Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಯುವಕರ ಪ್ರತಿಭೆ...

Kalaburagi | ಯುವಕರ ಪ್ರತಿಭೆ ಗುರುತಿಸಲು ಕ್ರೀಡೆ ಉತ್ತಮ ವೇದಿಕೆ : ಡಾ.ಸೈಯದ್ ಮುಸ್ತಫಾ ಅಲ್ ಹುಸೈನಿ

ʼಕೆಬಿಎನ್ ಗೋಲ್ಡ್ ಕಪ್ 2026ʼ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Nov 2026 5:00 PM IST
share
Kalaburagi | ಯುವಕರ ಪ್ರತಿಭೆ ಗುರುತಿಸಲು ಕ್ರೀಡೆ ಉತ್ತಮ ವೇದಿಕೆ : ಡಾ.ಸೈಯದ್ ಮುಸ್ತಫಾ ಅಲ್ ಹುಸೈನಿ

ಕಲಬುರಗಿ: ಕ್ರೀಡೆಯು ಯುವಕರಲ್ಲಿ ಶಿಸ್ತು, ಸಮರ್ಪಣೆ, ನಾಯಕತ್ವ ಮತ್ತು ತಂಡದ ಮನೋಭಾವವನ್ನು ಬೆಳೆಸುವುದರ ಜೊತೆಗೆ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಉತ್ತಮ ವೇದಿಕೆಯಾಗಿದೆ ಎಂದು ಖಾಜಾ ಎಜುಕೇಶನ್ ಸೊಸೈಟಿಯ ನಿರ್ದೇಶಕ ಡಾ. ಸೈಯದ್ ಮುಸ್ತಫಾ ಅಲ್ ಹುಸೈನಿ ಹೇಳಿದರು.

ನಗರದ ಸಂಗತ್ರಾಶ್ ವಾಡಿ ಪ್ರದೇಶದಲ್ಲಿರುವ ಕೆಬಿಎನ್ ಕ್ರಿಕೆಟ್ ಮೈದಾನದಲ್ಲಿ ಮಂಗಳವಾರ ʼಕೆಬಿಎನ್ ಗೋಲ್ಡ್ ಕಪ್-2026ʼ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರಿಕೆಟ್, ಹಾಕಿ ಹಾಗೂ ಫುಟ್ಬಾಲ್ ಪಂದ್ಯಾವಳಿಗಳನ್ನು ಒಳಗೊಂಡಿರುವ ಈ ಕ್ರೀಡಾಕೂಟವನ್ನು ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತಿದೆ. ಇದು ಯುವ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುತ್ತದೆ. ಕಲಬುರಗಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ವೇದಿಕೆ, ಮಾರ್ಗದರ್ಶನ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದರು.

ತಮ್ಮ ತಂದೆ ಹಾಗೂ ಕೆಬಿಎನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕುಲಪತಿ ದಿವಂಗತ ಡಾ. ಸೈಯದ್ ಶಾ ಖುಸ್ರೋ ಹುಸೇನಿ ಅವರ ಕ್ರೀಡಾ ಪ್ರೋತ್ಸಾಹದ ಕನಸನ್ನು ಮುಂದುವರಿಸುವುದು ತಮ್ಮ ಆಶಯವಾಗಿದೆ. ಸಂಸ್ಥೆಯ ಅಧ್ಯಕ್ಷ ಡಾ. ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನಿ ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದಿಂದ ಇಂತಹ ಕ್ರೀಡಾ ಚಟುವಟಿಕೆಗಳು ಮುಂದುವರಿಯುತ್ತಿವೆ ಎಂದು ಹೇಳಿದರು.

ಕ್ರೀಡಾಪಟುಗಳು ಗೆಲುವು-ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಹೆಚ್ಚಿನ ಮಹತ್ವ ನೀಡಬೇಕು. ಎದುರಾಳಿಗಳು, ತರಬೇತುದಾರರು ಮತ್ತು ಅಧಿಕಾರಿಗಳನ್ನು ಗೌರವಿಸುವುದರೊಂದಿಗೆ ಶಿಸ್ತು ಹಾಗೂ ಸಮರ್ಪಣೆಯಿಂದ ಆಡಬೇಕು. ಈ ವೇದಿಕೆಯನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯ, ಜಿಲ್ಲೆ, ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸುವ ಮಟ್ಟಕ್ಕೆ ಬೆಳೆಯಬೇಕು ಎಂದು ಕರೆ ನೀಡಿದರು.

ಇದಕ್ಕೂ ಮುನ್ನ ಬಲೂನ್‌ಗಳು ಹಾಗೂ ಪಾರಿವಾಳಗಳನ್ನು ಆಕಾಶಕ್ಕೆ ಹಾರಿಸಿ, ಗೋಲ್ಡ್ ಕಪ್ ಟ್ರೋಫಿಯನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಫುಟ್ಬಾಲ್‌ಗೆ ಕಿಕ್ ಮಾಡುವ ಮೂಲಕ ಪಂದ್ಯಾವಳಿಯನ್ನು ಉದ್ಘಾಟಿಸಲಾಯಿತು.

ಎಂ.ಎ. ಪಠಾಣ್ ಮಾತನಾಡಿ, ಶಿಸ್ತು, ಸಮರ್ಪಣೆ ಹಾಗೂ ಪ್ರತಿಭೆ ಕ್ರೀಡಾಪಟುಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ ಎಂದರು.

ಫೈಜಾ ರೆಹಮತ್ ವೈದ್ಯಕೀಯ ಇಂಟರ್ನ್ ಕಾರ್ಯಕ್ರಮ ನಿರೂಪಿಸಿದರು. ಕೆಬಿಎನ್ ಸಂಸ್ಥೆಯ ಕಾರ್ಯದರ್ಶಿ ಬೆನ್ನಿ ಕುರಿಯಾಕೋಸ್ ಸ್ವಾಗತಿಸಿದರು. ಡಾ. ಸನಾ ಇಜಾಜ ವಂದಿಸಿದರು. ಕೆಬಿಎನ್ ವಿಶ್ವವಿದ್ಯಾಲಯದ ಉಪಕುಲಪತಿ ಅಶ್ಫಾಕ್ ಅಹ್ಮದ್, ಕುಲಸಚಿವ ವಿಲಾಯತ್ ಅಲಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ತಂಡಗಳ ಆಟಗಾರರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.

Tags

youthsportsKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X