Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಖರ್ಗೆ ರ‍್ಯಾಲಿ ನಡೆಸಿದ...

Kalaburagi | ಖರ್ಗೆ ರ‍್ಯಾಲಿ ನಡೆಸಿದ 'ಸ್ಥಳ ಶುದ್ಧೀಕರಣ' : ಕಾನೂನು ಜಾಗೃತ ಸಂಘದಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ18 Aug 2026 6:36 PM IST
share
Kalaburagi | ಖರ್ಗೆ ರ‍್ಯಾಲಿ ನಡೆಸಿದ ಸ್ಥಳ ಶುದ್ಧೀಕರಣ : ಕಾನೂನು ಜಾಗೃತ ಸಂಘದಿಂದ ಖಂಡನೆ

ಕಲಬುರಗಿ: ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಬಳಿಕ ಗಂಗಾಜಲದಿಂದ ಶುದ್ಧೀಕರಿಸಿ, ಹೋಮ-ಹವನ ನಡೆಸಿರುವ ಆರೋಪದ ಘಟನೆ ಖಂಡನೀಯವಾಗಿದೆ ಎಂದು ಕರ್ನಾಟಕ ಪ.ಜಾ./ಪ.ಪಂ. ವಕೀಲರ ಕಾನೂನು ಜಾಗೃತ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ವಿನೋದಕುಮಾರ ಕಾಂಬಳೆ, 2026ರ ಆಗಸ್ಟ್ 8ರಂದು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಮಾತನಾಡಿದ್ದರು. ಇದಾದ ಎರಡು ದಿನಗಳ ಬಳಿಕ ಕೆಲವರು ಅವರು ನಿಂತು ಮಾತನಾಡಿದ ಸ್ಥಳಕ್ಕೆ ಗಂಗಾಜಲ ಸಿಂಪಡಿಸಿ ‘ಶುದ್ಧೀಕರಣ’ ನಡೆಸಿರುವುದು ಜಾತೀಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ.

ಇಂತಹ ಕೃತ್ಯಗಳು ಪ್ರಜಾಪ್ರಭುತ್ವ, ಸಾಮಾಜಿಕ ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ. ದೇಶ ಸ್ವಾತಂತ್ರ್ಯ ಪಡೆದು ಹಲವು ದಶಕಗಳು ಕಳೆದರೂ ಜಾತೀಯತೆ ಹಾಗೂ ಅಸ್ಪೃಶ್ಯತೆಯ ಮನೋಭಾವಗಳು ಮುಂದುವರಿದಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.

ಇಂತಹ ಘಟನೆಗಳು ಸಂವಿಧಾನ ಪ್ರತಿಪಾದಿಸುವ ಸಮಾನತೆ, ಘನತೆ ಹಾಗೂ ಅಸ್ಪೃಶ್ಯತೆ ನಿರ್ಮೂಲನೆಯ ಆಶಯಗಳಿಗೆ ಧಕ್ಕೆ ತರುತ್ತವೆ. ಹೀಗಾಗಿ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದರ ಜತೆಗೆ, ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ವಿನೋದಕುಮಾರ ಕಾಂಬಳೆ ಆಗ್ರಹಿಸಿದ್ದಾರೆ.

ಈ ವೇಳೆ ಸಂಘದ ಉಪಾಧ್ಯಕ್ಷರಾದ ಸೀತಾರಾಮ ಓಮಲಾ ರಾಠೋಡ, ಭಾವಿಮನಿ ಆಶಾ ಮಂಗೇಶ, ಪ್ರಧಾನ ಕಾರ್ಯದರ್ಶಿ ಕುಸುಮಾಕರ್ ಎಸ್. ಮಹಾಗಾಂವಿ, ಜಂಟಿ ಕಾರ್ಯದರ್ಶಿಗಳಾದ ವಿಶ್ವನಾಥ ಎಂ. ಸಿಂಗೆ ಹಾಗೂ ಧೂಳಪ್ಪ ಬಿ. ದ್ಯಾಮನಕರ್ ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X