದ ಜಗತ್ ವೃತ್ತದವರೆಗೆ ಮೆರವಣಿಗೆ ನಡೆಸಲಾಗುವುದು. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಅಫಝಲ್ ಮಹಿಮೂದ್, ಸಲೀಂ ಅಹಮದ್ ಚಿತಾಪೂರಿ, ಮಹೇಶ ಎಸ್.ಬಿ., ಶರಣಬಸಪ್ಪ ಮಮಶೆಟ್ಟಿ, ಎಸ್.ಎಂ. ಶರ್ಮಾ, ಮುಬೀನ್ ಅಹಮದ್, ಸಂಧ್ಯಾರಾಜ್ ಸ್ಯಾಮ್ಯುಯೆಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

SIRprotestKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X