Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶ್ರೀ ಶರಣಬಸವೇಶ್ವರರ...

ಕಲಬುರಗಿ | ಶ್ರೀ ಶರಣಬಸವೇಶ್ವರರ ಮಹಾರಥೋತ್ಸವ : ಸಹಸ್ರಾರು ಮಂದಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ8 March 2026 10:32 PM IST
share
ಕಲಬುರಗಿ | ಶ್ರೀ ಶರಣಬಸವೇಶ್ವರರ ಮಹಾರಥೋತ್ಸವ : ಸಹಸ್ರಾರು ಮಂದಿ ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಶರಣಬಸವೇಶ್ವರರ 204ನೆಯ ಜಾತ್ರೋತ್ಸವ ನಿಮಿತ್ತ ರವಿವಾರ ಸಂಜೆ ಸಹಸ್ರಾರು ಭಕ್ತರ ಮಧ್ಯೆ ಮಹಾದಾಸೋಹಿ ಶರಣ ಶ್ರೀ ಶರಣಬಸವೇಶ್ವರರ ಮಹಾರಥೋತ್ಸವವು ಜರುಗಿತು.

ಶರಣಬಸವೇಶ್ವರ ಸಂಸ್ಥಾನದ 9ನೆಯ ಪೀಠಾಧಿಪತಿ ಚಿ.ದೊಡ್ಡಪ್ಪ ಅಪ್ಪ ಅವರು ಪ್ರಸಾದ ಬಟ್ಟಲು (ಬೆಳ್ಳಿ ತಟ್ಟೆ) ಹಾಗೂ ಲಿಂಗ ಸಜ್ಜಿಕೆ (ಪವಿತ್ರ ಲಿಂಗವನ್ನು ಇಟ್ಟುಕೊಳ್ಳಲು ಸಂತರು ಬಳಸುತ್ತಿದ್ದ ಶ್ರೀಗಂಧದ ಪೆಟ್ಟಿಗೆ)ತೋರಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥಾನದ ಅಧ್ಯಕ್ಷೆ ಮಾತೋಶ್ರೀ ಡಾ.ದಾಕ್ಷಾಯಣಿ ಅವ್ವಾಜಿ, ಕಾರ್ಯದರ್ಶಿ ಬಸವರಾಜ ದೇಶಮುಖ, ಭವಾನಿ ಎಸ್. ಅಪ್ಪ, ಶಿವಾನಿ ಎಸ್.ಅಪ್ಪ, ಮಹೇಶ್ವರಿ ಎಸ್.ಅಪ್ಪ, ಡಾ.ಅಲ್ಲಮಪ್ರಭು ದೇಶಮುಖ ಸೇರಿದಂತೆ ಸಂಸ್ಥಾನದ ಪ್ರಮುಖರು ಇದ್ದರು.

ಸಹಸ್ರಾರು ಭಕ್ತರು ಇದೇ ವೇಳೆಯಲ್ಲಿ ಜೈಘೋಷಣೆ ಹಾಕಿದರು.

ರಥೋತ್ಸವ ಪ್ರಾರಂಭವಾಗುವ ಮೊದಲು ದೇವಾಲಯದಲ್ಲಿ ಅಲಂಕರಿಸಲಾದ ರಥದಲ್ಲಿ ಸಾಂಪ್ರದಾಯಿಕ ವಿಧಿ ವಿಧಾನಗಳು ಮತ್ತು ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಇದೇ ವೇಳೆಯಲ್ಲಿ ದೇವಸ್ಥಾನದ ಆವರಣದಲ್ಲಿ ನಂದಿಕೋಲು, ಪಲ್ಲಕ್ಕಿ ಉತ್ಸವ ನಡೆಯಿತು.

ಶ್ರೀ ಶರಣಬಸವೇಶ್ವರರ ಮಹಾರಥೋತ್ಸವಕ್ಕೆ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್, ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಕೆಲವು ಭಕ್ತರು ಕಾಲ್ನಡಿಗೆಯ ಮೂಲಕ ದೇವಸ್ಥಾನಕ್ಕೆ ತಲುಪಿದರೆ ಇನ್ನುಳಿದವರು ಕಾರು, ಕ್ರಷರ್, ಜೀಪ್, ಮಿನಿ ಬಸ್, ಮತ್ತಿತ್ತರ ವಾಹನಗಳ ಮೂಲಕ ಆಗಮಿಸಿದ್ದರು.

ವಿವಿಧ ವಾಧ್ಯಗಳೊಂದಿಗೆ ನೆರವೇರಿದ ರಥೋತ್ಸವದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ನಗರ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದರು.

ಡಾ.ಶರಣಬಸವಪ್ಪ ಅಪ್ಪ ಅವರ ಅನುಪಸ್ಥಿತಿಯಲ್ಲಿ ರಥೋತ್ಸವ:

ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ನಂತರ ಇದೇ ಮೊದಲ ಬಾರಿಗೆ, ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾದ ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪಾಜಿಯಯವರ ಅನುಪಸ್ಥಿತಿಯಲ್ಲಿ ಜಾತ್ರೆಗೆ ಚಾಲನೆ ದೊರಕಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X