ಕಲಬುರಗಿ | ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು–ಕಲಬುರಗಿ ಮಧ್ಯೆ ವಿಶೇಷ ರೈಲು

ಸಾಂದರ್ಭಿಕ ಚಿತ್ರ
ಕಲಬುರಗಿ : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಅ.18ರಿಂದ 22ರವರೆಗೆ ಬೆಂಗಳೂರು–ಕಲಬುರಗಿ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಿದೆ.
ಅ.18ರಂದು ಬೆಂಗಳೂರು ಕಂಟೋನ್ಮೆಂಟ್ನಿಂದ (06203) ರಾತ್ರಿ 7.40ಕ್ಕೆ ಹೊರಡುವ ರೈಲು 19ರಂದು ಬೆಳಿಗ್ಗೆ 7.30ಕ್ಕೆ ಕಲಬುರಗಿ ತಲುಪಲಿದೆ.
ಕಲಬುರಗಿಯಿಂದ ರವಿವಾರ ಅ.19ರಂದು ಬೆಳಿಗ್ಗೆ 9.30ಕ್ಕೆ ಹೊರಡುವ ರೈಲು (06204) ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.
ಅ.20ರಂದು ಸೋಮವಾರ ರಾತ್ರಿ 7.40ಕ್ಕೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಡುವ ರೈಲು (06207) 21ರಂದು ಬೆಳಗ್ಗೆ 7.30ಕ್ಕೆ ಕಲಬುರಗಿ ತಲುಪಲಿದೆ. 21ರಂದು ಮಂಗಳವಾರ ಬೆಳಿಗ್ಗೆ 9.35ಕ್ಕೆ ಕಲಬುರಗಿಯಿಂದ ಹೊರಡುವ ರೈಲು (06204) ಅದೇ ದಿನ ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.
ಅ.21ರಂದು ರಾತ್ರಿ 10.10ಕ್ಕೆ ಬೆಂಗಳೂರು ಕಂಟೋನ್ಮೆಂಟ್ನಿಂದ ಹೊರಡುವ ರೈಲು (06209) 22ರಂದು ಬುಧವಾರ ಬೆಳಗ್ಗೆ 9ಗಂಟೆಗೆ ಕಲಬುರಗಿಗೆ ಬರಲಿದೆ. ಅ.22ರಂದು ಬೆಳಗ್ಗೆ 10.45ಕ್ಕೆ ಕಲಬುರಗಿಯಿಂದ ಹೊರಡುವ ರೈಲು (06210) ಅದೇ ದಿನ ರಾತ್ರಿ 10.30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಯಶವಂತಪುರ, ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಮಂತ್ರಾಲಯ, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ್ ಮೂಲಕ ಕಲಬುರಗಿ ತಲುಪಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.







